ಮುಡಾ ಹಗರಣ ವಿಚಾರಣೆ ಡಿ.10ಕ್ಕೆ ಮುಂದೂಡಿಕೆ-ಕಹಳೆ ನ್ಯೂಸ್
ಬೆಂಗಳೂರು: ಮುಡಾ ನಿವೇಶನಗಳನ್ನು ಅಕ್ರಮವಾಗಿ ಪಡೆದ ಪ್ರಕರಣದ ವಿಚಾರಣೆಯನ್ನು ಡಿ.10ಕ್ಕೆ ಮುಂದೂಡಿ ಹೈಕೋರ್ಟ್ ಆದೇಶ ಹೊರಡಿಸಿದೆ. ಡಿ.10 ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ಡೇ ಆಗಲಿದೆ. ಆರೋಪಿ ದೇವರಾಜು ಪರ ವಕೀಲರು ವಾದ ಮಂಡಿಸಿ, ವಿಭಾಗೀಯ ಪೀಠದಲ್ಲಿ ಡಿ.5 ಕ್ಕೆ ವಿಚಾರಣೆ ಬಾಕಿ ಇದೆ. ಹೀಗಾಗಿ ವಿಭಾಗೀಯ ಪೀಠದಲ್ಲಿ ವಿಚಾರಣೆ ಮುಕ್ತಾಯದ ಬಳಿಕ ಇಲ್ಲಿ ವಿಚಾರಣೆ ಕೈಗೆತ್ತಿಕೊಳ್ಳುವಂತೆ ಮನವಿ ಮಾಡಿದರು. ಇದಕ್ಕೆ ಸ್ನೇಹಮಯಿ ಕೃಷ್ಣ ಪರ ವಕೀಲ ಆಕ್ಷೇಪ ವ್ಯಕ್ತಪಡಿಸಿದರು...