ತುಮಕೂರಿನಲ್ಲಿ ಭೀಕರ ಕಾರು ಅಪಘಾತ: ಆರು ಮಂದಿ ಸ್ಥಳದಲ್ಲೇ ಸಾವು-ಕಹಳೆ ನ್ಯೂಸ್
ತುಮಕೂರು: ಗೌರಿ ಗಣೇಶ ಹಬ್ಬದ ಸಂಭ್ರಮ ಮುಗಿಸಿ ತಮ್ಮ ಸ್ವಗ್ರಾಮದಿಂದ ಬೆಂಗಳೂರಿಗೆ ಹೊರಟ ಕುಟುಂಬ ಭೀಕರ ಅಪಘಾತದಲ್ಲಿ ಮಾರ್ಗ ಮಧ್ಯದಲ್ಲೇ ಉಸಿರು ಚೆಲ್ಲಿದ ಘಟನೆ ತುಮಕೂರಿನಲ್ಲಿ ನಡೆದಿದೆ. ಜಿಲ್ಲೆಯ ಮಧುಗಿರಿ ತಾಲೂಕಿನ ಕೆರೆಗಳಪಾಳ್ಯ ಬಳಿ ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾಗಿದ್ದು, ಓರ್ವ ಬಾಲಕಿ ಸೇರಿ ಆರು ಜನರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಪಾವಗಡ ತಾಲೂಕಿನ ಎತ್ತಿನಹಳ್ಳಿ ಗ್ರಾಮದ ಜನಾರ್ದನ ರೆಡ್ಡಿ(60), ಸಿಂಧೂ (33), ವೇದಾಸ್ ರೆಡ್ಡಿ(12), ಆನಂದ್(30), ಕಾರೇನಹಳ್ಳಿ ಗ್ರಾಮದ ನಾಗರಾಜ್...