Wednesday, February 12, 2025

ಸುದ್ದಿ

ಕಾಪುಸುದ್ದಿ

ಕಾಪು ಹೊಸ ಮಾರಿಗುಡಿ ಸ್ವರ್ಣ ಗದ್ದುಗೆ ನಿರ್ಮಾಣಕ್ಕೆ ಸ್ವರ್ಣ ಸಮರ್ಪಣೆಗೆ ಚಾಲನೆ -ಕಹಳೆ ನ್ಯೂಸ್

ಕಾಪು : ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಸಮಗ್ರ ಜೀರ್ಣೋದ್ಧಾರದ ಪ್ರಯುಕ್ತ ಮಾರಿಗುಡಿ ಅಭಿವೃದ್ಧಿ ಸಮಿತಿ ಮತ್ತು ಸ್ವರ್ಣ ಸಮರ್ಪಣಾ ಸಮಿತಿ ನೇತೃತ್ವದಲ್ಲಿ ಪ್ರಪಂಚದಾದ್ಯಂತ ನೆಲೆಸಿರುವ ಸಮಸ್ತ ಭಕ್ತರಿಂದ ಸಮರ್ಪಿಸಲ್ಪಡುವ ಸ್ವರ್ಣ ಗದ್ದುಗೆ ನಿರ್ಮಾಣಕ್ಕೆ ಸ್ವರ್ಣ ಸಮರ್ಪಣೆಗೆ ಚಾಲನೆ ನೀಡಲಾಯಿತು. ದೇಗುಲದ ತಂತ್ರಿ ವಿದ್ವಾನ್ ಕೆ. ಪಿ. ಕುಮಾರಗುರು ತಂತ್ರಿ ಕೊರಂಗ್ರಪಾಡಿ ನೇತೃತ್ವದಲ್ಲಿ ಪ್ರಧಾನ ಅರ್ಚಕ ವೇ. ಮೂ. ಶ್ರೀನಿವಾಸ ತಂತ್ರಿ ಕಲ್ಯ ಉಪಸ್ಥಿತಿಯಲ್ಲಿ ಸ್ವರ್ಣ ಗೌರಿ ಪೂಜೆಯೊಂದಿಗೆ...
ಉಡುಪಿಶಿಕ್ಷಣಸುದ್ದಿ

ಅಯೋಧ್ಯೆಯಲ್ಲಿ ನಡೆದ ರಾಷ್ಟ್ರಮಟ್ಟದ ಸುಭಾಷಿತ ಕಂಠಪಾಠ ಸ್ಪರ್ಧೆಯಲ್ಲಿ ಉಡುಪಿ ಎಸ್.ಎಮ್ಎಸ್.ಪಿ.ಸಂಸ್ಕೃತ ಮಹಾವಿದ್ಯಾಲಯದ ವಿದ್ಯಾರ್ಥಿಗೆ ತೃತೀಯ ಸ್ಥಾನ-ಕಹಳೆ ನ್ಯೂಸ್

ಅಯೋಧ್ಯೆಯಲ್ಲಿ ನಡೆದ ರಾಷ್ಟ್ರಮಟ್ಟದ ಸುಭಾಷಿತ ಕಂಠಪಾಠ ಸ್ಪರ್ಧೆಯಲ್ಲಿ ತೃತೀಯ ಸ್ಥಾನವನ್ನು ಪಡೆದ ಉಡುಪಿ ಎಸ್.ಎಮ್ಎಸ್.ಪಿ.ಸಂಸ್ಕೃತ ಮಹಾವಿದ್ಯಾಲಯದ ವಿದ್ಯಾರ್ಥಿಯಾದ ದೇರೆಬೈಲು ವಾಸುದೇವ ತಂತ್ರಿ ಇವರಿಗೆ ಕರ್ನಾಟಕದ ಘನತೆವೆತ್ತ ರಾಜ್ಯಪಾಲರಾದ ಥಾವರ್ ಛಂದ್ ಗೆಹ್ಲೋಟವರು ಬೆಂಗಳೂರಿನ ರಾಜಭವನದಲ್ಲಿ ಸನ್ಮಾನಿಸಿದರು. ಮಾರ್ಚ್ ತಿಂಗಳಿನಲ್ಲಿ ಅಯೋಧ್ಯೆಯಲ್ಲಿ ನಡೆದ ರಾಷ್ಟ್ರಮಟ್ಟದ ಶಾಸ್ತ್ರೀಯ ಸ್ಪರ್ಧೆಯಲ್ಲಿ ಕರ್ನಾಟಕ ರಾಜ್ಯವು ವಿಜಯವೈಜಯಂತಿ ಪುರಸ್ಕಾರವನ್ನು ಪಡೆದಿತ್ತು. ಕರ್ನಾಟಕದ ಸಂಸ್ಕೃತ ವಿಶ್ವವಿದ್ಯಾನಿಲಯದ ಕುಲಪತಿ ಆಗಿರುವ ಶ್ರೀಮತಿ ಅಹಲ್ಯಾ ಶರ್ಮಾ ಇವರು ಉಪಸ್ಥಿತರಿದ್ದರು....
ದೆಹಲಿಸುದ್ದಿ

18ನೇ ಲೋಕಸಭೆಯ ಸ್ಪೀಕರ್‌ ಆಗಿ ಓಂ ಬಿರ್ಲಾ ಆಯ್ಕೆ-ಕಹಳೆ ನ್ಯೂಸ್

ನವದೆಹಲಿ: 18ನೇ ಲೋಕಸಭೆಯ ಸ್ಪೀಕರ್‌ ಆಗಿ ಓಂ ಬಿರ್ಲಾ ಆಯ್ಕೆಯಾಗಿದ್ದಾರೆ. ಆ ಮೂಲಕ ಸತತ ಎರಡನೇ ಬಾರಿ ಸ್ಪೀಕರ್‌ ಹುದ್ದೆಗೆ ಏರಿದ್ದಾರೆ. ಓಂ ಬಿರ್ಲಾ ಅವರನ್ನು ಸ್ಪೀಕರ್‌ ಆಗಿ ಆಯ್ಕೆ ಮಾಡುವ ಪ್ರಸ್ತಾಪವನ್ನು ಪ್ರಧಾನಿ ನರೇಂದ್ರ ಮೋದಿ ಮಂಡಿಸಿದರು. ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರು ಅನುಮೋದಿಸಿದರು. ಬಳಿಕ ಎನ್‌ಡಿಎ ಮೈತ್ರಿಕೂಟದ ಹಲವು ಸದಸ್ಯರು ಓಂ ಬಿರ್ಲಾ ಅವರ ಹೆಸರನ್ನು ಅನುಮೋದಿಸಿದರು. ವಿರೋಧ ಪಕ್ಷದ ಸದಸ್ಯರು ಕೋಡಿಕುನ್ನಿಲ್ ಸುರೇಶ್ ಅವರ...
ಬೈಂದೂರುಸುದ್ದಿ

ಮಳೆಗಾಲದ ತುರ್ತು ಸ್ಪಂದನೆಗೆ ಎರಡು ತಂಡ ಸಿದ್ಧ :ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ ಮುಂದಾಳತ್ವದಲ್ಲಿ ಈ ತಂಡ ಕಾರ್ಯಾಚರಣೆ-ಕಹಳೆ ನ್ಯೂಸ್

ಬೈಂದೂರು: ಮಳೆಗಾಲದಲ್ಲಿ ಸಂಭವಿಸಬಹುದಾದ ವಿಪತ್ತು ನಿರ್ವಹಣೆಗೆ ಜಿಲ್ಲಾ ವಿಪತ್ತು‌‌ ನಿರ್ವಹಣ ಪ್ರಾಧಿಕಾರದಿಂದ ಒಂದು ರೀತಿಯ ಸಿದ್ಧತೆ ಮಾಡಿಕೊಂಡಿದ್ದರೆ, ಬೈಂದೂರು ಕ್ಷೇತ್ರದಲ್ಲಿ ಶಾಸಕರಾದ ಗುರುರಾಜ್ ಗಂಟಿಹೊಳೆ ಅವರ ವಿಶೇಷ ಮೇಲುಸ್ತುವಾರಿಯಲ್ಲಿ ಸಾರ್ವಜನಿಕ ತುರ್ತು ವಿಪತ್ತು ನಿರ್ವಹಣೆಗೆ ಎರಡು ತಂಡ ಗಳನ್ನು ರಚನೆ ಮಾಡಲಾಗಿದೆ. ಕ್ಷೇತ್ರದ ಕರಾವಳಿ ಭಾಗಕ್ಕೆ ಒಂದಕ್ಕೆ ತಂಡ ಹಾಗೂ ಮಲೆನಾಡು ಭಾಗಕ್ಕೆ ಒಂದು ತಂಡ ರಚನೆ ಮಾಡಲಾಗಿದೆ. ಪ್ರತಿ ತಂಡದಲ್ಲೂ ಹತ್ತು ಸದಸ್ಯರಿದ್ದು, ಮಳೆಗಾಲದಲ್ಲಿ ವಿಪತ್ತು ಸಂಭವಿಸಿದ ಸಂದರ್ಭದಲ್ಲಿ...
ಕುಂದಾಪುರಸುದ್ದಿ

ಕುಂದಾಪುರದ ಆರ್.ಎನ್.ಶೆಟ್ಟಿ. ಸಭಾಭವನದಲ್ಲಿ ನಡೆದ ತಾಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮ-ಕಹಳೆ ನ್ಯೂಸ್

ಕುಂದಾಪುರ : ಸಾರ್ವಜನಿಕರ ಕುಂದು ಕೊರತೆಗಳನ್ನು ಶೀಘ್ರವಾಗಿ ಬಗೆಹರಿಸುವ ನಿಟ್ಟಿನಲ್ಲಿ ಕುಂದಾಪುರ ಶಾಸ್ತ್ರಿ ಸರ್ಕಲ್ ಸಮೀಪದ ಆರ್.ಎನ್.ಶೆಟ್ಟಿ. ಸಭಾಭವನದಲ್ಲಿ ತಾಲೂಕು ಮಟ್ಟದ ಜನಸ್ಪಂದನಾ ಕಾರ್ಯಕ್ರಮ ನಡೆಯಿತು. ಜನ ಸ್ಪಂದನ ಕಾರ್ಯಕ್ರಮದಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀಎ.ಕಿರಣ್ ಕುಮಾರ್ ಕೊಡ್ಗಿಯವರು ಮಾತನಾಡಿ ಮುಂದಿನ ದಿನಗಳಲ್ಲಿ ಜನಸ್ಪಂದನ ಕಾರ್ಯಕ್ರಮಕ್ಕೆ ಸಾರ್ವಜನಿಕರಿಗೆ ಹೆಚ್ಚಾಗಿ ತಿಳಿಯುವಂತೆ ಪ್ರಚಾರ ನೀಡಿ. ಹೆಚ್ಚಿನ ಜನರಿಗೆ ಇದರ ಸದುಪಯೋಗ ಪಡೆದುಕೊಳ್ಳುವಂತೆ ಅಧಿಕಾರಿಗಳು ಕ್ರಮ ವಹಿಸಬೇಕು. ಮತ್ತು ಈ ದಿನ...
ಕ್ರೈಮ್ರಾಜಕೀಯಸುದ್ದಿಹಾಸನ

ಅಮಾವಾಸ್ಯೆ ದಿನ ಸೂರಜ್‌ ಬಳೆ ತೊಡ್ತಾನೆ, ಸೀರೆ ಉಡ್ತಾನೆ! ಬಯಲು ಮಾಡಿದ ಸಂತ್ರಸ್ತ – ಕಹಳೆ ನ್ಯೂಸ್

ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ  ಪ್ರಕರಣದಲ್ಲಿ ಈಗ ಪೊಲೀಸ್‌ ವಶದಲ್ಲಿರುವ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ  ಬಗ್ಗೆ ಸಂತ್ರಸ್ತ ಯುವಕ ಕುತೂಹಲಕಾರಿ ಹೇಳಿಕೆ ನೀಡಿದ್ದಾನೆ. ಸೂರಜ್‌ ರೇವಣ್ಣ ಅಮಾವಾಸ್ಯೆ ದಿನ ಬಳೆ  ತೊಟ್ಟು, ಸೀರೆ ಉಡುತ್ತಾರೆ ಎಂದು ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರ ಹಿರಿಯ ಪುತ್ರ ಸೂರಜ್‌ ರೇವಣ್ಣನನ್ನು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪೊಲೀಸರು ಬಂಧಿಸಿದ್ದು, ಹೆಚ್ಚಿನ ವಿಚಾರಣೆಗಾಗಿ ವಶದಲ್ಲಿಟ್ಟುಕೊಂಡಿದ್ದಾರೆ. ಸೂರಜ್ ರೇವಣ್ಣ...
ದಕ್ಷಿಣ ಕನ್ನಡಸುದ್ದಿ

ಕಾಂಪೌAಡ್ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣ – ಮೃತದೇಹ ಹೊರತೆಗೆಯಲು ಸ್ಥಳೀಯರ ಕಾರ್ಯಾಚರಣೆ-ಕಹಳೆ ನ್ಯೂಸ್

ಉಳ್ಳಾಲ : ಭಾರೀ ಮಳೆಯ ಹಿನ್ನೆಲೆಯಲ್ಲಿ ಮನೆಯೊಂದರ ಮೇಲೆ ಪಕ್ಕದ ಮನೆಯ ಕಾಂಪೌAಡ್ ಗೋಡೆ ಕುಸಿದು ಬಿದ್ದು ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ಉಳ್ಳಾಲ ತಾಲೂಕಿನ ಮುನ್ನೂರು ಗ್ರಾಮದ ಕುತ್ತಾರಿನ ಮದನಿ ನಗರ ಎಂಬಲ್ಲಿ ಇಂದು ಮುಂಜಾನೆ ನಡೆದಿದೆ. ಘಟನೆಯಲ್ಲಿ ಮನೆಯೊಳಗಿದ್ದ ಯಾಸಿರ್(45), ಅವರ ಪತ್ನಿ ಮರಿಯಮ್ಮ(40) ಮಕ್ಕಳಾದ ರಿಯಾನ ಮತ್ತು ರಿಫಾನ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಅಧಿಕಾರಿಗಳು ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದೆ. ಮೂವರ ಶವಗಳನ್ನು ಹೊರ ತೆಗೆಯಲಾಗಿದೆ....
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ರಾಜ್ಯಾದ್ಯಂತ ದಶಲಕ್ಷ ಗಿಡ ನಾಟಿ ಕಾರ್ಯಕ್ರಮದ ಅಭಿಯಾನದ ಪೂರ್ವ ಸಿದ್ಧತಾ ಗಿಡ ನಾಟಿ ಕಾರ್ಯಕ್ರಮ-ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಕರ್ನಾಟಕ ರಾಜ್ಯದ್ಯಾಂತ ನಡೆಸುವ ದಶಲಕ್ಷ ಗಿಡ ನಾಟಿ ಕಾರ್ಯಕ್ರಮದ ಪೂರ್ವಸಿದ್ಧತೆಯಾಗಿ ಇಂದು ಉಡುಪಿ ಪ್ರಾದೇಶಿಕ ವಿಭಾಗದ ಬಂಟ್ವಾಳ ತಾಲೂಕಿನ ಸಾಲುಮರದ ತಿಮ್ಮಕ್ಕ ಉದ್ಯಾನವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂ ಸೇವಕರಿಂದ ಜನಜಾಗೃತಿ ಪ್ರಾದೇಶಿಕ ನಿರ್ದೇಶಕರಾದ ಶ್ರೀ ವಿವೇಕ್ ವಿನ್ಸೆಂಟ್ ಪಾಯಸ್ ರವರ ಮಾರ್ಗದರ್ಶನದಲ್ಲಿ ಗಿಡ ನಾಟಿ ಮಾಡಲಾಯಿತು. ಈ ಸಂದರ್ಭದಲ್ಲಿ...
1 265 266 267 268 269 2,776
Page 267 of 2776