Friday, January 24, 2025

ಸುದ್ದಿ

ಉಡುಪಿಸುದ್ದಿ

ನಕ್ಸಲ್ ನಿಗ್ರಹ ಪಡೆ ಎನ್ಕೌಂಟರ್; ಹೆಬ್ರಿ ಬಳಿ ನಕ್ಸಲ್ ನಾಯಕ‌ ವಿಕ್ರಂ ಗೌಡ ಬಲಿ -ಕಹಳೆ ನ್ಯೂಸ್

ಉಡುಪಿ : ಉಡುಪಿ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ವ್ಯಾಪ್ತಿಯ ದಟ್ಟಾರಣ್ಯದಲ್ಲಿ, ಅರಣ್ಯದಂಚಿನ ಗ್ರಾಮಗಳಲ್ಲಿ ನಕ್ಸಲ್ ಚಟುವಟಿಕೆ ಮತ್ತೆ ಆರಂಭವಾಗಿರುವ ಕಾರಣ ನಕ್ಸಲ್ ನಿಗ್ರಹ ಪಡೆ ಕಾರ್ಯಾಚರಣೆ ಕಳೆದ ಕೆಲವು ದಿನಗಳಿಂದ ತೀವ್ರಗೊಂಡಿತ್ತು. ಇದೀಗ ಉಡುಪಿ ಜಿಲ್ಲೆಯಲ್ಲಿ ಗುಂಡಿನ ಮೊರೆತ ಕೇಳಿದೆ. ಉಡುಪಿ ಜಿಲ್ಲೆಯ ಹೆಬ್ರಿ ಠಾಣೆ ವ್ಯಾಪ್ತಿಯ ಕಬ್ಬಿನಾಲೆ ಅರಣ್ಯ ಪ್ರದೇಶದಲ್ಲಿ ಸೋಮವಾರ ರಾತ್ರಿ ನಡೆದ ಎನ್ಕೌಂಟರ್ನಲ್ಲಿ ನಕ್ಸಲ್ ನಾಯಕ‌ ವಿಕ್ರಂ ಗೌಡ ಹತನಾಗಿದ್ದಾನೆ. ನಕ್ಸಲ್ ನಾಯಕ ವಿಕ್ರಂ ಗೌಡ...
ಉಡುಪಿಕಾಪುಸುದ್ದಿ

50 ಲಕ್ಷ ರೂಪಾಯಿ ಅನುದಾನದಲ್ಲಿ ಹೆಜಮಾಡಿ ಸಮುದ್ರ ತೀರದ ರಸ್ತೆ ಅಭಿವೃದ್ಧಿ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಗುದ್ದಲಿ ಪೂಜೆ-ಕಹಳೆ ನ್ಯೂಸ್

ಕಾಪು: ವಿಧಾನಸಭಾ ಕ್ಷೇತ್ರದ ಹೆಜಮಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಮುದ್ರ ತೀರಕ್ಕೆ ಸಮಾನಾಂತರ ರಸ್ತೆ ಅಭಿವೃದ್ಧಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಶಿಫಾರಸ್ಸಿನ ಮೇರೆಗೆ ಮೀನುಗಾರಿಕಾ ಇಲಾಖೆಯಿಂದ 50 ಲಕ್ಷ ರೂಪಾಯಿ ಅನುದಾನದ ಮಂಜೂರಾಗಿದ್ದು, ಇದರ ಗುದ್ದಲಿ ಪೂಜೆಯನ್ನು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು. ಈ ಸಂದರ್ಭದಲ್ಲಿ ಹೆಜಮಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರೇಶ್ಮಾ, ಉಪಾಧ್ಯಕ್ಷರಾದ ಮೋಹನ್ ಸುವರ್ಣ, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್,...
ದಕ್ಷಿಣ ಕನ್ನಡಸುದ್ದಿಸುಬ್ರಹ್ಮಣ್ಯ

ಕುಕ್ಕೆಗೆ ಕ್ರಿಕೆಟಿಗ ಸೂರ್ಯ ಕುಮಾರ್ ಯಾದವ್ ಭೇಟಿ–ಕಹಳೆ ನ್ಯೂಸ್

ಸುಬ್ರಹ್ಮಣ್ಯ:ದಕ್ಷಿಣ ಭಾರತದ ಹೆಸರಾಂತ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭಾರತ ತಂಡದ ನಾಯಕ,ಕ್ರಿಕೆಟಿಗ ಸೂರ್ಯ ಕುಮಾರ್ ಯಾದವ್ ಕುಟುಂಬ ಸಮೇತವಾಗಿ ಭೇಟಿ ನೀಡಿ ದೇವರ ದರ್ಶನ ಪಡೆದು ಸೇವೆ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಇವರನ್ನು ದೇವಲದ ಆಡಳಿತ ಕಚೇರಿಯಲ್ಲಿ ಗೌರವಿಸಲಾಗಿದೆ....
ದಕ್ಷಿಣ ಕನ್ನಡಮಂಗಳೂರುಸುದ್ದಿ

ಅಂಗನವಾಡಿ ಎದುರು ನಿಲ್ಲಿಸಿದ್ದ omni ಕಾರಿನಲ್ಲಿ ಬೆಂಕಿ-ಕಹಳೆ ನ್ಯೂಸ್

ಸುರತ್ಕಲ್: ಅಂಗನವಾಡಿ ಶಾಲೆಯ ಎದುರು ನಿಲ್ಲಿಸಿದ್ದ ಕಾರೊಂದು ಬೆಂಕಿ ಹೊತ್ತಿಕೊಂಡು ಸುಟ್ಟು ಕರಕಲಾದ ಘಟನೆ ಸುರತ್ಕಲ್ ಕಟ್ಲಾ ಆಶ್ರಯ ಕಾಲೋನಿಯಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಘಟನೆಯಲ್ಲಿ ಯಾರಿಗೂ ಯಾವುದೇ ಅಪಾಯ ಸಂಭವಿಸಿಲ್ಲ ಎನ್ನಲಾಗಿದೆ. ಕಾರು ಬೆಂಕಿಗಾಹುತಿಯಾಗುತ್ತಿದ್ದAತೆ ಸ್ಥಳೀಯರು, ಕದ್ರಿ ಅಗ್ನಿಶಾಮಕ ದಳದವರು ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ....
ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು:ಮುಖ್ಯ ವರದಿಗಾರ ಭುವನೇಂದ್ರ ಪುದುವೆಟ್ಟು ನಿಧನ-ಕಹಳೆ ನ್ಯೂಸ್

ಮಂಗಳೂರು: ಬೆಳ್ತಂಗಡಿ ಸುದ್ದಿ ಬಿಡುಗಡೆ ಪತ್ರಿಕೆಯ ಮುಖ್ಯ ವರದಿಗಾರ ಭುವನೇಂದ್ರ ಪುದುವೆಟ್ಟು (42) ನ.19ರಂದು ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಪಿತ್ಥಕೋಶದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು ಎಂದು ಹೇಳಲಾಗಿದೆ. ಇವರು ಧರ್ಮಸ್ಥಳ ಗ್ರಾಮದ ಪುದುವೆಟ್ಟು ನಿವಾಸಿ ನಾರಾಯಣ ಪೂಜಾರಿ ಮತ್ತು ಮೋಹಿನಿ ದಂಪತಿಯ ಪುತ್ರರಾದ ಭುವನೇಂದ್ರ ಅವರಿಗೆ ಎರಡು ದಿನಗಳ ಹಿಂದೆ ತೀವ್ರ ಹೊಟ್ಟೆನೋವು ಮತ್ತು ವಾಂತಿ ಕಾಣಿಸಿಕೊಂಡಿದ್ದರಿAದ ಅವರನ್ನು ಮೂಡಬಿದ್ರೆ ಆಳ್ವಾಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರೋಗ್ಯ ತಪಾಸಣೆ ವೇಳೆ ಪಿತ್ತಕೋಶದಲ್ಲಿ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಫಿಲೋಮಿನಾ ಪ ಪೂ ಕಾಲೇಜಿನ ವಿದ್ಯಾರ್ಥಿಗಳಿಗೆ ರಾಷ್ಟ್ರಮಟ್ಟದಲ್ಲಿ ಹಲವು ಪ್ರಶಸ್ತಿಗಳು-ಕಹಳೆ ನ್ಯೂಸ್

ಪುತ್ತೂರು: ಅಂಡರ್ ವಾಟರ್ ಸ್ಪೋರ್ಟ್ಸ್ ಫೆಡರೇಷನ್ ಆಫ್ ಇಂಡಿಯಾ ಇದರ ಆಯೋಜನೆಯಲ್ಲಿ ನ14 ರಿಂದ 17ರ ವರೆಗೆ ನ್ಯೂ ದೆಹಲಿಯ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಸ್ವಿಮ್ಮಿಂಗ್ ಪೂಲ್ ಸಂಕಿರಣದಲ್ಲಿ ನಡೆದ 'ನಾಲ್ಕನೇ ರಾಷ್ಟ್ರೀಯ ಫಿನ್ ಸ್ವಿಮ್ಮಿಂಗ್ ಚಾಂಪಿಯನ್ ಶಿಪ್' ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಮೂರು ವಿದ್ಯಾರ್ಥಿಗಳು ಭಾಗವಹಿಸಿ ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿರುತ್ತಾರೆ. ಪ್ರಥಮ ವಿಜ್ಞಾನ ವಿಭಾಗದ ಅನ್ವಿತ್ ರೈ ಬರಿಕೆ ಮೊನೋ - ಫಿನ್...
ರಾಜ್ಯಸುದ್ದಿ

ಅತಿಶಯ ಶ್ರೀ ಕ್ಷೇತ್ರ ಹೊಂಬುಜ ಇಂದ್ರಧ್ವಜ ಮಹಾಮಂಡಲ ಆರಾಧನಾ ಮಹೋತ್ಸವ: ಮಕ್ಕಿಮನೆ ಕಲಾವೃಂದ ಬಳಗದಿಂದ ಸಾಂಸ್ಕ್ರತಿಕ ಕಾರ್ಯಕ್ರಮ-ಕಹಳೆ ನ್ಯೂಸ್

ರಿಪ್ಪನ್ ಪೇಟೆ: ಅತಿಶಯ ಶ್ರೀ ಕ್ಷೇತ್ರ ಹೊಂಬುಜದ ಭಗವಾನ್ ಶ್ರೀ ಪಾರ್ಶ್ವನಾಥ ಸ್ವಾಮಿ ಹಾಗೂ ಮಹಾಮಾತೆ ಶ್ರೀ ಪದ್ಮಾವತಿ ಅಮ್ಮನವರ ಮಹಾ ಸನ್ನಿಧಿಯಲ್ಲಿ ಪರಮಪೂಜ್ಯ ಸ್ವಸ್ತಿಶ್ರೀ ಡಾ .ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮಿ ಯವರ ನೇತೃತ್ವದಲ್ಲಿ ಇಂದ್ರಧ್ವಜ ಮಹಾಮಂಡಲ ಆರಾಧನಾ ಮಹೋತ್ಸವದ ಪ್ರಯುಕ್ತ ಸುದೇಶ್ ಜೈನ್ ಮಕ್ಕಿಮನೆ ಸಂಯೋಜನೆಯಲ್ಲಿ ಮಕ್ಕಿಮನೆ ಕಲಾವೃಂದ ಬಳಗದಿಂದ ವೈವಿಧ್ಯಮಯ ಸಾಂಸ್ಕ್ರತಿಕ ಕಾರ್ಯಕ್ರಮ ನಡೆಯಿತು. 105 ಶಿವಮತಿ ಮಾತಾಜಿ ಮತ್ತು ಶ್ರೀ ಕ್ಷೇತ್ರ ಹೊಂಬುಜ ಜೈನ ಮಠದ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಫಿಲೋಮಿನಾ ಪ.ಪೂ ಕಾಲೇಜಿಗೆ “ಶಕ್ತಿ ಫೆಸ್ಟ್ – 2024” ಅಂತರ್ ಕಾಲೇಜು ಮಟ್ಟದ ರಂಗೋಲಿ ಸ್ಪರ್ಧೆಯಲ್ಲಿ ಪ್ರಥಮ-ಕಹಳೆ ನ್ಯೂಸ್

ಪುತ್ತೂರು: ಶಕ್ತಿ ಪದವಿ ಪೂರ್ವ ಕಾಲೇಜು ಮಂಗಳೂರು ಇದರ ಆಶ್ರಯದಲ್ಲಿ ನಡೆದ 'ಶಕ್ತಿ ಫೆಸ್ಟ್ - 2024' ಅಂತರ್ ಕಾಲೇಜು ಮಟ್ಟದ ಸ್ಪರ್ಧೆಯಲ್ಲಿ ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ಎಂ. ದೀಪ ನಾಯಕ್ ಹಾಗೂ ವಿ. ಶರಣ್ಯ ರಂಗೋಲಿ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿರುತ್ತಾರೆ. ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ಪ್ರದರ್ಶನ ಕಲಾ ಸಂಘದ ಸುಮನಾ ರಾವ್,...
1 72 73 74 75 76 2,751
Page 74 of 2751