ನೇತ್ರಾವತಿ ಕಾಮಗಾರಿ, ಆದಷ್ಟು ಬೇಗ ಮುಗಿಸಿ ಕೊಡಲು ರಾ.ಹೆ. ಅಧಿಕಾರಿಗಳಿಗೆ ಸೂಚನೆ-ಕಹಳೆ ನ್ಯೂಸ್
ಮಂಗಳೂರು: ರಾಷ್ಟ್ರೀಯ ಹೆದ್ದಾರಿ ಎನ್.ಹೆಚ್.17ರ ನೇತ್ರಾವತಿಯ ಹಳೆಯ ಸೇತುವೆಯ ದುರಸ್ತಿ ಕಾರ್ಯ ವಿಳಂಬವಾಗುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರು ಬಂದ ಹಿನ್ನಲೆ ಸಭಾಧ್ಯಕ್ಷ ಯು.ಟಿ. ಖಾದರ್ ಎ.15ರ ಮಂಗಳವಾರ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳೊಂದಿಗೆ ಮಾತುಕತೆ ನಡೆಸಿ, ಶೀಘ್ರ ಕಾಮಗಾರಿ ಪೂರ್ಣಗೊಳಿಸಲು ಸೂಚನೆ ನೀಡಿದ್ದಾರೆ. ಸೇತುವೆಯ ಅಡಿ ಭಾಗದಲ್ಲಿ ಸಮಸ್ಯೆ ಕಾಣಿಸಿಕೊಂಡಿದ್ದು, ನುರಿತ ತಂಡದ 4-5 ಜನ ಮಾತ್ರ ನಿಂತು ಕೆಲಸ ಮಾಡುವ ಅವಕಾಶವಿದ್ದು,ಆದಾಗ್ಯೂ ಈ ತಿಂಗಳ 25ರ ಒಳಗಾಗಿ...