ಪುತ್ತೂರಿನ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ- ಕಹಳೆ ನ್ಯೂಸ್
ಪುತ್ತೂರು: ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ನಗರದ ನಟ್ಟೋಜ ಫೌಂಡೇಶನ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿ ಹಬ್ಬದ ಆಚರಣೆಯ ಹಿನ್ನೆಲೆ ಹಾಗೂ ಮಹತ್ವವನ್ನು ಸಾರುವ ಸಲುವಾಗಿ, ಭಕ್ತಿ ಸಿಂಚನ ಕಾರ್ಯಕ್ರಮ ನಡೆಯಿತು. ಭಗವಧ್ಗೀತೆಯ ಪ್ರಥಮ ಅಧ್ಯಾಯದ ಪಠಣ, ಭಜನೆ ಹಾಡು, ಕುಣಿತ ಭಜನೆಗಳು ನಡೆದವು. ಮುದ್ದು ಕೃಷ್ಣ, ಮುದ್ದು ರಾಧೆಯರಿಗೆ ಆರತಿ ಬೆಳಗಿ, ತಿಲಕವಿಟ್ಟು ಹರಸಲಾಯಿತು. ಕಾರ್ಯಕ್ರಮದ ಅಂಗವಾಗಿ ಶ್ರೀಕೃಷ್ಣನ ಚಿತ್ರಕ್ಕೆ ಬಣ್ಣ ಹಚ್ಚುವ ಸ್ಪರ್ಧೆ, ಚಿತ್ರಕಲಾ ಸ್ಪರ್ಧೆ,...