ಪುತ್ತೂರು : ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಬಳಿ ಹೊರ ರಾಜ್ಯದ ಕೂಲಿ ಕಾರ್ಮಿಕರೊಳಗೆ ಹೊಡೆದಾಟ – ಕಹಳೆ ನ್ಯೂಸ್
ಪುತ್ತೂರು : ಹೊರ ರಾಜ್ಯದ ಕೂಲಿ ಕಾರ್ಮಿಕರ ಮಧ್ಯೆ ಮಾತಿನ ಚಕಮಕಿ ನಡೆದು ಪರಸ್ಪರ ಹಲ್ಲೆ ನಡೆದ ಘಟನೆ ಮಾ.25ರ ಮಧ್ಯಾಹ್ನ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಬಳಿ ನಡೆದಿದೆ. ಘಟನೆಯಲ್ಲಿ ಬ್ಲೇಡ್ ಮಾದರಿ ಹರಿತವಾದ ವಸ್ತುವಿನಿಂದ ಹಲ್ಲೆ ನಡೆಸಲಾಗಿದೆ ಎಂದು ತಿಳಿದು ಬಂದಿದ್ದು, ಇದರಿಂದ ಓರ್ವ ಗಾಯಗೊಂಡಿದ್ದು ಆತನನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ...