ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ರಸಪ್ರಶ್ನೆ ಮತ್ತು ಪುಸ್ತಕ ವಿಮರ್ಶಾ ಸ್ಪರ್ಧೆ-ಕಹಳೆ ನ್ಯೂಸ್
ಮಂಗಳೂರು: ಭಾರತ್ ಫೌಂಡೇಶನ್ ನಗರದಲ್ಲಿ ಪ್ರತಿ ವರ್ಷ ಆಯೋಜಿಸುವ 'ಮಂಗಳೂರು ಲಿಟ್ ಫೆಸ್ಟ್' ಪ್ರಯುಕ್ತ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು, ಪದವಿ ಮತ್ತು ಸ್ನಾತಕೋತ್ತರ ವಿಭಾಗದಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಮತ್ತು ಪುಸ್ತಕ ವಿಮರ್ಶೆ ಸ್ಪರ್ಧೆ ನಡೆಸಲಾಗುತ್ತಿದೆ. ಮಂಗಳೂರಿನ ಹಂಪನಕಟ್ಟೆಯಲ್ಲಿರುವ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಎಸ್.ವಿ.ಪಿ ಕನ್ನಡ ಅಧ್ಯಯನ ಸಂಸ್ಥೆ ಮತ್ತು ವಿಶ್ವವಿದ್ಯಾನಿಲಯ ಕಾಲೇಜಿನ ಸಹಕಾರದೊಂದಿಗೆ ಭಾರತ್ ಫೌಂಡೇಶನ್, ನವೆಂಬರ್ 20 ರಂದು ಸ್ಪರ್ಧೆಗಳನ್ನು ನಡೆಸಲಿದೆ. ಸ್ಪರ್ಧೆಯಲ್ಲಿ ಯಾವುದೇ ವಿಶ್ವವಿದ್ಯಾನಿಲಯದ...