ಮೂರನೇ ಹಾಗೂ ಸರಣಿ ನಿರ್ಣಾಯಕ ಪಂದ್ಯ: ಭಾರತ ಫೀಲ್ಡಿಂಗ್ ಆಯ್ಕೆ – ಕಹಳೆ ನ್ಯೂಸ್
ರಾಂಚಿ : ಮೂರನೇ ಹಾಗೂ ಸರಣಿ ನಿರ್ಣಾಯಕ ಪಂದ್ಯದಲ್ಲಿ ಟಾಸ್ ಜಯಿಸಿದ ಭಾರತದ ನಾಯಕ ವಿರಾಟ್ ಕೊಹ್ಲಿ ಎದುರಾಳಿ ಆಸ್ಟ್ರೇಲಿಯ ತಂಡವನ್ನು ಮೊದಲು ಬ್ಯಾಟಿಂಗ್‌ಗೆ ಆಹ್ವಾನಿಸಿದ್ದಾರೆ. ಭಾರತ ಎರಡನೇ ಏಕದಿನ ಪಂದ್ಯದಲ್ಲಿ 8 ರನ್‌ನಿಂದ ರೋಚಕ ಜಯ ಸಾಧಿಸಲು ನೆರವಾಗಿದ್ದ ತಂಡವನ್ನೇ ಮೂರನೇ ಪಂದ್ಯದಲ್ಲಿ ಕಣಕ್ಕಿಳಿಸಿದೆ. ಕಳಪೆ ಫಾರ್ಮ್‌ನಲ್ಲಿರುವ ಶಿಖರ್ ಧವನ್ ಮತ್ತೊಂದು ಅವಕಾಶ ಪಡೆದಿದ್ದಾರೆ. ಪ್ರಮುಖ ವೇಗಿಗಳಾದ ಜಸ್‌ಪ್ರಿತ್ ಬುಮ್ರಾ ಹಾಗೂ ಮುಹಮ್ಮದ್ ಶಮಿ ತಂಡಕ್ಕೆ ಸರಣಿ ಗೆದ್ದುಕೊಟ್ಟು ವಿಶ್ರಾಂತಿ...