Monday, February 3, 2025

ಸುದ್ದಿ

ದಕ್ಷಿಣ ಕನ್ನಡಮಂಗಳೂರುಸುದ್ದಿ

ಮುಡಾ ಹಗರಣದಲ್ಲಿ ಹೈಕೋರ್ಟ್‌ ತೀರ್ಪು ಬಿಜೆಪಿ ಹೋರಾಟಕ್ಕೆ ಸಂದ ಜಯ : ಸಿದ್ದರಾಮಯ್ಯನವರು ತಕ್ಷಣ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು: ಸಂಸದ ಕ್ಯಾ. ಚೌಟ- ಕಹಳೆ ನ್ಯೂಸ್

ಮಂಗಳೂರು: ಮೈಸೂರು ಮುಡಾ ಭೂಹಗರಣದ ಬಗ್ಗೆ ರಾಜ್ಯಪಾಲರು ಪ್ರಾಷಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿರುವ ಹಿನ್ನಲೆ ಸಿಎಂ ಸಿದ್ದರಾಮಯ್ಯನವರು ತಕ್ಷಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಒತ್ತಾಯಿಸಿದ್ದಾರೆ. ಸಿದ್ದರಾಮಯ್ಯನವರ ಭೂಹಗರಣದಲ್ಲಿ ಹೈಕೋರ್ಟ್‌ ಮಹತ್ವದ ತೀರ್ಪು ನೀಡಿರುವ ಬಗ್ಗೆ ಪ್ರತಿಕ್ರಿಯಿಸಿರುವ ಕ್ಯಾ. ಚೌಟ ಅವರು, ಹೈಕೋರ್ಟ್‌ ಪೀಠ ಸಿಎಂ ಸಿದ್ದರಾಮಯ್ಯನವರು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿರುವುದು ರಾಜ್ಯದಲ್ಲಿ ಕಾಂಗ್ರೆಸ್‌...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಬಂಟ್ವಾಳ: ಕಿಟಕಿಯ ಸರಳನ್ನು ಬಗ್ಗಿಸಿ ಮನೆ ಒಳಗೆ ಪ್ರವೇಶಿಸಿ ಲಕ್ಷಾಂತರ ರೂ ಮೌಲ್ಯದ ನಗನಗದು ಕಳ್ಳತನ- ಕಹಳೆ ನ್ಯೂಸ್

ಬಂಟ್ವಾಳ: ಸಜೀಪಮುನ್ನೂರು ಗ್ರಾಮದ ಮನೆಯೊಂದರ ಕಿಟಕಿಯ ಸರಳನ್ನು ಬಗ್ಗಿಸಿ ಜಖಂ ಮಾಡಿ ಒಳ ಪ್ರವೇಶಿಸಿ ಲಕ್ಷಾಂತರ ರೂ ಮೌಲ್ಯದ ನಗನಗದು ಕಳ್ಳತನ ನಡೆಸಿರುವ ಘಟನೆ ಬೆಳಕಿಗೆ ಬಂದಿದ್ದು ಬಂಟ್ವಾಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುಮಾರು 24 ಪವನ್ ತೂಕದ 2 ಚಿನ್ನದ ಬಳೆಗಳು ಮತ್ತು ರೂ 25000 ನಗದು ಕಳ್ಳತನವಾಗಿದೆ. ಬಂಟ್ವಾಳದ ಸಜೀಪಮುನ್ನುರು ಗ್ರಾಮ ನಿವಾಸಿ ಜಯಲಕ್ಷ್ಮೀ (52 ವ) ಎಂಬವರ ಮನೆಯಲ್ಲಿ ಕೃತ್ಯ ನಡೆದಿದೆ. ಅವರು...
ಸುದ್ದಿ

ಮುಡಾ ಹಗರಣ : ಸಿ.ಎಂ. ಸಿದ್ದರಾಮಯ್ಯಗೆ ಬಿಗ್ ಶಾಕ್ ನೀಡಿದ ಹೈಕೋರ್ಟ್ ತೀರ್ಪು – ಕಹಳೆ ನ್ಯೂಸ್

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿರುವ ಸಿಎಂ ಸಿದ್ದರಾಮಯ ಅರ್ಜಿ ವಿಚಾರಣೆ ತೀರ್ಪು ಪ್ರಕಟವಾಗಿದೆ. ಸಿದ್ದರಾಮಯ್ಯ ವಿಚಾರಣೆ ನಡೆಸಬಹುದು ಎಂದು ರಾಜ್ಯಪಾಲರ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. ಹೈಕೋರ್ಟ್ ನ್ಯಾ. ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ, ಮುಡಾ ಹಗರಣ ಸಂಬಂಧ ತೀರ್ಪು ಪ್ರಕಟಿಸಿದೆ. ಸಿದ್ದರಾಮಯ್ಯ ಅರ್ಜಿ ವಜಾಗೊಂಡಿದೆ. ಸಿದ್ದರಾಮಯ್ಯ ವಿರುದ್ಧ ಹೈಕೋರ್ಟ್ ತೀರ್ಪು ಪ್ರಕಟಿಸಿದೆ. ರಾಜ್ಯಪಾಲರ...
ಬೆಂಗಳೂರುಸುದ್ದಿ

ಮುಡಾ ಕೇಸ್: ಸಿಎಂ ಸಿದ್ದರಾಮಯ್ಯ ಭವಿಷ್ಯ ಕೌಂಟ್ ಡೌನ್ ಶುರು – ಕಹಳೆ ನ್ಯೂಸ್

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದ ಕ್ರಮ ಸರಿಯೋ ತಪ್ಪೋ ಎಂದು ಇಂದು ಕೋರ್ಟ್ ಮಹತ್ವದ ತೀರ್ಪು ನೀಡಲಿದೆ. ಈಗಾಗಲೇ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್, ಇಂದು ತೀರ್ಪು ಪ್ರಕಟಿಸಲಿದೆ. ನ್ಯಾ. ಎಂ. ನಾಗಪ್ರಸನ್ನ ಇಂದು ತೀರ್ಪು ನೀಡಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ತೀರ್ಪು ಹೊರಬೀಳುವ ನಿರೀಕ್ಷೆಯಿದೆ. ಈ ತೀರ್ಪು ಸಿದ್ದರಾಮಯ್ಯಗೆ ರಾಜಕೀಯವಾಗಿಯೂ ಮಹತ್ವದ್ದಾಗಲಿದೆ. ಮುಡಾ ಹಗರಣ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸಾಮಾಜಿಕ ಕಾರ್ಯಕರ್ತರಾದ ಸ್ನೇಹಮಯಿ...
ಕ್ರೈಮ್ದಕ್ಷಿಣ ಕನ್ನಡಸುದ್ದಿಸುಳ್ಯ

ಬಸ್ಸಿನಲ್ಲಿ ಪ್ರಯಾಣಿಕಳಾಗಿದ್ದ ವಿದ್ಯಾರ್ಥಿನಿ ಜೊತೆ ಸಹ ಪ್ರಯಾಣಿಕ ಅಬ್ದುಲ್ ನಿಯಾಝ್ ಅನುಚಿತ ವರ್ತನೆ ; ಕಾಮುಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು – ಕಹಳೆ ನ್ಯೂಸ್

ಸುಳ್ಯ: ಬಸ್ಸಿನಲ್ಲಿ ಸಹ ಪ್ರಯಾಣಿಕಳಾಗಿದ್ದ ವಿದ್ಯಾರ್ಥಿನಿ ಜೊತೆ ಅನುಚಿತವಾಗಿ ವರ್ತಿಸಿದ ಆರೋಪದಲ್ಲಿ ಯುವಕನೋರ್ವನಿಗೆ ಸಾರ್ವಜನಿಕರು ಹಿಗ್ಗಾಮುಗ್ಗಾ ಥಳಿಸಿದ ಘಟನೆ ಇಂದು ಬೆಳಗ್ಗೆ ಸುಳ್ಯ ಬಸ್ ನಿಲ್ದಾಣದಲ್ಲಿ ನಡೆದಿದೆ. ಅಬ್ದುಲ್ ನಿಯಾಝ್ ಹಲ್ಲೆಗೊಳಗಾದ ಯುವಕ. ಆತನನ್ನು ಹಲ್ಲೆಕೋರರಿಂದ ರಕ್ಷಿಸಿದ ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದು, ಪ್ರಾಥಮಿಕ ಚಿಕಿತ್ಸೆ ಪಡೆದು ಆತ ಅಲ್ಲಿಂದ ತೆರಳಿರುವುದಾಗಿ ತಿಳಿದುಬಂದಿದೆ.   ಘಟನೆ ವಿವರ: ಬೆಂಗಳೂರಿನಿಂದ ಸುಬ್ರಹ್ಮಣ್ಯ ಮೂಲಕ ಸುಳ್ಯಕ್ಕೆ ಬರುತ್ತಿದ್ದ ಸರಕಾರಿ ಬಸ್ಸಿಗೆ ಬಿಸಿಲೆ ಘಾಟ್ ಬಳಿ ಸುಳ್ಯದ...
ದಕ್ಷಿಣ ಕನ್ನಡಮಂಗಳೂರುವಾಣಿಜ್ಯಸುದ್ದಿ

ಎಂಸಿಸಿ ಬ್ಯಾಂಕ್ ಗೆ ದಾಖಲೆಯ 10.45 ಕೋಟಿ ರೂ. ನಿವ್ವಳ ಲಾಭ: ಶೇ.10 ಡಿವಿಡೆಂಡ್ ಘೋಷಣೆ – ಕಹಳೆ ನ್ಯೂಸ್

ಮಂಗಳೂರು, ಸೆ.23: ಎಂ.ಸಿ.ಸಿ. ಬ್ಯಾಂಕ್ ಎಂದು ಪ್ರಖ್ಯಾತವಾಗಿರುವ ಮಂಗಳೂರು ಕೆಥೊಲಿಕ್ ಕೋ-ಆಪರೇಟಿವ್ ಬ್ಯಾಂಕ್ ಅತ್ಯುತ್ತಮ ಪ್ರಗತಿ ಸಾಧಿಸಿದ್ದು 2023-24ನೇ ವಿತ್ತೀಯ ವರ್ಷದಲ್ಲಿ ಶೇ.10 ಲಾಭಾಂಶ ಘೋಷಿಸಿದೆ. ಜೊತೆಗೆ ಬ್ಯಾಂಕ್ ಲಾಭ ಗಳಿಕೆಯಲ್ಲಿ ಅಭೂತಪೂರ್ವ ಪ್ರಗತಿ ಸಾಧಿಸಿದ್ದು, ಬ್ಯಾಂಕಿನ ನಿವ್ವಳ ಲಾಭ.10.45 ಕೋಟಿ ರೂ. ಆಗಿರುತ್ತದೆ. ಇದು ಬ್ಯಾಂಕಿನ ಚರಿತ್ರೆಯಲ್ಲೇ ಅತ್ಯಂತ ಹೆಚ್ಚಿನ ಲಾಭ ಎಂದು ಎಂ.ಸಿ.ಸಿ. ಬ್ಯಾಂಕ್ ಅಧ್ಯಕ್ಷ ಸಹಕಾರ ರತ್ನ ಅನಿಲ್ ಲೋಬೊ ತಿಳಿಸಿದ್ದಾರೆ. ಅವರು ರವಿವಾರ ಸಂತ...
ಸುದ್ದಿ

`ಮಕ್ಕಳ ಪೋರ್ನ್’ ವಿಡಿಯೋ ನೋಡುವುದು, ಡೌನ್ಲೋಡ್ ಮಾಡುವುದು ಅಪರಾಧ : ‘ಸುಪ್ರೀಂ ಕೋರ್ಟ್’ನಿಂದ ಐತಿಹಾಸಿಕ ತೀರ್ಪು- ಕಹಳೆ ನ್ಯೂಸ್

ನವದೆಹಲಿ : ಮಕ್ಕಳ ಅಶ್ಲೀಲ ಚಿತ್ರಗಳನ್ನು ಡೌನ್‌ಲೋಡ್ ಮಾಡುವುದು ಮತ್ತು ನೋಡುವುದು ಮಕ್ಕಳ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಅಪರಾಧವಾಗಿದೆ, ಮಕ್ಕಳ ಮೇಲಿನ ದೌರ್ಜನ್ಯವನ್ನು ತಡೆಯುವ ಕಠಿಣ ಕಾನೂನಿನ ಕುರಿತು ಸುಪ್ರೀಂ ಕೋರ್ಟ್ ಇಂದು ಮಹತ್ವದ ತೀರ್ಪು ನೀಡಿದೆ. ಮಕ್ಕಳ ಅಶ್ಲೀಲ ಚಿತ್ರಗಳನ್ನು ಡೌನ್‌ಲೋಡ್ ಮಾಡುವುದು ಮತ್ತು ವೀಕ್ಷಿಸುವುದು ಪೋಕ್ಸೊ ಕಾಯ್ದೆಯಡಿ ಅಪರಾಧವಲ್ಲ ಎಂದು ತೀರ್ಪು ನೀಡಿದ ಮದ್ರಾಸ್ ಹೈಕೋರ್ಟ್ ಆದೇಶವನ್ನು ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ...
ರಾಜ್ಯಸಂತಾಪಸುದ್ದಿಹುಬ್ಬಳ್ಳಿ

ಹುಬ್ಬಳ್ಳಿ ಕಲ್ಯಾಣ ನಗರದ ರಾಮಕೃಷ್ಣ ಆಶ್ರಮದ ಅಧ್ಯಕ್ಷ ಸ್ವಾಮಿ ರಘುವೀರಾನಂದ ಮಹಾರಾಜರು ಇನ್ನಿಲ್ಲ – ಕಹಳೆ ನ್ಯೂಸ್

ಹುಬ್ಬಳ್ಳಿ: ಇಲ್ಲಿನ ವಿದ್ಯಾನಗರ ಕಲ್ಯಾಣ ನಗರದ ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷರಾದ ಶ್ರೀ ಸ್ವಾಮಿ ರಘುವೀರಾನಂದ ಮಹಾರಾಜರು (60 ವ) ಸೋಮವಾರ (ಸೆ.23) ಬೆಳಗ್ಗೆ 10 ಗಂಟೆಗೆ ಸುಮಾರಿಗೆ ರಾಮಕೃಷ್ಣ ಚರಣದಲ್ಲಿ ಲೀನರಾದರು. ಶ್ರೀ ಸ್ವಾಮಿ ರಘುವೀರಾನಂದ ಮಹಾರಾಜರ ಪಾರ್ಥಿವ ಶರೀರವನ್ನು ಭಕ್ತರ ದರ್ಶನಕ್ಕೆಂದು ಆಶ್ರಮದ ಆವರಣದಲ್ಲಿ ಇಡಲಾಗಿದೆ. ಈ ಸಂದರ್ಭದಲ್ಲಿ ಧಾರವಾಡ ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷ ಪರಮಪೂಜ್ಯ ವಿಜಯಾನಂದ ಸರಸ್ವತಿ, ಹುಬ್ಬಳ್ಳಿಯ ಸ್ವಾಮಿ ಬುದ್ಧಿಯೋಗಾನಂದಜಿ ಮಹಾರಾಜ, ತೇಜಸಾನಂದಜಿ...
1 146 147 148 149 150 2,763
Page 148 of 2763