ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಮಂತ್ರಿ ಮಂಡಲದ ಪ್ರಮಾಣ ವಚನ ಕಾರ್ಯಕ್ರಮ-ಕಹಳೆ ನ್ಯೂಸ್
ಪುತ್ತೂರು : ಬೆಥನಿ ಆಂಗ್ಲ ಮಾಧ್ಯಮ ಶಾಲೆ ದರ್ಬೆ ಪುತ್ತೂರು ಇಲ್ಲಿ 2024 2025 ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಮಂತ್ರಿ ಮಂಡಲದ ಪ್ರಮಾಣ ವಚನ ಸ್ವೀಕಾರ ಮತ್ತು ಉದ್ಘಾಟನಾ ಸಮಾರಂಭವು ಜುಲೈ 3ರಂದು ಶಾಲಾ ಸಭಾಂಗಣದಲ್ಲಿ ನೆರವೇರಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಪುತ್ತೂರು ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರಾದ ಬಾಲಕೃಷ್ಣ ರೈ ಪೊರ್ದಾಲ್ ರವರು ಮಾತನಾಡಿ ಇಂದಿನ ಎಳೆಯರು ನಾಡಿನ ನಾಳಿನ ನಾಯಕರು. ಆ...