Tuesday, February 4, 2025

ಸುದ್ದಿ

ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿಹಾಸನ

ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣಗೆ ಶಾಕ್, ಜಾಮೀನು ಅರ್ಜಿ ವಜಾ! – ಕಹಳೆ ನ್ಯೂಸ್

ಬೆಂಗಳೂರು:- ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಲಾಗಿದೆ. ಅತ್ಯಾಚಾರ ಕೇಸ್​ನಲ್ಲಿ‌ ನಿರೀಕ್ಷಣಾ ಜಾಮೀನು ಕೋರಿ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ಮಾಡಿ ಜಡ್ಜ್ ಸಂತೋಷ್ ಗಜಾನನ ಭಟ್ ವಜಾಗೊಳಿಸಿದ್ದಾರೆ. ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಕೇಸ್​ ದಾಖಲಾಗಿತ್ತು. ಇತ್ತೀಚೆಗೆ ಕೂಡ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು....
ಕ್ರೈಮ್ಬೆಂಗಳೂರುರಾಜ್ಯಸಿನಿಮಾಸುದ್ದಿ

ವಿಚಾರಣೆ ವೇಳೆ ಸ್ಟೋನಿ ಬ್ರೂಕ್ ನಲ್ಲಿ ಮೌನವಾಗಿ ಕೂತ ದರ್ಶನ್ : ಫೋಟೋ ವೈರಲ್ – ಕಹಳೆ ನ್ಯೂಸ್

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ತನಿಖೆ ಕೊನೆ ಹಂತಕ್ಕೆ ಬಂದು ತಲುಪಿದ್ದು ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಪೊಲೀಸರು ಸಲ್ಲಿಸಿರುವ ಆರೋಪ ಪಟ್ಟಿಯ ಕೆಲ ಪ್ರಮುಖ ಅಂಶಗಳು ಒಂದೊಂದಾಗಿ ಹೊರ ಬೀಳುತ್ತಿದೆ. ಈ ಮೊದಲು ರೇಣುಕಾಸ್ವಾಮಿ ದರ್ಶನ್ ಎಂಡ್ ಗ್ಯಾಂಗ್ ಸದಸ್ಯರ ಮುಂದೆ ಅಂಗಲಾಚುತ್ತಿರುವ ಫೋಟೋ ವೈರಲ್ ಆಗಿದ್ದು ಇದೀಗ ಮತ್ತೊಂದು ಫೋಟೋ ವೈರಲ್ ಆಗಿದೆ.   ಸ್ಟೋನಿ ಬ್ರೂಕ್​ನಲ್ಲಿ ದರ್ಶನ್ ಹಾಗೂ ಗೆಳೆಯರು ಪಾರ್ಟಿ...
ದಕ್ಷಿಣ ಕನ್ನಡಪುತ್ತೂರುಸುದ್ದಿ

`ಶಿಕ್ಷಕರ ದಿನಾಚರಣೆ’ಯಂದೇ ಶಿಕ್ಷಕರಿಗೆ ನೀಡಿದ ಭರ್ಜರಿ ಗುಡ್ ನ್ಯೂಸ್ `CM ಸಿದ್ದರಾಮಯ್ಯ’-ಕಹಳೆ ನ್ಯೂಸ್

ಬೆಂಗಳೂರು : ಶಿಕ್ಷಕರ ದಿನಾಚರಣೆಯಂದೇ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಮುಂಬಡ್ತಿ ಹಾಗೂ ಇತರೆ ಸೇವಾ ಬೇಡಿಕೆಗಳಿಗೆ ಸಂಬಂಧಿಸಿದಂತೆ ಒಂದು ತಿಂಗಳೊಳಗೆ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿಯೋಗದೊಂದಿಗೆ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ಕಾನೂನು ತೊಡಕು ಮತ್ತಿತ್ತರ ವಿಷಯಗಳ ಬಗ್ಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹಾಗೂ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಗೋಳ್ತಮಜಲು ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಕಲ್ಲಡ್ಕ ವಲಯ ಮಟ್ಟದ ಬಾಲಕರ ಹಾಗೂ ಬಾಲಕಿಯರ ಕಬಡ್ಡಿ ಪಂದ್ಯಾಟದ ಹಾಗೂ ವಿವೇಕ ಕೊಠಡಿ ಉದ್ಘಾಟನಾ ಕಾರ್ಯಕ್ರಮ-ಕಹಳೆ ನ್ಯೂಸ್

ಬಂಟ್ವಾಳ : ಕ್ರೀಡೆಯಲ್ಲಿ ಸೋಲು ಗೆಲುವನ್ನು ಸಮನಾಗಿ ಸ್ವೀಕರಿಸುವ ಮನೋಭಾವವನ್ನು ಬೆಳೆಸಿಕೊಳ್ಳಲು ಸಹಕಾರಿಯಾಗಿದೆ, ದೈಹಿಕ ಚತುರತೆ ಮತ್ತು ಮಾನಸಿಕ ಮನೋಬಲವನ್ನು ಹತೋಟಿಯಲ್ಲಿಡಲು ಉತ್ತಮ ಉದಾಹರಣೆಯಾಗಿದೆ. ಎಂದು ಗೋಳ್ತಮಜಲು ಸರಕಾರಿ ಪ್ರೌಢಶಾಲಾ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಚಂದ್ರಶೇಖರ್ ಟೈಲರ್ ಹೇಳಿದರು. ಅವರು ಬಂಟ್ವಾಳ ತಾಲೂಕಿನ ಗೋಳ್ತಮಜಲು ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಕಲ್ಲಡ್ಕ ವಲಯ ಮಟ್ಟದ ಬಾಲಕರ ಹಾಗೂ ಬಾಲಕಿಯರ ಕಬಡ್ಡಿ ಪಂದ್ಯಾಟದ ಹಾಗೂ ನೂತನ ವಿವೇಕ ಕೊಠಡಿ ಉದ್ಘಾಟನಾ ಸಭಾ...
ಕ್ರೀಡೆದಕ್ಷಿಣ ಕನ್ನಡಪುತ್ತೂರುಸುದ್ದಿ

ತಾಲೂಕು ಮಟ್ಟದ ಫುಟ್ಬಾಲ್‌ ಪಂದ್ಯಾಟ: ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ದ್ವಿತೀಯ ಸ್ಥಾನ-ಕಹಳೆ ನ್ಯೂಸ್

ಶಾಲಾ ಶಿಕ್ಷಣ ಇಲಾಖೆ(ಪದವಿಪೂರ್ವ) ದಕ್ಷಿಣ ಕನ್ನಡ ಜಿಲ್ಲೆ ಹಾಗೂ ವಿವೇಕಾನಂದ ಪದವಿಪೂರ್ವ ಕಾಲೇಜು, ಪುತ್ತೂರು ಇವರ ಸಹಯೋಗದಲ್ಲಿ ಪುತ್ತೂರು ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಫುಟ್ಬಾಲ್‌ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡವು ಭಾಗವಹಿಸಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿರುತ್ತದೆ. ಈ ತಂಡದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಾದ ಶಮಂತ್‌ಬಿ.ಎಲ್, ವಿಶ್ರುತ್‌.ಎನ್‌, ಜಿಷ್ಣುಪ್ರಕಾಶ್‌, ಜೀವನ್‌. ಕೆ, ರಿಕಿತ್‌. ಆರ್, ಚಿಂತನ್‌ ದೇವಯ್ಯ ಎನ್‌.ಜೆ, ಧನುಶ್‌ಕುಮಾರ್‌. ಜೆ.ವಿ , ಪುನೀತ್‌ಪೊನ್ನಪ್ಪ, ದೀಕ್ಷಿತ್ ಎಸ್...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶಿಕ್ಷಕಿ ಸಂಗೀತ ಶರ್ಮ ಪಿ ಜಿ ಅವರಿಗೆ ರಾಜ್ಯಮಟ್ಟದ “ಶಿಕ್ಷಕರತ್ನ” ಪ್ರಶಸ್ತಿ-ಕಹಳೆ ನ್ಯೂಸ್

ಬಂಟ್ವಾಳ : ಕಲಾ ಸಂಕುಲ ಸಂಸ್ಥೆ (ರಿ.) ರಾಯಚೂರು ಇವರ ವತಿಯಿಂದ ರಾಜ್ಯಮಟ್ಟದ ಶಿಕ್ಷಕರ ದಿನಾಚರಣೆ ರಾಯಚೂರು ನಗರದ ರಂಗಮಂದಿರದಲ್ಲಿ    ಸೆ. 8 ರಂದು ಕಾರ್ಯಕ್ರಮ ನಡೆಯಲಿದ್ದು ಈ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಬಂಟ್ವಾಳ ತಾಲೂಕಿನ ವೀರಕಂಬ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಜಿ ಯ ಶಿಕ್ಷಕಿ ಸಂಗೀತ ಶರ್ಮ ಪಿ ಜಿ ಅವರನ್ನು ಆಯ್ಕೆ ಮಾಡಲಾಗಿದೆ. ಶಾಲಾ ಶೈಕ್ಷಣಿಕ ಚಟುವಟಿಕೆಗಳ ಜೊತೆಗೆ ಸಂಘ ಸಂಸ್ಥೆಗಳ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ: ಪೊಳಲಿ ಶ್ರೀ ರಾಜರಾಜೇಶ್ವರಿ ಕ್ಷೇತ್ರದಲ್ಲಿ ತೆನೆ ಹಬ್ಬ ಆಚರಣೆ-ಕಹಳೆ ನ್ಯೂಸ್

ಬಂಟ್ವಾಳ: ಇಂದು ಪೊಳಲಿ ಶ್ರೀ ರಾಜರಾಜೇಶ್ವರಿ ಕ್ಷೇತ್ರದಲ್ಲಿ ತೆನೆ ಹಬ್ಬ ಆಚರಣೆ ಮಾಡಲಾಯಿತು, ಪ್ರತಿ ವರ್ಷವೂ ಗಣೇಶ ಚತುರ್ಥಿಯ ಎರಡು ದಿನದ ಮೊದಲು ಈ ಆಚರಣೆಯನ್ನು ನಡೆಸಲಾಗುವುದು. ಈ ದಿನವನ್ನು ಕುರಲ್​​​​​​ ಪರ್ಬ ಎಂದು ಕರೆಯಾಲಾಗುತ್ತದೆ. ಜತೆಗೆ ಇದನ್ನು ಪುರಲ್ದ ಕುರಲ್​​ ಎಂದು ಕರೆಯಲಾಗುತ್ತದೆ. ಸಾವಿರ ಸೀಮೆಯ ಒಡತಿ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಿಯ ಮುಂದೆ ಈ ಕುರಲ್​​​ನ್ನು ಇಟ್ಟು, ಇಡಿ ಊರಿಗೆ ಒಳ್ಳೆಯದನ್ನು ಮಾಡಿ, ಸುಖ ಸಂತೋಷವನ್ನು ನೀಡಿ. ಮಳೆ...
ಕ್ರೈಮ್ಬೆಂಗಳೂರುಸುದ್ದಿ

ಬೆಂಗಳೂರು ವೇಶ್ಯಾವಾಟಿಕೆ ದಂಧೆ ಮೇಲೆ ದಾಳಿ ; ಕರಿಷ್ಮಾಶೇಖ್, ಸೂರಜ್ ಶಾಹಜೀ ಸಹಿತ ಬೆಳ್ತಂಗಡಿ ಮೂಲದ ಟೆಕ್ಕಿ ಸುಬ್ರಮಣ್ಯ ಶಾಸ್ತ್ರಿ ಮೂವರ ಬಂಧನ- ಕಹಳೆ ನ್ಯೂಸ್

ಹೊಂಗಸಂದ್ರದ ಮನೆಯೊಂದರಲ್ಲಿ ವೇಶ್ಯಾವಾಟಿಕೆ ದಂಧೆ ಬಗ್ಗೆ ಮಾಹಿತಿ ಪಡೆದು ಶುಕ್ರವಾರ ಸಿಸಿಬಿ ಡಿಸಿಪಿ ಅಬ್ದುಲ್ ಅಹದ್ ಮಾರ್ಗದರ್ಶನದಲ್ಲಿ ಮಹಿಳಾ ಸಂರಕ್ಷಣಾ ದಳದ ಎಸಿಪಿ ಎಚ್.ಎನ್.ಧರ್ಮೇಂದ್ರ ನೇತೃತ್ವದ ತಂಡ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪೋಕ್ಸ್ ಪ್ರಕರಣ ದಾಖಲು: ಆರೋಪಿಗಳಾದ ಕರಿಷ್ಮಾ ಹಾಗೂ ಸೂರಜ್ ಮೂಲತಃ ಪಶ್ಚಿಮ ಬಂಗಾಳದ ರಾಜ್ಯದವರು ಎನ್ನಲಾಗಿದ್ದು, ಹಲವು ವರ್ಷಗಳ ಹಿಂದೆ ನಗರಕ್ಕೆ ಉದ್ಯೋಗ ಹರಿಸಿಕೊಂಡು ಬಂದಿದ್ದು ನಂತರ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದರು....
1 174 175 176 177 178 2,766
Page 176 of 2766