ಜೈಶ್ ಆತ್ಮಾಹುತಿ ದಾಳಿಯನ್ನು ವಿಫಲಗೊಳಿಸಿದ ನಮ್ಮ ಸೇನೆ.
ಶ್ರೀನಗರ: ಜಮ್ಮು-ಕಾಶ್ಮೀರದ ಶ್ರೀನಗರದ ಹೈಸೆಕ್ಯೂರಿಟಿ ವಿಮಾನ ನಿಲ್ದಾಣದ ಸಮೀಪದಲ್ಲಿರುವ ಬಿಎಸ್‌ಎಫ್ ಶಿಬಿರದ ಮೇಲೆ ದಾಳಿ ನಡೆಸಿ, ವಿಧ್ವಂಸಕ ಕೃತ್ಯವೆಸಗಲು ಮುಂದಾಗಿದ್ದ ಪಾಕಿಸ್ತಾನ ಮೂಲದ ಜೈಶ್-ಎ-ಮೊಹಮ್ಮದ್ ಉಗ್ರ ಸಂಘಟನೆಯ ಯತ್ನವನ್ನು ಭಾರತೀಯ ಸೇನೆ ವಿಫಲಗೊಳಿಸಿದೆ. ಉಗ್ರರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಬಿಎಸ್‌ಎಫ್ನ ಸಹಾಯಕ ಸಬ್ ಇನ್ಸ್‌ಪೆಕ್ಟರ್ ಹುತಾತ್ಮರಾಗಿ ದ್ದಾರೆ. ಇದೇ ವೇಳೆ, ಕಾರ್ಯಾಚರಣೆಯನ್ನು ಸೇನೆ ಯಶಸ್ವಿಯಾಗಿ ಪೂರ್ಣಗೊಳಿಸಿದ್ದು, ಎಲ್ಲ ಮೂವರು ಉಗ್ರರನ್ನೂ ಹತ್ಯೆಗೈಯ್ಯಲಾಗಿದೆ. ಪಾಕ್ ಸೇನೆ ಇಬ್ಬರು ಮಕ್ಕಳನ್ನು ಬಲಿತೆಗೆದು ಕೊಂಡ...