ಕಲ್ಲಡ್ಕ ಶ್ರೀರಾಮ ಹಿರಿಯ ಪಾಥಮಿಕ ಶಾಲೆಯಲ್ಲಿ ಭಜನೆ ಹಾಗೂ ಅಕ್ಟೋಬರ್ ತಿಂಗಳಲ್ಲಿ ಹುಟ್ಟಿದ ಮಕ್ಕಳ ಸಾಮೂಹಿಕ ಹುಟ್ಟುಹಬ್ಬ ಆಚರಣೆ-ಕಹಳೆ ನ್ಯೂಸ್
ಕಲ್ಲಡ್ಕ ಶ್ರೀರಾಮ ಹಿರಿಯ ಪಾಥಮಿಕ ವೇದವ್ಯಾಸ ಧ್ಯಾನಮಂದಿರದಲ್ಲಿ ಭಜನೆ ಹಾಗೂ ಅಕ್ಟೋಬರ್ ತಿಂಗಳಲ್ಲಿ ಹುಟ್ಟಿದ ಮಕ್ಕಳ ಹುಟ್ಟುಹಬ್ಬವನ್ನು ಸಾಮೂಹಿಕವಾಗಿ ಆಚರಿಸಲಾಯಿತು. ಶ್ರೀರಾಮ ಪದವಿ ಮಹಾವಿದ್ಯಾಲಯದ ಕನ್ನಡ ಪ್ರಧ್ಯಾಪಕರಾದ ರಶ್ಮಿತಾ ಮಾತನಾಡಿ, “ನಾವು ಪಾಶ್ಚಿಮಾತ್ಯ ಸಂಸ್ಕೃತಿಗೆ ರೂಢಿಯಾಗಿದ್ದೇವೆ. ಅದನ್ನು ಬಿಟ್ಟು ನಮ್ಮ ಸಂಸ್ಕೃತಿಯನ್ನು ಉಳಿಸಿಕೊಳ್ಳುವ. ಸಾಮೂಹಿಕ ಆಚರಣೆ ಹಾಗೂ ಸಹಭೋಜನೆ ಇವುಗಳಿಂದ ಧನಾತ್ಮಕ ಪರಿಣಾಮ ಉಂಟಾಗುತ್ತದೆ. ಇಂದು ನೀವು ಭಾರತ ಮಾತೆಗೆ ಸಮರ್ಪಿಸಿದ ನಿಧಿಸಂಗ್ರಹವು ಅಶಕ್ತರಿಗೆ ಸಲ್ಲುತ್ತದೆ. ಇದೇ ರೀತಿ ನವi್ಮ...