ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ವಾರ್ಷಿಕೋತ್ಸವದ ಎರಡನೇ ದಿನ ಪರಂಪರಾ ದರ್ಶನ-ಕಹಳೆ ನ್ಯೂಸ್
ಪುತ್ತೂರು, : ವಿದ್ಯಾರ್ಥಿಗಳು, ಯುವಕ-ಯುವತಿಯರು ದೇಶಕ್ಕಾಗಿ ತಮ್ಮ ಪ್ರಾಣವನ್ನು ಮುಡಿಪಾಗಿಡಲು ಸಿದ್ಧರಾಗಿರಬೇಕು. ದೇಶವನ್ನು ಆಕ್ರಮಿಸುವವರ ವಿರುದ್ಧ ಧ್ವನಿಯೆತ್ತಬೇಕು. ಮಾತ್ರವಲ್ಲದೆ, ದೇಶಕ್ಕೆ ವಂಚನೆಗೆಯ್ಯುವವರನ್ನು ವಿರೋಧಿಸುವ ಮನಸ್ಥಿತಿಯನ್ನು ಬೆಳೆಸಿಕೊಳ್ಳಬೇಕು. ಮಾಧ್ಯಮಗಳ ಮುಖಾಂತರ ಪ್ರಚಲಿತ ಘಟನೆಗಳನ್ನು ವಿದ್ಯಾರ್ಥಿಗಳು ಅರಿತುಕೊಂಡು ಮುಂದಿನ ನಡೆಗಳಿಗೆ ಸನ್ನದ್ಧರಾಗಬೇಕು ಎಂದು ರಾಷ್ಟ್ರಸೇವಿಕಾ ಸಮಿತಿಯ ಕರ್ನಾಟಕ ದಕ್ಷಿಣ, ಹೊಯ್ಸಳ ಪ್ರಾಂತ ಕಾರ್ಯಕಾರಿಣಿ ಸದಸ್ಯೆ ಡಾ| ಕಮಲಾ ಪ್ರಭಾಕರ್ ಭಟ್ ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ನ. 14ರಂದು ನಡೆದ...