ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನಕ್ಕೆ ಭೂಮಿ ಖರೀದಿ ವಿಚಾರ ; ಕಂದಾಯ ಇಲಾಖೆಯಿಂದ ಶೀಘ್ರ ಅನುಮತಿ: ಶಾಸಕ ಅಶೋಕ್ ರೈ-ಕಹಳೆ ನ್ಯೂಸ್
ಪುತ್ತೂರು: ದಕ್ಷಿಣ ಕಾಶಿ ಎಂದೇ ಪ್ರಸಿದ್ದಿಪಡೆದ ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನಕ್ಕೆ ಭೂಮಿ ಖರೀದಿ ಪ್ರಕ್ರಿಯೆಗೆ ಕಂದಾಯ ಇಲಾಖೆಯಿಂದ ಶೀಘ್ರ ಅನುಮತಿ ಮಂಜೂರಾಗಲಿದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ತಿಳಿಸಿದರು. ಬೆಂಗಳೂರಿನಲ್ಲಿ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಂದ್ರಕುಮಾರ್ ಕಠಾರಿಯಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಶಾಸಕರು ದಕ್ಷಿಣ ಕಾಶಿ ಎಂದೇ ಪ್ರಸಿದ್ದಿಪಡೆದ ದಕ ಜಿಲ್ಲೆಯ ಪ್ರಸಿದ್ದ ಧಾರ್ಮಿಕ ಕೇಂದ್ರವಾಗಿರುವ ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನವನ್ನು ಅಭಿವೃದ್ದಿಪಡಿಸುವ ನಿಟ್ಟಿನಲ್ಲಿ ಈಗಾಗಲೇ...