ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದ ಅಡಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಕಾರ್ಯಕ್ರಮ-ಕಹಳೆ ನ್ಯೂಸ್
ಬಂಟ್ವಾಳ : ಗ್ರಾಮಾಭಿವೃದ್ಧಿ ಯೋಜನೆ ಸದಸ್ಯರ ಜೊತೆಗೆ ಗ್ರಾಮಸ್ಥರ ಆರೋಗ್ಯವನ್ನು ಕಾಪಾಡುವ ದೃಷ್ಟಿಯಿಂದ ಗ್ರಾಮ ಗ್ರಾಮಗಳಲ್ಲಿ ಉಚಿತ ಆರೋಗ್ಯ ತಪಾಸನ ಕಾರ್ಯಕ್ರಮಗಳು, ಮಾಸಾಸನ, ಸಹಾಯಧನ, ವಾಸ್ತಲ್ಯ ಕಾರ್ಯಕ್ರಮ, ಸಂಪೂರ್ಣ ಸುರಕ್ಷಾ, ಜನಮಂಗಳ,ಕೃಷಿ ಅನುದಾನ, ಕ್ರಿಟಿಕಲ್ ಸಹಾಯಧನ ಮುಂತಾದ ಕಾರ್ಯಕ್ರಮಗಳನ್ನು ಯೋಜನೆಯ ಕಾರ್ಯಕ್ರಮವಾಗಿ ಮಾಡುತ್ತಿದ್ದು ಗ್ರಾಮಸ್ಥರು ಇದರ ಸದುಪಯೋಗ ಪಡೆದುಕೊಳ್ಳಿ ಎಂದು ಯೋಜನೆಯ ಬಂಟ್ವಾಳ ತಾಲೂಕು ಯೋಜನಾಧಿಕಾರಿ ಬಾಲಕೃಷ್ಣ ಹೇಳಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್(...