Wednesday, January 22, 2025

ಸುದ್ದಿ

ದಕ್ಷಿಣ ಕನ್ನಡಪುತ್ತೂರುಸುದ್ದಿ

 ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಎಚ್.ಆರ್.ಡಿ. ಕಾರ್ಯಕ್ರಮ ;ದಕ್ಷಿಣ ಕನ್ನಡದಲ್ಲಿ ಬ್ಯಾಂಕಿಂಗ್ ವ್ಯವಸ್ಥೆ ಮುಂಚೂಣಿಯಲ್ಲಿದೆ : ಸುರೇಶ ಶೆಟ್ಟಿ -ಕಹಳೆ ನ್ಯೂಸ್

ಪುತ್ತೂರು: ದಕ್ಷಿಣ ಕನ್ನಡದಲ್ಲಿ  ಬ್ಯಾಂಕಿಂಗ್ ವ್ಯವಸ್ಥೆ ಹಿಂದಿನಿಂದಲೂ ಮುಂಚೂಣಿಯಲ್ಲಿತ್ತು. ದಕ್ಷಿಣ ಕನ್ನಡವನ್ನು ಸಹಕಾರಿ ಕ್ಷೇತ್ರದ ತೊಟ್ಟಿಲು ಎಂದು ಕರೆದಿದ್ದಾರೆ. ಕೆನರಾ ಬ್ಯಾಂಕ್, ವಿಜಯ ಬ್ಯಾಂಕ್, ಆಗಿನ ಸಿಂಡಿಕೇಟ್ ಬ್ಯಾಂಕುಗಳು ಪ್ರಾರಂಭಿಕ ಹಂತದಲ್ಲೇ ತುಂಬಾ ಹೆಸರು ಪಡೆದಿವೆ ಎಂದು ಪುತ್ತೂರಿನ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಸದಸ್ಯ ಸುರೇಶ ಶೆಟ್ಟಿ ಹೇಳಿದರು. ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆಯ ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ ಆಯೋಜಿಸಲಾದ...
ದೆಹಲಿರಾಜಕೀಯಸುದ್ದಿ

ಹಿರಿಯ ಬಿಜೆಪಿ ನಾಯಕ ಲಾಲ್ ಕೃಷ್ಣ ಅಡ್ವಾಣಿ ಆರೋಗ್ಯದಲ್ಲಿ ಏರುಪೇರು-ಕಹಳೆ ನ್ಯೂಸ್

ನವದೆಹಲಿ: ಬಿಜೆಪಿ ಹಿರಿಯ ನಾಯಕ ಮತ್ತು ಮಾಜಿ ಉಪ ಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು ಅವರನ್ನು ನವದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಥುರಾ ರಸ್ತೆಯಲ್ಲಿರುವ ಅಪೊಲೊ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಎಲ್.ಕೆ ಅಡ್ವಾಣಿ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಹೇಳಲಾಗಿದೆ. ಅಡ್ವಾಣಿ 2002 ರಿಂದ 2004 ರವರೆಗೆ ಭಾರತದ ಉಪ ಪ್ರಧಾನಿಯಾಗಿ ಮತ್ತು 1999 ರಿಂದ 2004 ರವರೆಗೆ ಕೇಂದ್ರ ಗೃಹ ಸಚಿವರಾಗಿ ಸೇವೆ ಸಲ್ಲಿಸಿದರು....
ಉಡುಪಿಕಾಪುಕುಂದಾಪುರರಾಜಕೀಯಸುದ್ದಿ

ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಅವರನ್ನು ಭೇಟಿ ಮಾಡಿದ ಉಡುಪಿ, ಕುಂದಾಪುರ,ಹಾಗೂ ಕಾಪು ಶಾಸಕರು- ಕಹಳೆ ನ್ಯೂಸ್

ಬೆಳಗಾವಿಯ ಸುವರ್ಣ ಸೌಧದಲ್ಲಿ ಉಡುಪಿ ಜಿಲ್ಲೆಯ ಶಾಸಕ ಮಿತ್ರರು, ಹಿರಿಯರೂ ಆದ ಕುಂದಾಪುರ ಶಾಸಕರಾದ ಶ್ರೀ ಕಿರಣ್ ಕುಮಾರ್ ಕೊಡ್ಗಿ ಹಾಗೂ ಕಾಪು ಶಾಸಕರಾದ ಶ್ರೀ ಗುರ್ಮೆ ಸುರೇಶ್ ಶೆಟ್ಟಿ ಅವರೊಂದಿಗೆ ರಾಜ್ಯದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಸಚಿವರಾದ ಶ್ರೀ ಎಸ್.ಎಸ್. ಮಲ್ಲಿಕಾರ್ಜುನ ಅವರನ್ನು ಭೇಟಿ ಮಾಡಲಾಯಿತು. ಭೇಟಿಯ ವೇಳೆ ಕಳೆದ ಹಲವು ತಿಂಗಳುಗಳಿಂದ ಉಡುಪಿ ಜಿಲ್ಲೆಯಲ್ಲಿ ಕೆಂಪು ಕಲ್ಲು, ಶಿಲೆ ಕಲ್ಲು ಹಾಗೂ ಮರಳು ಸಿಗದೇ...
ಸುದ್ದಿಹೆಚ್ಚಿನ ಸುದ್ದಿ

ಚಿನ್ನಾಭರಣ ಖರೀದಿಸುವವರಿಗೆ ಸಿಹಿ ಸುದ್ದಿ : ಚಿನ್ನ, ಬೆಳ್ಳಿ ದರ ಭಾರೀ ಇಳಿಕೆ- ಕಹಳೆ ನ್ಯೂಸ್

ನವದೆಹಲಿ: ಚಿನ್ನಾಭರಣ ಖರೀದಿಸುವವರಿಗೆ ಸಿಹಿ ಸುದ್ದಿ . ಜಾಗತಿಕ ಮಾರುಕಟ್ಟೆಯಲ್ಲಿನ ಬೆಳವಣಿಗೆ ಆಧರಿಸಿ ದೇಶಿಯ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ದರ ಕುಸಿತ ಕಂಡಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಶೇಕಡ 99.9ರಷ್ಟು ಶುದ್ಧತೆಯ 10 ಗ್ರಾಂ ಚಿನ್ನದ ದರ 1400 ರೂ.ಕುಸಿತ ಕಂಡಿದ್ದು, 79,500 ರೂಪಾಯಿಗೆ ಮಾರಾಟವಾಗಿದೆ. ಶೇಕಡ 99.5 ಶುದ್ಧತೆಯ ಚಿನ್ನದ ದರ 10 ಗ್ರಾಂ ಗೆ 80,500 ರೂಪಾಯಿ ಇದ್ದು, 79,100 ರೂಪಾಯಿಗೆ ಇಳಿದಿದೆ. ಬೆಳ್ಳಿ ದರ...
ಉದ್ಯೋಗಕಡಬಗೋಕರ್ಣಬದಿಯಡ್ಕಬಳ್ಳಾರಿಬೆಂಗಳೂರುಬೈಂದೂರುಭಟ್ಕಳಮಡಿಕೇರಿಮಂಡ್ಯಮಾಹಿತಿಮೈಸೂರುರಾಜ್ಯರಾಮನಗರರಾಷ್ಟ್ರೀಯಸಕಲೇಶಪುರಸುದ್ದಿಹಾಸನಹುಬ್ಬಳ್ಳಿಹೆಚ್ಚಿನ ಸುದ್ದಿ

ಬೆಳ್ಳಂಬೆಳ್ಳಗೆ ಜೈಲಿನಿಂದ ಬಿಡುಗಡೆಗೊಂಡ ಐಕಾನ್ ಸ್ಟಾರ್ ನಟ ಅಲ್ಲು ಅರ್ಜುನ್‌ – ಕಹಳೆ ನ್ಯೂಸ್

ಹೈದರಾಬಾದ್‌ : 'ಪುಷ್ಪಾ 2' ಪ್ರದರ್ಶನದ ವೇಳೆ ನಡೆದ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಒಬ್ಬ ಮಹಿಳೆ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾದ ಒಂದು ದಿನದ ನಂತರ ತೆಲುಗು ನಟ ಅಲ್ಲು ಅರ್ಜುನ್ ಬೆಳಿಗ್ಗೆ ಜೈಲಿನಿಂದ ಬಿಡುಗಡೆಯಾದರು. ನಟನನ್ನು ಹೈದರಾಬಾದ್‌ ಪೊಲೀಸರು ಬಂಧಿಸಿದ್ದರು. ಬಳಿಕ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಕೋರ್ಟ್‌ 14 ದಿನ ನ್ಯಾಯಾಂಗ ಬಂಧನ ವಿಧಿಸಿತು. ಆದರೆ, ಸಂಜೆ ವೇಳೆಗೆ ತೆಲಂಗಾಣ ಹೈಕೋರ್ಟ್‌ ನಟನಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ನಿನ್ನೆ...
ಉತ್ತರ ಪ್ರದೇಶರಾಷ್ಟ್ರೀಯಸುದ್ದಿ

ಮಹಾಕುಂಭ ಏಕತೆಯ ಮಹಾ ಯಜ್ಞ ; ಪ್ರಯಾಗರಾಜ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ – ಕಹಳೆ ನ್ಯೂಸ್

ಪ್ರಯಾಗರಾಜ್: ಮಹಾಕುಂಭ 2025ರ ಸಿದ್ಧತೆಗಳು ಭರದಿಂದ ಸಾಗುತ್ತಿರುವ ಪ್ರಯಾಗರಾಜ್‌ನಲ್ಲಿರುವ ಸಂಗಮ್‌ನ ಪವಿತ್ರ ಭೂಮಿಗೆ ಪ್ರಧಾನಿ ನರೇಂದ್ರ ಮೋದಿ ಇಂದು ಭೇಟಿ ನೀಡಿದ್ದಾರೆ. ಮಹಾಕುಂಭಕ್ಕೆ ಮೂಲಸೌಕರ್ಯಗಳನ್ನು ಹೆಚ್ಚಿಸಲು 5,500 ಕೋಟಿ ರೂ.ಗಳ ಯೋಜನೆಗೆ ಮೋದಿ ಇಂದು ಚಾಲನೆ ನೀಡಿದರು. ಈ ವೇಳೆ ತಮ್ಮ ಭಾಷಣದಲ್ಲಿ, ಅವರು ಈ ಭವ್ಯ ಕಾರ್ಯಕ್ರಮದ ಯಶಸ್ಸಿಗೆ ಕೊಡುಗೆ ನೀಡಿದ ಸಂತರು, ಋಷಿಗಳು ಮತ್ತು ಅಸಂಖ್ಯಾತ ಕಾರ್ಯಕರ್ತರ ಪ್ರಯತ್ನಗಳನ್ನು ಶ್ಲಾಘಿಸಿದರು. ಮಹಾ ಕುಂಭ ಪ್ರಪಂಚದಾದ್ಯಂತ ಗಮನ ಸೆಳೆಯುವ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಕರಾವಳಿ ಉತ್ಸವವನ್ನು ಜನಾಕರ್ಷಣೆಯ ಕಾರ್ಯಕ್ರಮವನ್ನಾಗಿಸಲು ಸ್ಪೀಕರ್, ಉಸ್ತುವಾರಿ ಸಚಿವರ ಸೂಚನೆ – ಕಹಳೆ ನ್ಯೂಸ್

ಮಂಗಳೂರು, ಡಿ.13 : ಈ ವರ್ಷ ನಡೆಯಲಿರುವ ಕರಾವಳಿ ಉತ್ಸವವನ್ನು ಜನಾಕರ್ಷಣೆಯ ಕಾರ್ಯಕ್ರಮವನ್ನಾಗಿ ಮಾಡಲು ಹೆಚ್ಚು ಒತ್ತು ನೀಡುವಂತೆ ಸ್ಪೀಕರ್ ಯು.ಟಿ ಖಾದರ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚಿಸಿದ್ದಾರೆ. ಅವರು ಸೋಮವಾರ ಕರಾವಳಿ ಉತ್ಸವ ಸಿದ್ಧತೆಗಳ ಪ್ರಯುಕ್ತ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಬೆಳಗಾವಿ ಸುವರ್ಣ ವಿಧಾನಸೌಧದಿಂದ ವಿಡಿಯೋ ಕಾನ್ಪೆರನ್ಸ್ ಮೂಲಕ ಭಾಗವಹಿಸಿ ಮಾತನಾಡಿದರು. ಕರಾವಳಿ ಉತ್ಸವದ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸ್ಥಳೀಯ ಸಾಂಸ್ಕೃತಿಕ ಕಲಾಪ್ರಕಾರಗಳು ಸೇರಿದಂತೆ ಸಾರ್ವಜನಿಕರನ್ನು...
ಕಡಬಬೆಂಗಳೂರುರಾಜ್ಯಸಿನಿಮಾಸುದ್ದಿ

ರೇಣುಕಾ ಸ್ವಾಮಿ ಕೊಲೆ ಪ್ರಕರಣ : ನಟ ದರ್ಶನ್​ ಸೇರಿ 7 ಮಂದಿ ಆರೋಪಿಗಳಿಗೆ ಜಾಮೀನು ಮಂಜೂರು- ಕಹಳೆ ನ್ಯೂಸ್

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಜೈಲು ಸೇರಿದ್ದ ದರ್ಶನ್​​ ಮತ್ತು ಗ್ಯಾಂಗ್​ ಸೇರಿ 7 ಮಂದಿ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಲಾಗಿದೆ. ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಜೈಲು ಸೇರಿ 130 ದಿನಗಳ ಮೇಲಾಗಿದ್ದವು. ಆ ಬಳಿಕ ಅವರು ಬೆನ್ನು ನೋವಿನ ಕಾರಣ ನೀಡಿ ಮಧ್ಯಂತರ ಜಾಮೀನು ಪಡೆದು ಜೈಲಿನಿಂದ ಹೊರ ಬಂದು ಆಸ್ಪತ್ರೆ ಸೇರಿದ್ದಾರೆ. ಕಳೆದ ಒಂದೂವರೆ ತಿಂಗಳಿಂದ ಅವರು ಆಸ್ಪತ್ರೆಯಲ್ಲೇ ಇದ್ದಾರೆ. ಈ ಪ್ರಕರಣದಲ್ಲಿ ಭಾಗಿಯಾಗಿದ್ದ...
1 48 49 50 51 52 2,750
Page 50 of 2750