ಪೆರಾಜೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಡೆದ ಜೀರ್ಣೋದ್ಧಾರ ಸಂಕಲ್ಪ ಪ್ರಶ್ನಾ ಚಿಂತನೆ – ಕಹಳೆ ನ್ಯೂಸ್
ಬಂಟ್ವಾಳ : ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಪೆರಾಜೆ ಇದರ ಜೀರ್ಣೋದ್ಧಾರ ಪ್ರಯುಕ್ತ ಪ್ರಶ್ನಾ ಚಿಂತನೆ ದೇವಸ್ಥಾನದಲ್ಲಿ ನ. 11 ರಂದು ಸೋಮವಾರ ಬೆಳಿಗ್ಗೆ ಸಿಂಹ ರಾಶಿ ಲಗ್ನದಲ್ಲಿ ನೆರವೇರಿತು. ದೇವಸ್ಥಾನವು ಪೆರಾಜೆ , ಮಾಣಿ, ಅರೆಬೆಟ್ಟು ಸೀಮಾ ಗ್ರಾಮಗಳಿಗೆ ಸಂಬಂಧಪಟ್ಟಿದೆ. ಮಂಗಳೂರು ಬೆಂಗಳೂರು ಮತ್ತು ಮಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿಗಳ ಮಧ್ಯೆ ಇರುವ ದೇವಾಲಯ ಮಾಣಿ,ಬುಡೋಳಿ,ನೇರಳಕಟ್ಟೆಯಿಂದ ಸಮಾನ ದೂರದ ಸಾದಿಕುಕ್ಕು ಪರಿಸರದಲ್ಲಿದೆ. ಕೆದಿಲ, ಕಡೇಶ್ವಾಲ್ಯ, ಬರಿಮಾರು, ಬಾಳ್ತಿಲ, ವೀರಕಂಭ, ಅನಂತಾಡಿ,...