Wednesday, February 5, 2025

ಸುದ್ದಿ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಸರಕಾರಿ ಪ್ರೌಡ ಶಾಲೆ ಸಾಲೆತ್ತೂರಿನಲ್ಲಿ ನಡೆದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ -ಕಹಳೆ ನ್ಯೂಸ್

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ.) ವಿಟ್ಲ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬಂಟ್ವಾಳ, ಲಯನ್ಸ್ ಕ್ಲಬ್ ವಿಟ್ಲ. ಪ್ರಗತಿ ಬಂದು ಸ್ವಸಹಾಯ ಸಂಘ ಒಕ್ಕೂಟ ಸಾಲೆತ್ತೂರು, ಹಾಗೂ ಸರಕಾರಿ ಪ್ರೌಡ ಶಾಲೆ ಸಾಲೆತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಸರಕಾರಿ ಪ್ರೌಡ ಶಾಲೆ ಸಾಲೆತ್ತೂರು ಇಲ್ಲಿ ನಡೆಸಲಾಯಿತು. ಕಾರ್ಯಕ್ರಮ ಉದ್ಘಾಟಿಸಿದ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ತಾಲೂಕು ಸದಸ್ಯ ದೇವಿಪ್ರಸಾದ್ ಶೆಟ್ಟಿ...
ಉಡುಪಿಕಾರ್ಕಳಕ್ರೈಮ್ಸುದ್ದಿ

ಕಾರ್ಕಳದಲ್ಲಿ ಮಾದಕ ದ್ರವ್ಯ ನೀಡಿ ಗ್ಯಾಂಗ್ ರೇಪ್ ನಡೆಸಿದ ಕಾಮಾಂಧರ ಅಟ್ಟಹಾಸ ಖಂಡನೀಯ : ಬಿಜೆಪಿ ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ ಶೆಟ್ಟಿ– ಕಹಳೆ ನ್ಯೂಸ್

ಕಾರ್ಕಳದ ಕುಕ್ಕುಂದೂರಿನಲ್ಲಿ ಮಾದಕ ದ್ರವ್ಯ ನೀಡಿ ಗ್ಯಾಂಗ್ ರೇಪ್ ನಡೆಸಿದ ಬೀಬತ್ಸ್ಯ ಘಟನೆ ನಾಗರಿಕ ಸಮಾಜ ಬೆಚ್ಚಿ ಬೀಳುವಂತೆ ಮಾಡಿದೆ. ಸಮಾಜ ವಿದ್ರೋಹಿ ಕಾಮಾಂಧರ ಅಟ್ಟಹಾಸ ಅತ್ಯಂತ ಖಂಡನೀಯ ಎಂದು ಬಿಜೆಪಿ ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ ಶೆಟ್ಟಿ ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಬಂಧಿತರಾಗಿರುವ ಆರೋಪಿಗಳ ಹಿನ್ನೆಲೆ ಹಾಗೂ ಅವರಿಗಿರುವ ಮಾದಕ ವಸ್ತು ಜಾಲದ ನಂಟಿನ ಬಗ್ಗೆಯೂ ಪೊಲೀಸ್ ಇಲಾಖೆ ಕೂಲಂಕುಷ ತನಿಖೆ ನಡೆಸಬೇಕಾಗಿದೆ. ಕಾಂಗ್ರೆಸ್...
ಕಾರ್ಕಳಕ್ರೈಮ್ದಕ್ಷಿಣ ಕನ್ನಡಮಂಗಳೂರುಸುದ್ದಿ

ಕಾರ್ಕಳ ಅತ್ಯಾಚಾರ ಪ್ರಕರಣ ರಾಜ್ಯ ಸರ್ಕಾರದ ವೈಫಲ್ಯಕ್ಕೆ ಹಿಡಿದ ಕೈಗನ್ನಡಿ : ಡ್ರಗ್ಸ್ ಮಾಫಿಯಾ ಮಟ್ಟ ಹಾಕಲು ಸಂಸದ ಕ್ಯಾ. ಚೌಟ ಒತ್ತಾಯ– ಕಹಳೆ ನ್ಯೂಸ್

ಮಂಗಳೂರು: ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವುದು ಅತ್ಯಂತ ಹೇಯ ಕೃತ್ಯವಾಗಿದ್ದು, ಕರ್ನಾಟಕದ ಕಾನೂನು ಸುವ್ಯವಸ್ಥೆ ದಿನದಿಂದ ದಿನಕ್ಕೆ ಹದಗೆಡುತ್ತಿದೆ ಎಂದು ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.  ಕಾರ್ಕಳದಲ್ಲಿ ಹಿಂದೂ ಯುವತಿಯನ್ನು ಅಲ್ತಾಫ್,  ಸವೇರಾ ರಿಚರ್ಡ್ ಕಾರ್ಡೋಜಾ ಹಾಗೂ ಅವರ ಸಹಚರ ಆರೋಪಿಗಳು ಅಪಹರಿಸಿ ಮಾದಕ ದ್ರವ್ಯ ನೀಡಿ ಗ್ಯಾಂಗ್ ರೇಪ್ ನಡೆಸಿ ಅಟ್ಟಹಾಸ ಮೆರೆದಿದ್ದು, ಇಂತಹ ವಿಕೃತ ಕೃತ್ಯ ಖಂಡನೀಯ. ಈ ದುರುಳರ ಕೃತ್ಯದಿಂದ ರಾಜ್ಯವೇ ತಲೆತಗ್ಗಿಸುವಂತಾಗಿದ್ದು, ಕರಾವಳಿಯಲ್ಲಿ ಡ್ರಗ್ಸ್ ದಂಧೆ ಮಿತಿ ಮೀರಿದೆ ಎನ್ನುವುದಕ್ಕೆ  ಈ ಪ್ರಕರಣವೇ ಜ್ವಲಂತ ಸಾಕ್ಷಿಯಾಗಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.   ಕರಾವಳಿ ಭಾಗದಲ್ಲಿ ಡ್ರಗ್ಸ್ ದಂಧೆ ಮಿತಿ ಮೀರಿದ್ದು, ಇದು ಕಾನೂನುಬಾಹಿರ ಚಟುವಟಿಕೆಗಳಿಗೆ ಕುಮ್ಮಕ್ಕು ನೀಡುತ್ತಿದೆ ಹಾಗೂ ಅದರಿಂದ ರಾಷ್ಟ್ರೀಯ ಭದ್ರತೆಗೆ ಆತಂಕ ಸೃಷ್ಟಿಸಿ ಕಾನೂನು ವ್ಯವಸ್ಥೆಯನ್ನು ಬುಡುಮೇಲು ಮಾಡುತ್ತಿರುವ ಬಗ್ಗೆ ಇತ್ತೀಚೆಗೆ ಸಂಸತ್ತಿನಲ್ಲಿಯೂ ಧ್ವನಿಯೆತ್ತಿದ್ದು, ಇದನ್ನು ಮಟ್ಟ ಹಾಕಿ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸದನದಲ್ಲಿ ಮನವಿ ಮಾಡಿದ್ದೆ ಎಂದು ಕ್ಯಾ. ಚೌಟ ಹೇಳಿದ್ದಾರೆ.   ರಾಜ್ಯದಲ್ಲಿ ಇಂತಹ ಹೇಯ ಕೃತ್ಯಗಳು ಪದೇ ಪದೇ ಮರುಕಳಿಸುತ್ತಿರುವುದು ಕಾಂಗ್ರೆಸ್ ನೇತೃತ್ವದ ಸಿದ್ದರಾಮಯ್ಯ ಸರ್ಕಾರದ ವೈಫಲ್ಯವನ್ನು ಎತ್ತಿ ತೋರಿಸುತ್ತದೆ. ಹಿಂದೂ ಸಮಾಜದ ಹೆಣ್ಣುಮಕ್ಕಳಿಗೆ ರಕ್ಷಣೆ ಇಲ್ಲದಂದಾಗಿದೆ. ಗೃಹ ಇಲಾಖೆ ಈ ಕೂಡಲೇ ಎಚ್ಚೆತ್ತುಕೊಂಡು ಕಾರ್ಕಳದ ಗ್ಯಾಂಗ್ ರೇಪ್ ಪ್ರಕರಣದಲ್ಲಿ ಆರೋಪಿಗಳಿಗೆ ಕಠಿಣ ಶಿಕ್ಷೆ ಗುರಿಪಡಿಸುವುದಕ್ಕೆ ಅಗತ್ಯ ಕಾನೂನು ಕ್ರಮ ಜರುಗಿಸಬೇಕು ಎಂದು ಇದೇ ಸಂದರ್ಭದಲ್ಲಿ ಒತ್ತಾಯಿಸಿದ್ದಾರೆ....
ಕ್ರೈಮ್ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳಾಲು ನಿವೃತ್ತ ಮುಖ್ಯೋಪಾಧ್ಯಾಯ ಬಾಲಕೃಷ್ಣ ಬಡೆಕ್ಕಿಲ್ಲಾಯ ಕೊಲೆ ಪ್ರಕರಣ ಭೇದಿಸಿದ ಪೋಲೀಸರು : ಆರೋಪಿಗಳಾದ ಅಳಿಯ ರಾಘವೇಂದ್ರ ಕೆದಿಲಾಯ, ಹಲವು ಪ್ರಕರಣದ ಆರೋಪಿ 20 ವರ್ಷದ ಮೊಮ್ಮಗ ಮುರಳಿಕೃಷ್ಣ ಅಂದರ್..!!! – ಕಹಳೆ ನ್ಯೂಸ್

ಬೆಳ್ತಂಗಡಿ : ನಿವೃತ್ತ ಮುಖ್ಯೋಪಾಧ್ಯಾಯ ಬಾಲಕೃಷ್ಣ ಬಡೆಕ್ಕಿಲ್ಲಾಯ ಅವರನ್ನು ಯಾರು ಕೊಲೆ ಮಾಡಿದ್ದಾರೆ ಅನ್ನೋದು ಬಹುತೇಕರಿಗೆ ಯಕ್ಷ ಪ್ರಶ್ನೆಯಾಗಿ ಕಾಡಿತ್ತು. ತನಿಖೆಗಿಳಿದ ಪೊಲೀಸರಿಗೆ ಆರಂಭದಲ್ಲೇ ಪರಿಚಯಸ್ಥರೇ ಕೊಲೆ ಮಾಡಿದ್ದಾರೆ ಅನ್ನೋ ಸುಳಿವು ಸಿಕ್ಕಿತ್ತು. ಇದೀಗ ಕೊಲೆ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಾಲಕೃಷ್ಣ ಬಡೆಕ್ಕಿಲ್ಲಾಯ ಅವರು ತಮ್ಮ ಮಗಳಿಗೆ ಆಸ್ತಿ ನೀಡದ ಕೋಪಕ್ಕೆ ಮಗಳ ಗಂಡ ಹಾಗೂ ಮೊಮ್ಮಗ ಸೇರಿ ಬಾಲಕೃಷ್ಣ ಭಟ್ ಅವರನ್ನು ಕೊಲೆ ಮಾಡಿರುವ ಭಯಾನಕ ಸತ್ಯ ಬಯಲಾಗಿದೆ....
ಕ್ರೈಮ್ಸುದ್ದಿ

ಕೊಂಡಾಪುರ ಪ್ರೊಫೆಸರ್ಸ್ ಕಾಲೋನಿಯಲ್ಲಿರುವ ಮೂರು ಅಂತಸ್ತಿನ ಕಟ್ಟಡದಲ್ಲಿ ವಿದೇಶಗಳಿಂದ ಹುಡುಗಿಯರನ್ನು ಕರೆಸಿ ವೇಶ್ಯಾವಾಟಿಕೆ ; ದೆಹಲಿ, ಮುಂಬೈ, ಬೆಂಗಳೂರು, ಹೈದರಾಬಾದ್‌ನಲ್ಲಿ ಮಹಿಳೆಯರ ಸಾಗಾಣಿಕೆ ಹಾಗೂ ವೇಶ್ಯಾವಾಟಿಕೆ – ಕಹಳೆ ನ್ಯೂಸ್

ಹೈದರಾಬಾದ್: ವಿದೇಶಿ ಮಹಿಳೆಯರೊಂದಿಗೆ ವೇಶ್ಯಾವಾಟಿಕೆ ನಡೆಸುತ್ತಿದ್ದ ತಂಡವನ್ನು ತೆಲಂಗಾಣದ ಎಸ್‌ಡಬ್ಲ್ಯೂಒಟಿ ಪೊಲೀಸರು ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಕೊಂಡಾಪುರ ಪ್ರೊಫೆಸರ್ಸ್ ಕಾಲೋನಿಯಲ್ಲಿರುವ ಮೂರು ಅಂತಸ್ತಿನ ಕಟ್ಟಡದಲ್ಲಿ ಬುಧವಾರ ರಾತ್ರಿ 8 ಗಂಟೆಗೆ ದಾಳಿ ನಡೆಸಿ 17 ಮಹಿಳೆಯರನ್ನು ರಕ್ಷಿಸಿದ್ದಾರೆ. ಕೀನ್ಯಾದ 14 ಮಹಿಳೆಯರು, ಉಗಾಂಡಾದ ಇಬ್ಬರು ಮತ್ತು ತಾಂಜಾನಿಯಾದ ಓರ್ವ ಮಹಿಳೆಯನ್ನು ರಕ್ಷಿಸಲಾಗಿದ್ದು, ಅಪಾರ್ಟ್‌ಮೆಂಟ್‌ನ ಮ್ಯಾನೇಜರ್ ಶಿವಕುಮಾರ್ ಮತ್ತಬ್ಬರನ್ನು ಬಂಧಿಸಲಾಗಿದೆ ಎಂದು ಮಾದಾಪುರ ಎಸಿಪಿ ಶ್ರೀಕಾಂತ್ ತಿಳಿಸಿದ್ದಾರೆ. ವಿದೇಶದಿಂದ ಅಕ್ರಮವಾಗಿ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿದ್ಯಾಭಾರತಿ ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ- ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ಪ್ರಥಮ- ಕಹಳೆ ನ್ಯೂಸ್

ಕರ್ನಾಟಕ ಪಬ್ಲಿಕ್‌ ಪಿ.ಯು ಕಾಲೇಜು, ಹಾಸನ ಇದರ ಸಹಯೋಗದಲ್ಲಿ ನಡೆದ ವಿದ್ಯಾಭಾರತಿ ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡವು ಪ್ರಥಮ ಸ್ಥಾನವನ್ನು ಪಡೆದು ಪ್ರಾಂತ ಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ. ತಂಡದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿನಿಯರಾದ ಆದ್ಯಾ ಬಿ.ಆರ್‌, ವರ್ಷ.ಕೆ, ಯಜ್ಞಾ, ವೀಕ್ಷಾ ಪಿ, ಶ್ರಾವ್ಯಾ ಯು, ಗ್ರೀಷ್ಮಾ ಎಸ್. ಎ, ತ್ರಿಶಾಲಿ ಕೆ.ಆರ್‌, ರಕ್ಷಾ ಎ.ಎಲ್ ಹಾಗೂ ದ್ವಿತೀಯ ಪಿಯುಸಿಯ ಕಾರ್ತಿಕಾ, ಧನುಶ್ರೀ ಹಾಗೂ...
ಪುತ್ತೂರುಸುದ್ದಿ

ನರೇಂದ್ರ ಪ.ಪೂ.ಕಾಲೇಜಿನಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ಸಂಭ್ರಮ-ವಿಶೇಷ ಉಪನ್ಯಾಸ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು: “ಶ್ರೀಕೃಷ್ಣ ಜನ್ಮಾಷ್ಟಮಿ ಕೇವಲ ಧಾರ್ಮಿಕ ಹಬ್ಬವಲ್ಲ. ಇದು ಜೀವನ, ಪ್ರೀತಿ ಮತ್ತು ದೈವಿಕ ಮತ್ತು ಭಕ್ತನ ನಡುವಿನ ಶಾಶ್ವತ ಬಂಧದ ಆಚರಣೆಯಾಗಿದೆ. ಭಗವಾನ್ ಶ್ರೀಕೃಷ್ಣ ಸಾರುವ ಕರ್ಮ, ಭಕ್ತಿ ಮತ್ತು ಧರ್ಮದ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಮುನ್ನಡೆಯುವ ಆಚರಣೆಯಾಗಿದೆ. ಈ ಹಬ್ಬವು ಆಧ್ಯಾತ್ಮಿಕ ಬೆಳವಣಿಗೆ ಮತ್ತು ಆಂತರಿಕ ಸಂತೋಷಕ್ಕೆ ಆಳವಾದ ಅವಕಾಶವನ್ನು ನೀಡುತ್ತದೆ. ದುಷ್ಟತನವನ್ನು ನಿರ್ಮೂಲನೆ ಮಾಡುವ ಮತ್ತು ಧರ್ಮವನ್ನು ಸ್ಥಾಪಿಸುವ ದೈವಿಕ ಧ್ಯೇಯವನ್ನು ಗೌರವಿಸಲು ಶ್ರೀಕೃಷ್ಣ ಜನ್ಮಾಷ್ಟಮಿಯನ್ನು...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಶಾರದಾ ಯುವಕ ಮಂಡಲ (ರಿ) ಶಾರದಾ ನಗರ, ಸಜೀಪಮುನ್ನೂರು ಇದರ ವತಿಯಿಂದ 50ನೇ ವರ್ಷದ ಸುವರ್ಣ ಮಹೋತ್ಸವ ಕಾರ್ಯಕ್ರಮ- ಕಹಳೆ ನ್ಯೂಸ್

ಶ್ರೀ ಶಾರದಾ ಯುವಕ ಮಂಡಲ (ರಿ) ಶಾರದಾ ನಗರ, ಸಜೀಪಮುನ್ನೂರು ಇದರ ವತಿಯಿಂದ ವರ್ಷ 50ನೇ ವರ್ಷದ ಸುವರ್ಣ ಮಹೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಆ26 ರಿಂದ ಆ28 ರವರೆಗೆ ಮೂರು ದಿನಗಳ ಕಾಲ ನಡೆಯಲಿದೆ ಎಂದು ಯುವಕ ಮಂಡಲದ ಆಧ್ಯಕ್ಷ ಪರಮೇಶ್ವರ ಶಾರದಾ ನಗರ ಅವರು ತಿಳಿಸಿದ್ದಾರೆ. ಅವರು ಬಿಸಿರೋಡಿನ ಪ್ರೆಸ್ ಕ್ಲಬ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. 1975 ರಲ್ಲಿ ಸದಾನಂದ ಪೂಜಾರಿ ಹಾಗೂ ಗೆಳೆಯರೊಂದಿಗೆ ಸೇರಿಕೊಂಡು ಶಾರದಾ...
1 185 186 187 188 189 2,767
Page 187 of 2767