ಶುದ್ಧ ಹಾಲು ಉತ್ಪಾದನೆಯಲ್ಲಿ ದಕ್ಷಿಣ ಕನ್ನಡಕ್ಕೆ ಪ್ರಥಮ ಸ್ಥಾನ
ಕಾರ್ಕಳ : ಕಲಬೆರಕೆ ಇಲ್ಲದೆ ಅತ್ಯುತ್ತಮ ಗುಣಮಟ್ಟದ ಶುದ್ಧ ಹಾಲು ಉತ್ಪಾದನೆಯಲ್ಲಿ ಹೈನುಗಾರರ ವಿಶೇಷ ಸಹಕಾರದಲ್ಲಿ ದಕ್ಷಿಣ ಕನ್ನಡ ಹಾಲು ಉತ್ಪಾದಕರ ಒಕ್ಕೂಟ ರಾಜ್ಯದಲ್ಲೇ ಪ್ರಥಮ ಸ್ಥಾನದಲ್ಲಿದೆ.ರೈತರು ಪೂರೈಸುವ ಹಾಲಿಗೆ ಎಲ್ಲ ಕಡೆಗಿಂತ ಅತಿ ಹೆಚ್ಚು ಅಂದರೆ 28.67 ರು. ನೀಡುತ್ತಿದೆ. ಇದೆಲ್ಲ ರೈತರು ಗುಣಮಟ್ಟದ ಹಾಲು ನೀಡಿದ್ದರಿಂದ ಸಾಧ್ಯವಾಗಿದೆ ಎಂದು ದಕ್ಷಿಣ ಕನ್ನಡ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಕೆ. ರವಿರಾಜ ಹೆಗ್ಡೆ ಹೇಳಿದರು. ಅವರು ಗುರುವಾರ...