ನರೇಂದ್ರ ಪ.ಪೂ.ಕಾಲೇಜಿನಲ್ಲಿ ನೂತನ ವಿದ್ಯಾರ್ಥಿ ಸಂಘ ಮತ್ತು ವಾಣಿಜ್ಯ,ವಿಜ್ಞಾನ,ಸಾಹಿತ್ಯ ಸಂಘಗಳ ಉದ್ಘಾಟನಾ ಕಾರ್ಯಕ್ರಮ- ಕಹಳೆ ನ್ಯೂಸ್
ನಾಯಕತ್ವದ ಬೆಳವಣಿಗೆಗೆ ಹಾಗೂ ಆರೋಗ್ಯಯುತ ಪ್ರಜಾಪ್ರಭುತ್ವದ ನಿರ್ಮಾಣಕ್ಕೆ ವಿದ್ಯಾರ್ಥಿ ಸಂಘಗಳು ಮಾರ್ಗಸೂಚಿಗಳಾಗಲಿವೆ. ಭವಿಷ್ಯಕ್ಕೆ ಭದ್ರ ಬುನಾದಿ ಕಲ್ಪಿಸಬಲ್ಲ ಶಕ್ತಿ ಇರುವ ವಿದ್ಯಾರ್ಥಿ ಜೀವನದಲ್ಲಿ, ನಾಯಕತ್ವ ಗುಣಗಳನ್ನು ಬೆಳೆಸಿಕೊಂಡಲ್ಲಿ ಉತ್ತಮ ಪ್ರಜೆಗಳಾಗಿ ಬದುಕಲು ಸಾಧ್ಯ.ಜಗತ್ತಿನ ಕತ್ತಲೆಯನ್ನು ಹೋಗಲಾಡಿಸುವ ಅಗಾಧ ಶಕ್ತಿ ವಿದ್ಯಾರ್ಥಿಗಳಲ್ಲಿದೆ. ಉತ್ತಮ ನಾಯಕತ್ವ ಗುಣಮಟ್ಟವನ್ನು ಬೆಳೆಸಿಕೊಂಡಾಗ ಪ್ರಪಂಚವನ್ನೇ ಬದಲಿಸುವಂತಹ ಪ್ರಜೆಗಳಾಗಬಹುದು.”ಎಂದು ಸುಳ್ಯದ ಸರಕಾರಿ ಪ.ಪೂ. ಕಾಲೇಜಿನ ಉಪಪ್ರಾಂಶುಪಾಲರಾದ ಪ್ರಕಾಶ ಮೂಡಿತ್ತಾಯ ಪಿ. ಇವರು ಹೇಳಿದರು. ನರೇಂದ್ರ ಪ.ಪೂ.ಕಾಲೇಜಿನಲ್ಲಿ 2024-25 ನೇ...