ಅಡ್ಯನಡ್ಕ ಜನತಾ ವಿದ್ಯಾಸಂಸ್ಥೆಯಲ್ಲಿ ಸ್ಥಾಪಕರ ದಿನಾಚರಣೆ, ಪ್ರತಿಭಾ ಪುರಸ್ಕಾರ ಮತ್ತು ಬಹುಮಾನ ವಿತರಣಾ ಕಾರ್ಯಕ್ರಮ-ಕಹಳೆ ನ್ಯೂಸ್
ಅಡ್ಯನಡ್ಕ: ಅಡ್ಯನಡ್ಕ ಜನತಾ ವಿದ್ಯಾಸಂಸ್ಥೆಗಳ ಸ್ಥಾಪಕರ ದಿನಾಚರಣೆ, ಪ್ರತಿಭಾ ಪುರಸ್ಕಾರ ಮತ್ತು ಬಹುಮಾನ ವಿತರಣಾ ಸಮಾರಂಭವು ನವೆಂಬರ್ 22ರಂದು ಜನತಾ ಪದವಿಪೂರ್ವ ಕಾಲೇಜಿನ ವಾರಣಾಶಿ ಕೃಷ್ಣ ಸಭಾಭವನದಲ್ಲಿ ಜರುಗಿತು. ಮುಖ್ಯ ಅತಿಥಿಯಾಗಿ ಕೆ.ಇ.ಆರ್.ಎಸ್, ಕೃಷ್ಣರಾಜ ಸಾಗರ, ಮಂಡ್ಯ ಜಿಲ್ಲೆ ಇಲ್ಲಿನ ಕರಾವಳಿ ಇಂಜಿನಿಯರಿAಗ್ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಹಾಗೂ ಮುಖ್ಯ ಸಂಶೋಧನಾಧಿಕಾರಿ ಗಿರೀಶ್ ಕೆ. ಅವರು ಪಾಲ್ಗೊಂಡು ಮಾತನಾಡಿ, ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳಂತೆ ಸಹಪಠ್ಯ ಚಟುವಟಿಕೆಗಳಲ್ಲೂ ಮುಂದೆ ಬರಬೇಕು. ಒಳ್ಳೆಯ...