ಕಾಂಗ್ರೆಸ್ ಸರ್ಕಾರದ ವೈಫಲ್ಯಗಳಿಂದ ಗೊಂದಲದ ಗೂಡಾದ ಇಲಾಖೆಗಳು- ಶಾಸಕ ಕಾಮತ್ -ಕಹಳೆ ನ್ಯೂಸ್
ಮಂಗಳೂರು: ಬಗೆಹರಿಯದ ಇ-ಖಾತಾ ಸಮಸ್ಯೆ:- ರಾಜ್ಯ ಸರ್ಕಾರದ ಕಂದಾಯ ಇಲಾಖೆಯು ಯಾವುದೇ ಪೂರ್ವಸಿದ್ಧತೆ ಇಲ್ಲದೇ ದಿನಬೆಳಗಾಗುವುದರೊಳಗೆ ಆಸ್ತಿ ನೋಂದಣಿಗೆ ಇ–ಖಾತಾ ಕಡ್ಡಾಯ ಮಾಡಿದ ನಂತರ ಮಂಗಳೂರು ನಗರ ವ್ಯಾಪ್ತಿಯಲ್ಲಿ ಉಂಟಾಗಿರುವ ಅವ್ಯವಸ್ಥೆಯ ಆಗರದಿಂದಾಗಿ ಸಾರ್ವಜನಿಕರು ದಿನನಿತ್ಯ ಕಚೇರಿಗಳಿಗೆ ಅಲೆದಾಡುವಂತಾಗಿದ್ದು ಈಗಾಗಲೇ ಅಧಿವೇಶನದಲ್ಲಿ ವಿಷಯ ಪ್ರಸ್ತಾಪಿಸಿ ಕಂದಾಯ ಸಚಿವರನ್ನು ಭೇಟಿಯಾದರೂ ಇದುವರೆಗೂ ಯಾವುದೇ ಪ್ರಯೋಜನವಾಗಿಲ್ಲ. ಜನಸಾಮಾನ್ಯರಿಗೆ ತೊಂದರೆಯಾಗುವ ಇಂತಹ ನಿಯಮಗಳನ್ನು ಏಕಾಏಕಿ ಇಡೀ ರಾಜ್ಯದ ತುಂಬೆಲ್ಲಾ ತರುವ ಮೊದಲು ಯಾವುದಾದರೂ ಒಂದೆರಡು...