ಉಪಾಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾದ ಮೊದಲ ಭಾರತೀಯ ಅಮೆರಿಕನ್ ಮಹಿಳೆ ಕಮಲಾ ಹ್ಯಾರಿಸ್ – ಕಹಳೆ ನ್ಯೂಸ್
ವಾಷಿಂಗ್ಟನ್: ಜಗತ್ತಿನಾದ್ಯಂತ ಮಾರಿಷಸ್ನಿಂದ ಹಿಡಿದಿ ಫಿಜಿಯವರೆಗೆ ಭಾರತೀಯ ಮೂಲದ ರಾಜಕಾರಣಿಗಳು ಚುನಾಯಿತರಾಗಿ ಆಡಳಿತ ಚುಕ್ಕಾನಿ ಹಿಡಿಯುತ್ತಿರುವುದು ಇದೇ ಮೊದಲಲ್ಲ. ಆದರೆ,ಅಮೆರಿಕದ ಉಪಾಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿರುವ ಕಮಲಾ ಹ್ಯಾರಿಸ್ (56) ಅತ್ಯಂತ ಪ್ರಭಾವಿ ರಾಜಕಾರಣಿಯಾಗಿ ಗುರುತಿಸಿಕೊಂಡಿದ್ದಾರೆ. ಅಮೆರಿಕದ ಉಪಾಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾದ ಮೊದಲ ಮಹಿಳೆ ಎಂಬ ಕೀರ್ತಿಗೆ ಭಾರತೀಯ ಮೂಲದ ಕಮಲಾ ಹ್ಯಾರಿಸ್ ಭಾಜನರಾಗಿದ್ದಾರೆ. ಈ ಹುದ್ದೆಗೇರಿದ ಮೊದಲ ಬ್ಲ್ಯಾಕ್ ಅಮೆರಿಕನ್ ಮಹಿಳೆ ಎಂಬ ಕೀರ್ತಿಯೂ ಅವರದ್ದಾಗಿದೆ. ಅವರು ಕ್ಯಾಲಿಫೋರ್ನಿಯಾದ ಮೊದಲ...