ಬಿಜೆಪಿ ವಿರುದ್ಧ 40% ಕಮಿಷನ್ ಜಾಹೀರಾತು : ಏಪ್ರಿಲ್ 29 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿಕೆಶಿಗೆ ಕೋರ್ಟ್ ಸಮನ್ಸ್ ; ಜೂನ್ 1ರಂದು ರಾಹುಲ್ ಗಾಂಧಿ ಹಾಜರಾಗಬೇಕು, ನ್ಯಾಯಾಲಯ ಖಡಕ್ ಸೂಚನೆ – ಕಹಳೆ ನ್ಯೂಸ್
ಬೆಂಗಳೂರು: ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಮಾನನಷ್ಟ ಮೊಕದ್ದಮೆ ದಾಖಲಿಸಿರುವ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಗೆ ಅವರಿಗೆ ಸಮನ್ಸ್ ಜಾರಿ ಮಾಡಿದೆ. ಭ್ರಷ್ಟಾಚಾರದ ಆರೋಪದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಬಿಜೆಪಿ ಕಾನೂನು ಕ್ರಮ ಕೈಗೊಂಡಿತ್ತು. ಪಕ್ಷದ ಪರವಾಗಿ ವಕೀಲ ವಿನೋದ್ ಕುಮಾರ್ ಅವರು ಪ್ರಾರಂಭಿಸಿದ ಈ ಪ್ರಕರಣವು ಆಡಳಿತ ಪಕ್ಷಕ್ಕೆ ಸಂಬಂಧಿಸಿದ ಭ್ರಷ್ಟಾಚಾರದ ಪ್ರಮಾಣ ಮತ್ತು ಜಾಹೀರಾತು ಸಮಸ್ಯೆಗಳ...