ಮಂಗಳೂರು ಕಾರಾಗೃಹದ ‘ಎ’ಬ್ಲಾಕ್ ನಲ್ಲಿ ಎರಡು ಗುಂಪುಗಳ ನಡುವೆ ಹಲ್ಲೆ ; ಆಸ್ಪತ್ರೆಗೆ ದಾಖಲು..!? – ಕಹಳೆ ನ್ಯೂಸ್
ಮಂಗಳೂರು : ಕಾರಾಗೃಹದಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದ ಬಗ್ಗೆ ವರದಿಯಾಗಿದೆ. ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಕಾರಾಗೃಹದ 'ಎ'ಬ್ಲಾಕ್ ನಲ್ಲಿ ಘಟನೆ ನಡೆದಿದೆ. ವಿಚಾರಣಾಧೀನ ಕೈದಿಗಳ ಎರಡು ಗುಂಪುಗಳ ನಡುವೆ ಜಗಳ ನಡೆದಿದೆನ್ನಲಾಗಿದೆ. ಘಟನೆಯಲ್ಲಿ ಇಬ್ಬರಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹಲ್ಲೆ ಮಾಡಿದ ತಂಡದ ಸೆಲ್ ಗಳ ಮೇಲೆ ರೈಡ್...