Saturday, November 23, 2024

ಕ್ರೀಡೆ

ಕ್ರೀಡೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ವಿದ್ಯಾಭಾರತಿ ಜಿಲ್ಲಾಮಟ್ಟದ ಈಜು ಸ್ಪರ್ಧೆ: ವಿವೇಕಾನಂದ ಪದವಿಪೂರ್ವ ವಿದ್ಯಾರ್ಥಿ ಆಶಿಶ್‌ ಕೆ ರಾಜ್ಯಮಟ್ಟಕ್ಕೆ ಆಯ್ಕೆ- ಕಹಳೆ ನ್ಯೂಸ್

ಶಕ್ತಿ ಪದವಿಪೂರ್ವ ಕಾಲೇಜು ಮಂಗಳೂರು ಇದರ ಸಹಯೋಗದಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾಮಟ್ಟದ ಈಜು ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ಆಶಿಶ್.‌ ಕೆ ಇವರು ಭಾಗವಹಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರು 50 ಮೀಟರ್‌ ಬಟರ್‌ಫ್ಲೈ ಹಾಗೂ 50 ಮೀಟರ್‌ ಫ್ರೀ ಸ್ಟೈಲ್ ವಿಭಾಗದಲ್ಲಿ ಕಂಚಿನ ಪದಕ, 50 ಮೀಟರ್‌ ಬ್ಯಾಕ್ ಸ್ಟ್ರೋಕ್‌ ನಲ್ಲಿ ಬೆಳ್ಳಿಯ ಪದಕವನ್ನು ಪಡೆಯುವುದರ ಮೂಲಕ ಬೆಂಗಳೂರಿನಲ್ಲಿ ನಡೆಯುವ ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ....
ಕ್ರೀಡೆದಕ್ಷಿಣ ಕನ್ನಡಪುತ್ತೂರುಸುದ್ದಿ

ವಿದ್ಯಾಭಾರತಿ ಜಿಲ್ಲಾಮಟ್ಟದ ಶಟಲ್‌ ಬ್ಯಾಡ್ಮಿಂಟನ್‌- ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ – ಕಹಳೆ ನ್ಯೂಸ್

ಅಂಬಿಕಾ ಪದವಿಪೂರ್ವ ಕಾಲೇಜು ಇದರ ಸಹಯೋಗದಲ್ಲಿ ಸುದಾನ ಸ್ಪೋರ್ಟ್ಸ್ ಕ್ಲಬ್‌ ಸಾಮೆತ್ತಡ್ಕ, ಇಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾಮಟ್ಟದ ಶಟಲ್‌ ಬ್ಯಾಡ್ಮಿಂಟನ್‌ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಬೆಂಗಳೂರಿನಲ್ಲಿ ನಡೆಯುವ ರಾಜ್ಯಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ. ಬಾಲಕಿಯರ ತಂಡದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿನಿಯರಾದ ನೇಹಶ್ರೀ, ಪುಲಕಿತ ಹಾಗೂ ದ್ವಿತೀಯ ಪಿಯುಸಿಯ ಹರ್ಷಿತ ಭಾಗವಹಿಸಿದ್ದರು. ಬಾಲಕರ ತಂಡದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ಧನ್ವಿತ್‌ ರೈ,...
ಕ್ರೀಡೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಜಿಲ್ಲಾ ಮಟ್ಟದ ಈಜು ಸ್ಪರ್ಧೆಯಲ್ಲಿ ಚಿನ್ನ, ಬೆಳ್ಳಿ ಸೇರಿ 9 ಪದಕ ಬೇಟೆಯಾಡಿದ ಅಂಬಿಕಾ ಪದವಿ ಪೂರ್ವ ವಿದ್ಯಾಲಯ ವಿದ್ಯಾರ್ಥಿಗಳು : ಆಸ್ಟ್ರೇಲಿಯಾದಲ್ಲಿ ಆ.20ರಿಂದ ಆರಂಭವಾಗಲಿರುವ ಲೈಫ್ ಸೇವಿಂಗ್ ಚಾಂಪಿಯನ್‍ಶಿಪ್‍ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಲಿರುವ ವಿದ್ಯಾರ್ಥಿಗಳು – ಕಹಳೆ ನ್ಯೂಸ್

ಪುತ್ತೂರು: ಪದವಿ ಪೂರ್ವ ಶಿಕ್ಷಣ ಇಲಾಖೆ ಮತ್ತು ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಸಹಯೋಗದಲ್ಲಿ ಪುತ್ತೂರಿನ ಬಾಲವನದಲ್ಲಿ ನಡೆದ ಜಿಲ್ಲಾಮಟ್ಟದ ಈಜು ಸ್ಪರ್ಧೆಯಲ್ಲಿ ಅಂಬಿಕಾ ಪದವಿ ಪೂರ್ವ ವಿದ್ಯಾಲಯ ನೆಲ್ಲಿಕಟ್ಟೆಯ ವಿದ್ಯಾರ್ಥಿಗಳು ಚಿನ್ನ, ಬೆಳ್ಳಿ ಸೇರಿ 9 ಪದಕ ಬೇಟೆಯಾಡುವ ಜೊತೆಗೆ ಆ.20ರಿಂದ ಸೆ.8ರವರೆಗೆ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಲೈಫ್ ಸೇವಿಂಗ್ ಚಾಂಪಿಯನ್‍ಶಿಪ್‍ನಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ. ಅಂಬಿಕಾ ಪದವಿ ಪೂರ್ವ ವಿದ್ಯಾಲಯ ನೆಲ್ಲಿಕಟ್ಟೆಯ ಪ್ರಥಮ ಪಿಯು ವಾಣಿಜ್ಯ ಶಾಸ್ತ್ರದ ವಿದ್ಯಾರ್ಥಿನಿ,...
ಕ್ರೀಡೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ವಿದ್ಯಾಭಾರತಿ ಜಿಲ್ಲಾಮಟ್ಟದ ಟೇಬಲ್ ಟೆನ್ನಿಸ್ ಸ್ಪರ್ಧೆ : ವಿವೇಕಾನಂದ ಪದವಿಪೂರ್ವ ವಿದ್ಯಾರ್ಥಿಗಳ ಸಾಧನೆ – ಕಹಳೆ ನ್ಯೂಸ್

ಶ್ರೀರಾಮ ಪ್ರೌಢಶಾಲೆ ಕಲ್ಲಡ್ಕದಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾಮಟ್ಟದ ಟೇಬಲ್ ಟೆನ್ನಿಸ್ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡ ಪ್ರಥಮ ಸ್ಥಾನ ಮತ್ತು ಬಾಲಕರ ತಂಡ ದ್ವಿತೀಯ ಸ್ಥಾನವನ್ನು ಗಳಿಸಿರುತ್ತದೆ. ಪ್ರಥಮ ಸ್ಥಾನ ಪಡೆದ ಬಾಲಕಿಯರ ತಂಡ ಆ. 10 ರಂದು ಬೆಂಗಳೂರಿನ ರಾಷ್ಟ್ರೋತ್ಥಾನ ವಿದ್ಯಾಕೇಂದ್ರದಲ್ಲಿ ನಡೆಯುವ ರಾಜ್ಯಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ. ಬಾಲಕಿಯರ ತಂಡದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ಅನನ್ಯ ಪಿ.ಆರ್, ಶ್ರೇಯ ಎಮ್ ಹಾಗೂ ದ್ವಿತೀಯ...
ಕ್ರೀಡೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ರಾಷ್ಟ್ರ ಮಟ್ಟದ ಕ್ರೀಡಾ ಕೂಟದಲ್ಲಿ ಕಲ್ಲಡ್ಕ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿ ಚರಣ್.ಎನ್ ಗೆ ತೃತೀಯ ಸ್ಥಾನ- ಕಹಳೆ ನ್ಯೂಸ್

ಕಲ್ಲಡ್ಕ: ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಕಲ್ಲಡ್ಕ ಇಲ್ಲಿನ ವಿದ್ಯಾರ್ಥಿ ಚರಣ್.ಎನ್ ರಾಷ್ಟ್ರ ಮಟ್ಟದ ಕ್ರೀಡಾ ಕೂಟದಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ. ಎಚ್.ಸಿ.ಎಲ್ ಸಂಸ್ಥೆಯ ವತಿಯಿಂದ ಜು. 23ರಂದು ತಮಿಳುನಾಡಿನ ಶ್ರೀ ಸುಬ್ರಹ್ಮಣ್ಯ ನಡಾರ್ ಕಾಲೇಜ್ ಆಫ್ ಇಂಜಿನಿಯರಿಂಗ್ ಇಲ್ಲಿ ನಡೆದ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಲಾಂಗ್ ಜಂಪ್ (ಉದ್ದ ಜಿಗಿತ) ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ. ಚರಣ್ ಅವರ ಈ ಸಾಧನೆಗೆ ಶಾಲಾ ಮುಖ್ಯಶಿಕ್ಷಕರು, ಶಿಕ್ಷಕ ವೃಂದ,...
ಕ್ರೀಡೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ನರೇಂದ್ರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗೆ ದ್ವಿತೀಯ ಸ್ಥಾನ – ಕಹಳೆ ನ್ಯೂಸ್

ಸರಸ್ವತಿ ವಿದ್ಯಾಕೇಂದ್ರ ಕಡಬ ಇಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ದ.ಕ ಇದರ ವತಿಯಿಂದ ಜಿಲ್ಲಾಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ನರೇಂದ್ರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ, ಪ್ರಥಮ ವಾಣಿಜ್ಯ ವಿಭಾಗದ ಸಾತ್ವಿಕ್ ಎಸ್. ದ್ವಿತೀಯ ಸ್ಥಾನ ಮತ್ತು ಲಿಖಿತ್ ತೃತೀಯ ಸ್ಥಾನವನ್ನು ಪಡೆದಿದ್ದಾರೆ. ಇವರ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ ಪದಾಧಿಕಾರಿಗಳು, ಪ್ರಾಂಶುಪಾಲರು, ಉಪನ್ಯಾಸಕ ವೃಂದ ಮತ್ತು ಸಿಬ್ಬಂದಿ ವರ್ಗ ಶುಭ ಹಾರೈಸಿದ್ದಾರೆ....
ಉಡುಪಿಕ್ರೀಡೆಸುದ್ದಿ

ಉಡುಪಿ : ಅಂತರ್ ರಾಷ್ಟ್ರೀಯ ಯೋಗ ಸ್ಪರ್ಧೆಗೆ ಶಿವಾನಿ ಶೆಟ್ಟಿ ಆಯ್ಕೆ- ಕಹಳೆ ನ್ಯೂಸ್

ಉಡುಪಿ : ಶಿವಾನಂದ ಶೆಟ್ಟಿ ಮತ್ತು ಸುಜಾತ ಶೆಟ್ಟಿ ಹೆಬ್ರಿ ಇವರ ಪುತ್ರಿ, ವಿದ್ಯೋದಯ ಆಂಗ್ಲ ಮಾಧ್ಯಮ ಶಾಲೆಯ ಏಳನೇ ತರಗತಿ ವಿಧ್ಯಾರ್ಥಿನಿ ಹಾಗೂ ರಾಷ್ಟ್ರ ಮತ್ತು ಅಂತರ್ ರಾಷ್ಟ್ರೀಯ ಮಟ್ಟದಲ್ಲಿ ಹಲವಾರು ಪ್ರಶಸ್ತಿಗಳನ್ನು ಗಳಿಸಿದ, ಬಹುಮುಖ ಪ್ರತಿಭೆಯ ಕುಮಾರಿ ಶಿವಾನಿ ಶೆಟ್ಟಿ ಅಂತರ್ ರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಎಸ್ ಜಿ ಎಸ್ ಅಂತರ್ ರಾಷ್ಟ್ರೀಯ ಯೋಗ ಸಂಸ್ಥೆಯ ಪ್ರಾಯೋಜಕತ್ವದಲ್ಲಿ ಜರುಗಿದ ಅಂತರ್ ರಾಜ್ಯ ಯೋಗಾಸನ ಸ್ಪರ್ಧೆಯಲ್ಲಿ ಉತ್ಕೃಷ್ಟ...
ಕ್ರೀಡೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಅಂತರಾಷ್ಟ್ರೀಯ ಜೀವ ರಕ್ಷಕ ವಿಶ್ವ ಚಾಂಪಿಯನ್ ಶಿಪ್ ನಲ್ಲಿ ಫಿಲೋಮಿನಾ ಪ.ಪೂ ಕಾಲೇಜಿನ ವಿದ್ಯಾರ್ಥಿಗಳು ಆಯ್ಕೆ- ಕಹಳೆ ನ್ಯೂಸ್

ಪುತ್ತೂರು: ರಾಷ್ಟ್ರೀಯ ಲೈಫ್ ಸೇವಿಂಗ್ ಸೊಸೈಟಿ ಇವರು ಆಯೋಜಿಸಿದ 2024ನೇ ರಾಷ್ಟ್ರಮಟ್ಟದ ಜೀವ ರಕ್ಷಕ ವಿಶ್ವ ಚಾಂಪಿಯನ್ ಶಿಪ್ ಅಂತರಾಷ್ಟ್ರ ಮಟ್ಟದ ಆಯ್ಕೆ ಶಿಬಿರದಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಮೂರು ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಪ್ರಥಮ ವಿಜ್ಞಾನ ವಿಭಾಗದ ದಿಗಂತ್ ವಿ ಎಸ್ , ಆರ್ ಅಮನ್ ರಾಜ್ ಹಾಗೂ ಅನ್ವಿತ್ ರೈ ಬಾರಿಕೆ ಇವರು ಆಯ್ಕೆಯಾಗಿರುತ್ತಾರೆ. ಇವರು ಆಗಸ್ಟ್ ನಲ್ಲಿ ಆಸ್ಟ್ರೇಲಿಯದಲ್ಲಿ ನಡೆಯುವ ಜೀವ ರಕ್ಷಕ ವಿಶ್ವ...
1 2 3 4 5 6 29
Page 4 of 29