ಉಪ್ಪಿನಂಗಡಿಯ ನೇತ್ರಾವತಿ ನದಿಯಲ್ಲಿ ತೇಲಿ ಬರುತ್ತಿದ್ದ ದನದ ರಕ್ಷಣೆ – ಕಹಳೆ ನ್ಯೂಸ್
ಉಪ್ಪಿನಂಗಡಿ : ತುಂಬಿದ ನೇತ್ರಾವತಿ ನದಿಯಲ್ಲಿ ತೇಲಿ ಬರುತ್ತಿದ್ದ ದನವೊಂದನ್ನು ಉಪ್ಪಿನಂಗಡಿಯಲ್ಲಿರುವ ಗೃಹರಕ್ಷಕದಳದವರನ್ನೊಳಗೊಂಡ ಪ್ರವಾಹ ರಕ್ಷಣಾ ತಂಡ ದೋಣಿಯ ಮೂಲಕ ನದಿ ಮಧ್ಯಕ್ಕೆ ಹೋಗಿ ರಕ್ಷಣೆ ಮಾಡಿ ದಡಕ್ಕೆ ಕರೆತಂದ ಘಟನೆ ಉಪ್ಪಿನಂಗಡಿಯಲ್ಲಿ ಇಂದು ನಡೆದಿದೆ. ನೇತ್ರಾವತಿ ನದಿಯ ನೀರಿನ ಮಟ್ಟ ಇಂದು ಮತ್ತಷ್ಟು ಏರಿಕೆಯಾಗಿದ್ದು, 28.05 ಮೀ. ಎತ್ತರದಲ್ಲಿ ನೀರು ಹರಿಯುತ್ತಿತ್ತು. ರಭಸದಿಂದ ಹರಿಯುತ್ತಿದ್ದ ಈ ನದಿಯು ಮಧ್ಯದಲ್ಲಿ ದನವೊಂದು ತೇಲಿಕೊಂಡು ಹೋಗುತ್ತಿರುವುದನ್ನು ಗಮನಿಸಿದ ಹಳೆಗೇಟು ಸಮೀಪದ ದಡ್ಡು ಎಂಬಲ್ಲಿರುವ...