ಕುಟುಂಬ ಸಮೇತರಾಗಿ ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿದ ನಟ ರಕ್ಷಿತ್ ಶೆಟ್ಟಿ -ಕಹಳೆ ನ್ಯೂಸ್
ಉಡುಪಿ : ನಟ ರಕ್ಷಿತ್ ಶೆಟ್ಟಿ ಅವರು ಕುಟುಂಬ ಸಮೇತರಾಗಿ ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ಆಗಮಿಸಿದ್ದರು. ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ ವಾಸುದೇವ ಶೆಟ್ಟಿ ಮಾರಿಯಮ್ಮನ ಸನ್ನಿಧಾನದಲ್ಲಿ ಪ್ರಾರ್ಥಿಸಿ ಅಮ್ಮನ ಅನುಗ್ರಹ ಪ್ರಸಾದವನ್ನು ನೀಡಿದರು. ದೇವಳದ ಜೀರ್ಣೋದ್ಧಾರದ ಆರ್ಥಿಕ ಸಮಿತಿಯ ಕಾತ್ಯಾಯಿನಿ ತಂಡದ ಮುಖ್ಯ ಸಂಚಾಲಕಿ ಬೀನಾ ವಿ. ಶೆಟ್ಟಿ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾಹಿತಿಯನ್ನು ನೀಡಿದರು, ನಟ ರಕ್ಷಿತ್ ಶೆಟ್ಟಿ ಕುಟುಂಬಸ್ಥರೊಂದಿಗೆ ದೇವಳದ ಜೀರ್ಣೋದ್ಧಾರ ಕಾರ್ಯಗಳನ್ನು ವೀಕ್ಷಿಸಿದರು....