13.90 ಲಕ್ಷ ರೂಪಾಯಿ ಅನುದಾನದ ಬಾಳೆಬೈಲು ಹಿರಿಯ ಪ್ರಾಥಮಿಕ ಶಾಲಾ ವಿವೇಕ ಕೊಠಡಿ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟನೆ- ಕಹಳೆ ನ್ಯೂಸ್
ಬಾಳೆಬೈಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇದರ ವಿವೇಕ ಶಾಲಾ ಕೊಠಡಿ ನಿರ್ಮಾಣಕ್ಕೆ 13.90 ಲಕ್ಷ ರೂಪಾಯಿ ಅನುದಾನದ ಮಂಜೂರಾಗಿ ಕಾಮಗಾರಿ ಪೂರ್ಣಗೊಂಡಿದ್ದು, ಇದರ ಉದ್ಘಾಟನೆಯನ್ನು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಪೆರ್ಡೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಚೇತನಾ ಶೆಟ್ಟಿ, ಉಪಾಧ್ಯಕ್ಷರಾದ ದೇವು ಪೂಜಾರಿ, ಗ್ರಾಮ ಪಂಚಾಯತ್ ಸದಸ್ಯರಾದ ಶೋಭಾ, ಸಚಿನ್ ಪೂಜಾರಿ, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ...