ಮಕರ ಸಂಕ್ರಾಂತಿಯ ವಿಶೇಷ ಮಾಹಿತಿ ನೀಡುವ ಸನಾತನ ಸಂಸ್ಥೆಯ ಲೇಖನ !- ಕಹಳೆ ನ್ಯೂಸ್
ತಿಥಿ : ಈ ಹಬ್ಬವು ತಿಥಿವಾಚಕವಾಗಿರದೇ ಅಯನ-ವಾಚಕವಾಗಿದೆ. ಈ ದಿನ ಸೂರ್ಯನ ನಿರಯನ ಮಕರ ರಾಶಿಯಲ್ಲಿ ಸಂಕ್ರಮಣವಾಗುತ್ತದೆ. ಸೂರ್ಯನ ಭ್ರಮಣದಿಂದಾಗುವ ಕಾಲ ವ್ಯತ್ಯಾಸವನ್ನು ಸರಿ ಪಡಿಸಲು ಪ್ರತಿ 80 ವರ್ಷಕ್ಕೊಮ್ಮೆ ಸಂಕ್ರಾಂತಿಯನ್ನು ಒಂದು ದಿನ ಮುಂದೂಡಲಾಗುತ್ತದೆ. ಇತಿಹಾಸ : ಸಂಕ್ರಾಂತಿಯನ್ನು ದೇವತೆ ಎಂದು ನಂಬಲಾಗಿದೆ. ಸಂಕ್ರಾಂತಿಯು ಸಂಕರಾಸುರನೆಂಬ ದೈತ್ಯನ ವಧೆ ಮಾಡಿದ್ದಾಳೆ ಎಂಬ ಕಥೆಯಿದೆ. ಸಂಕ್ರಾಂತಿಯ ಬಗ್ಗೆ ಪಂಚಾಂಗದಲ್ಲಿ ಇರುವ ಮಾಹಿತಿ : ಪಂಚಾಂಗದಲ್ಲಿ ಸಂಕ್ರಾಂತಿಯ ರೂಪ, ವಯಸ್ಸು, ವಸ್ತ್ರ,...