ಕಾಂಗ್ರೆಸ್ ಸರ್ಕಾರದ ಹಗರಣ ಖಂಡಿಸಿ ಬಿಜೆಪಿಯಿಂದ ಸಿಎಂ ನಿವಾಸಕ್ಕೆ ಮುತ್ತಿಗೆ : ಪ್ರತಿಭಟನಾಕಾರರನ್ನು ಬಂಧಿಸಿ ಕರೆದೊಯ್ಯದ ಪೊಲೀಸರು- ಕಹಳೆ ನ್ಯೂಸ್ – ಕಹಳೆ ನ್ಯೂಸ್
ಭ್ರಷ್ಟಾಚಾರವನ್ನೇ ಕಾಯಕವನ್ನಾಗಿಸಿಕೊಂಡಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಯಡಿಯೂರಪ್ಪ ಹಾಗೂ ಪ್ರತಿಪಕ್ಷ ನಾಯಕರಾದ ಆರ್. ಅಶೋಕ್ ರವರ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನವರ ನಿವಾಸಕ್ಕೆ ಬಿಜೆಪಿ ಶಾಸಕರು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿ ಕರೆದೊಯ್ಯುವ ವೇಳೆ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ಅವರು, ಪರಿಶಿಷ್ಟ ಪಂಗಡ ಸಮುದಾಯದ ಅಭಿವೃದ್ಧಿಗೆ ಮೀಸಲಿಟ್ಟಿದ್ದ 187 ಕೋಟಿ ರೂಪಾಯಿಗಳನ್ನು ಬ್ರಹ್ಮಾಂಡ ಭ್ರಷ್ಟಾಚಾರ ಮೂಲಕ...