ಜುಲೈ 1ರಂದು ಉಡುಪಿ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ – ಕಹಳೆ ನ್ಯೂಸ್
ಉಡುಪಿ : ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ಪತ್ರಿಕಾ ಭವನ ಸಮಿತಿಯ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆಯನ್ನು ಜು.1ರಂದು ಬೆಳಗ್ಗೆ 10.30ಕ್ಕೆ ಉಡುಪಿ ಬ್ರಹ್ಮಗಿರಿಯ ಐಎಂಎ ಭವನದಲ್ಲಿ ಆಯೋಜಿಸಲಾಗಿದೆ. ಕಾರ್ಯಕ್ರಮವನ್ನು ಮಣಿಪಾಲ ಎಂಐಸಿ ಟೆವಿಷಜನ್ ಮತ್ತು ಫಿಲ್ಮ್ ಪ್ರೊಡಕ್ಷನ್ ಇದರ ಪ್ರೋಫೆಸರ್ ಆಫ್ ಪ್ರಾಕ್ಟಿಸ್ ಸತ್ಯಬೋಧ ಜೋಶಿ ಉದ್ಘಾಟಿಸಲಿರುವರು. ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ವಹಿಸಲಿರುವರು. ಉಡುಪಿ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಎಸ್.ಟಿ.ಸಿದ್ಧಲಿಂಗಪ್ಪ...