ಎಡನೀರು ಶ್ರೀಗಳ ಕಾರು ತಡೆದ ದುಷ್ಕರ್ಮಿಗಳನ್ನು ಬಂಧಿಸದೇ ಇದ್ದಲ್ಲಿ ಕಾಸರಗೋಡು ಪೋಲಿಸ್ ವರಿಷ್ಠಾಧಿಕಾರಿ ಕಛೇರಿ ಮುಂದೆ ಆಹೋರಾತ್ರಿ ಧರಣಿ ಎಚ್ಚರಿಕೆ ; ಯಾವ ಹೋರಾಟಕ್ಕೂ ನಾವು ಸೈ ಎಂದ ವಿಧಾನ ಪರಿಷತ್ ಶಾಸಕ ಕಿಶೋರ್ ಕುಮಾರ್ ಪುತ್ತೂರು – ಕಹಳೆ ನ್ಯೂಸ್
ಎಡನೀರು ಸಂಸ್ಥಾನದ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ಕಾರಿಗೆ ನಿನ್ನೆ ದಾಳಿ ನಡೆದಿದ್ದು ಈ ಘಟನೆಯನ್ನು ವಿಧಾನಪರಿಷತ್ ಶಾಸಕರಾದ ಕಿಶೋರ್ ಕುಮಾರ್ ಪುತ್ತೂರು ಖಂಡಿಸಿದ್ದಾರೆ. ಸಾರ್ವಜನಿಕ ಕಾರ್ಯಕ್ರಮದಿಂದ ಹಿಂದಿರುಗುವಾಗ ಬೋವಿಕಾನ - ಇರಿಯಣ್ಣಿ ಮಾರ್ಗ ಮಧ್ಯೆ ವಾಹನವನ್ನು ತಡೆದ ಪುಂಡರ ತಂಡವೊಂದು ತಗಾದೆ ಎಬ್ಬಿಸಿತ್ತು. ಇದೇ ದಾರಿಯಲ್ಲಿ ಕಾರ್ಯಕ್ರಮ ಮುಗಿಸಿ ಮರಳಿ ಬರುವಾಗ ಇರಿಯಣ್ಣಿಯಿಂದಲೇ ಹಿಂಬಾಲಿಸಿದ ಬಂದವರ ಪೈಕಿ ಬಾವಿಕೆರೆ ಎಂಬಲ್ಲಿ ದೊಣ್ಣೆಯಿಂದ ಕಾರಿನ ಗಾಜಿಗೆ ಹೊಡೆದರೆಂದೂ, ಕಾರಿನ...