Sunday, March 23, 2025

ಕ್ರೈಮ್

ಕ್ರೈಮ್ಬೆಳಗಾವಿಸುದ್ದಿ

ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಇಬ್ಬರು ಮಹಿಳೆಯರು ಸೇರಿ ಮೂವರು ಅರೆಸ್ಟ್ – ಕಹಳೆ ನ್ಯೂಸ್

ಬೆಳಗಾವಿ: ಅಪಾರ್ಟ್ಮೆಂಟ್ ಬಾಡಿಗೆಗೆ ಪಡೆದು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಇಬ್ಬರು ಮಹಿಳೆಯರು ಸೇರಿದಂತೆ ಮೂವರನ್ನು ತಿಳಕವಾಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಬೆಳಗಾವಿಯ ಹಿಂದವಾಡಿ ಹನುಮಾನ್‌ ನಗರದಲ್ಲಿ ಅಪಾರ್ಟ್ಮೆಂಟ್ ಬಾಡಿಗೆ ಪಡೆದಿದ್ದರು. ಅದೇ ಅಪಾರ್ಟ್ಮೆಂಟ್‌ನಲ್ಲಿ ಮಹಿಳೆಯರನ್ನಿಟ್ಟುಕೊಂಡು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದು, ಅಪಾರ್ಟ್ಮೆಂಟ್‌ನಲ್ಲಿದ್ದ ಸಂತ್ರಸ್ತ ಮಹಿಳೆಯರನ್ನು ರಕ್ಷಿಸಿದ್ದಾರೆ. ರಾಹುಲ್ ಸುಳೇಭಾವಿ ಎಂಬುವವರ ಅಪಾರ್ಟ್ಮೆಂಟ್‌ನ್ನು ಬಾಡಿಗೆ ಪಡೆದು ಗಿರಾಕಿ ಕರೆಸುತ್ತಿದ್ದರು ಎಂದು ತಿಳಿದುಬಂದಿದೆ....
ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿ

ಪಿಯು ವಿದ್ಯಾರ್ಥಿನಿ ಬದಲು ರಾಜ್ಯಶಾಸ್ತ್ರ ಪರೀಕ್ಷೆ ಬರೆದ ಕಾಂಗ್ರೆಸ್ ಕಾರ್ಯಕರ್ತೆ ಅರೆಸ್ಟ್ – ಕಹಳೆ ನ್ಯೂಸ್

ಕಲಬುರಗಿ: ಜಿಲ್ಲೆಯ ಮಿಲಿಂದ್ ಕಾಲೇಜಿನಲ್ಲಿ (Milind College) ಪಿಯು ವಿದ್ಯಾರ್ಥಿನಿ ಬದಲಿಗೆ ಪರೀಕ್ಷೆ ಬರೆದ ಕಾಂಗ್ರೆಸ್ (Congress) ಕಾರ್ಯಕರ್ತೆ ಬಂಧನಕ್ಕೆ ಒಳಗಾಗಿರುವ ಘಟನೆ ನಡೆದಿದೆ. ರಾಜ್ಯದಲ್ಲಿ ದ್ವಿತೀಯ ಪಿಯು ಪರೀಕ್ಷೆ ನಡೆಯುತ್ತಿದ್ದು, ಮಾ.5ರಂದು ರಾಜ್ಯಶಾಸ್ತ್ರ ಪರೀಕ್ಷೆ ನಡೆದಿತ್ತು. ಈ ವೇಳೆ ಕಲಬುರಗಿ ನಗರದ ಖರ್ಗೆ ಕುಟಂಬದ ಒಡೆತನದ ಮಿಲಿಂದ್ ಕಾಲೇಜ್‌ನಲ್ಲಿ ಅಕ್ರಮ ನಡೆದಿದೆ. ಅರ್ಚನಾ ಎಂಬ ವಿದ್ಯಾರ್ಥಿನಿ ಬದಲಿಗೆ ಕಾನೂನು ವಿದ್ಯಾರ್ಥಿನಿಯೂ ಆಗಿರುವ ಕಾಂಗ್ರೆಸ್ ಕಾರ್ಯಕರ್ತೆ ಸಂಪೂರ್ಣಾ ಪಾಟೀಲ್ ಪರೀಕ್ಷೆ ಬರೆದಿದ್ದಾರೆ....
ಉಡುಪಿಕಾರ್ಕಳಕ್ರೈಮ್ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು ಮಹಿಳೆಯರ ಅಶ್ಲೀಲ ವಿಡಿಯೋ ಇರುವುದಾಗಿ ಬೆದರಿಸಿ ಹಣ ವಸೂಲಿ ; ಯುವತಿಯರನ್ನು ಬೆದರಿಸಿ ಸುಲಿಗೆ ಮಾಡುತ್ತಿದ್ದವ ಸೆರೆ.!! – ಕಹಳೆ ನ್ಯೂಸ್

ಮಂಗಳೂರು : ಮಹಿಳೆಯರ ಅಶ್ಲೀಲ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಬಿಡುಗಡೆ ಮಾಡುವುದಾಗಿ ಬೆದರಿಸಿ ಹಣ ವಸೂಲಿ ಮಾಡುತ್ತಿದ್ದ ಆರೋಪದ ಮೇಲೆ ಕಾರ್ಕಳದ ಈದು ಗ್ರಾಮದ ಸತೀಶ್ ಹೊಸಮಾರು (36) ಎಂಬಾತನನ್ನು ಕದ್ರಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಯು ಯುವತಿಯರ ಮೊಬೈಲ್ ನಂಬರನ್ನು ಇನ್‌ಸ್ಟಾಗ್ರಾಂ, ಫೇಸ್‌ಬುಕ್ ಐಡಿ ಮೂಲಕ ಪಡೆದು ಅವರಿಗೆ ನಿಮ್ಮ ಅಶ್ಲೀಲ ವಿಡಿಯೋ ನನ್ನಲ್ಲಿ ಇರುವುದಾಗಿ ಬೆದರಿಕೆ ಹೇಳಿ ಹಣಕ್ಕಾಗಿ ಒತ್ತಾಯಿಸುತ್ತಿದ್ದ ಎನ್ನಲಾಗಿದೆ. ಹಣ ಕೊಡದಿದ್ದರೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ...
ಕ್ರೈಮ್ಜಿಲ್ಲೆತುಮಕೂರುಸುದ್ದಿ

8 ತಿಂಗಳ ಗರ್ಭಿಣಿ ಪತ್ನಿಯನ್ನು, ಮಗನ ಕಣ್ಣೆದುರೇ ನೇಣು ಬಿಗಿದು ಹತ್ಯೆಗೈದು, ಠಾಣೆಗೆ ಶರಣಾದ ಪಾಪಿ ಪತಿ-ಕಹಳೆ ನ್ಯೂಸ್

ತುಮಕೂರು : ಎಂಟು ತಿಂಗಳ ಗರ್ಭಿಣಿ ಪತ್ನಿಯನ್ನು 8 ವರ್ಷದ ಮಗನ ಕಣ್ಣೆದುರುಗಡೆನೇ ನೇಣು ಬಿಗಿದು ಕೊಲೆ ಮಾಡಿ ಬಳಿಕ ಪತಿ ಠಾಣೆಗೆ ಹೋಗಿ ಶರಣಾಗಿರುವ ಘಟನೆ ತುಮಕೂರು ನಗರದ ಹೌಸಿಂಗ್ ಬೋರ್ಡ್ ನಲ್ಲಿ ನಿನ್ನೆ ನಡೆದಿದೆ. ಕೊಲೆಯಾದ ಗರ್ಭಿಣಿಯನ್ನು ನಗ್ಮಾ ಎಂದು ತಿಳಿದು ಬಂದಿದ್ದು ಇನ್ನೂ ಪಾಪಿ ಪತಿಯನ್ನು ಸೈಯದ್ ಎಂದು ತಿಳಿದುಬಂದಿದೆ. ಹೌದು ತುಮಕೂರು ನಗರದ ಹೌಸಿಂಗ್ ಬೋರ್ಡ್ ನಿವಾಸಿಯಾದ ನಗ್ಮಾಗೆ 8 ವರ್ಷದ ಮಗನಿದ್ದಾನೆ. ಒಂದು...
ಕ್ರೈಮ್ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು ಸೈಬರ್ ವಂಚಕರ ಜೊತೆಗೆ ಪೊಲೀಸರ ಪ್ರವಾಸ ; ಕಾನೂನು ವಿದ್ಯಾರ್ಥಿಗಳಿಗೆ ಜಾಗೃತಿ ಪಾಠ – ಕಹಳೆ ನ್ಯೂಸ್

ಮಂಗಳೂರು, ಫೆ.25 : ಸೈಬರ್ ವಂಚಕರನ್ನು ಬಂಧಿಸಿ ವಿಚಾರಣೆ ನಡೆಸಬೇಕಿದ್ದ ಪೊಲೀಸರು ಆರೋಪಿಗಳ ಜತೆಗೆ ಅವರ ದುಡ್ಡಿನಲ್ಲೇ ಪ್ರವಾಸ ಹೋಗಿದ ಘಟನೆ ಬೆಳಕಿಗೆ ಬಂದಿದೆ. ಇಷ್ಟೇ ಅಲ್ಲದೆ ಕಾನೂನು ಕಾಲೇಜಿನ ವಿದ್ಯಾರ್ಥಿಗಳಿಗೆ ಸೈಬರ್ ವಂಚನೆ ಬಗ್ಗೆ ಜಾಗೃತಿ ಪಾಠ ಹೇಳಿಸಿದ್ದಾರೆ . ಉರ್ವ ಠಾಣೆಯ ಪೊಲೀಸರ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಜತೆಗೆ, ಆರೋಪಿಗಳ ಜತೆ ಅವರು ತೆಗೆದ ಸೆಲ್ಫಿ, ಫೋಟೊಗಳೂ ಬಹಿರಂಗವಾಗಿವೆ. ರಾಜಸ್ಥಾನ ಮೂಲದ ರಾಜ್‌ಕುಮಾರ್ ಮೀನಾ (23), ಸುಭಾಸ್...
ಉಡುಪಿಕ್ರೈಮ್ದಕ್ಷಿಣ ಕನ್ನಡಮಂಗಳೂರುಸುದ್ದಿ

ಉಡುಪಿ – ಮಂಗಳೂರು ರಸ್ತೆಯಲ್ಲಿ ಪಿಕಪ್, ಕಾರು ನಡುವೆ ಅಪಘಾತ ; ಸಿಂಧನೂರು ಶಾಸಕರ ಸೋದರಳಿಯ ಸಾವು – ಕಹಳೆ ನ್ಯೂಸ್

ಮಂಗಳೂರು, ಫೆ.23 : ಪಿಕಪ್ ವಾಹನವೊಂದು ಕಾರಿನ ಹಿಂಭಾಗಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರು ನಿಯಂತ್ರಣ ತಪ್ಪಿ ರಸ್ತೆಬದಿಯಲ್ಲಿ ಓಡಾಡುತ್ತಿದ್ದ ಪಾದಚಾರಿಗಳಿಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಘಟನೆಯಲ್ಲಿ ಸಿಂಧನೂರು ಶಾಸಕರ ಸೋದರಳಿಯ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಂಗಳೂರು ಹೊರವಲಯದಲ್ಲಿರುವ ಕುಲೈನಲ್ಲಿ ಶನಿವಾರ ಈ ಘಟನೆ ನಡೆದಿದೆ. ಮೃತರನ್ನು ದೀಪು ಗೌಡ ಅಲಿಯಾಸ್ ಪೊಂಪ ಗೌಡ (48) ಎಂದು ಗುರುತಿಸಲಾಗಿದ್ದು, ರಾಯಚೂರು ಜಿಲ್ಲೆಯ ಸಿಂಧನೂರು ಮೂಲದವರು. ಅವರು ಸಿಂಧನೂರು ಶಾಸಕ ಹಂಪನಗೌಡ ಬಾದರ್ಲಿ...
ಕ್ರೈಮ್ಸುದ್ದಿ

ಭೀಮಾತೀರದಲ್ಲಿ ಮತ್ತೆ ಹರಿದ ‘ರಕ್ತದೋಕುಳಿ’ : ಬರ್ಬರವಾಗಿ ಹತ್ಯೆಯಾದ ಭಾಗಪ್ಪ ಹರಿಜನ್ !-ಕಹಳೆ ನ್ಯೂಸ್

ವಿಜಯಪುರ : ಭೀಮಾತೀರ ಅಂದರೆ ಈಗಲೂ ಆ ಭಾಗದಲ್ಲಿ ಜನರು ಹೆದರುತ್ತಾರೆ. ಇದಕ್ಕೆ ಕಾರಣ ಅಂದಿನ ಕಾಲದ ಮೋಸ್ಟ್ ವಾಂಟೆಡ್ ರೌಡಿಶೀಟರ್ ಚಂದಪ್ಪ ಹರಿಜನ್. ಇದೀಗ ಈತನ ಖಾಸಾ ಶಿಷ್ಯ ಭಾಗಪ್ಪ ಹರಿಜನ್ ನ ಬರ್ಬರ ಕೊಲೆ ನಡೆದಿದ್ದು, ಭಾಗಪ್ಪನ ಗುಪ್ತಾಂಗವನ್ನೇ ಕಟ್ ಮಾಡಿ ದುಷ್ಕರ್ಮಿಗಳು ಕೊಡಲಿಯಿಂದ ಭೀಕರವಾಗಿ ಕೊಲೆ ಮಾಡಿರುವ ಘಟನೆ ವರದಿಯಾಗಿದೆ. ಹೌದು , ಮದೀನಾ ನಗರದಲ್ಲಿ ಬಾಗಪ್ಪ ಹರಿಜನ ಭೀಕರ ಹತ್ಯೆಯಾಗಿದೆ. ಕಳೆದ ರಾತ್ರಿ 9.25ರ...
ಕ್ರೈಮ್ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಕರ್ತವ್ಯ ನಿರತ ಪೊಲೀಸ್ ಉಪನಿರೀಕ್ಷಕರ ಮೇಲೆ ಹಲ್ಲೆ : ಸಂಪ್ಯ ಠಾಣೆಯಲ್ಲಿ ಪ್ರತಾಪ್ ಗೌಡ ವಿರುದ್ಧ ಪ್ರಕರಣ ದಾಖಲು – ಕಹಳೆ ನ್ಯೂಸ್

ಪುತ್ತೂರು : ಕರ್ತವ್ಯ ನಿರತ ಪೊಲೀಸ್ ಉಪನಿರೀಕ್ಷಕರ ಮೇಲೆ ಹಲ್ಲೆ ನಡೆಸಿರುವ ಆರೋಪದ ಮೇಲೆ ಪ್ರತಾಪ್ ಗೌಡ ಎಂಬವರ ವಿರುದ್ಧ ಸಂಪ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಫೆಬ್ರವರಿ 9ರಂದು ಪುತ್ತೂರು ತಾಲೂಕಿನ ಆರ್ಯಾಪುರ್ ಗ್ರಾಮದ ಸಂಪ್ಯ ಪುತ್ತೂರು ಗ್ರಾಮಾಂತರ ಠಾಣೆಯ ಎದುರು ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ ವಾಹನ ತಪಾಸಣೆ ಮಾಡುತ್ತಿದ್ದ ವೇಳೆ, ಹಿಂಬದಿ ಸವಾರ ಹೆಲ್ಮೆಟ್ ಧರಿಸದೇ ಇರುವ ಕಾರಣಕ್ಕಾಗಿ ರೇಮಂತ್ ಎಸ್ ಎಂಬವರ ಸ್ಕೂಟರ್...
1 2 3 112
Page 1 of 112
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ