ಗೂಂಡಾ ಕಾಯ್ದೆಯಡಿ ಸರ್ಕಾರ ಅಂದರ್ ಮಾಡಿದ್ದ ಪುನೀತ್ ಕೆರೆಹಳ್ಳಿ ಬಾಹರ್..!! ಕೈ ಸರಕಾರದ ನಡೆಯನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಿ, ನ್ಯಾಯ ಎತ್ತಿಹಿಡಿದ ಹೈಕೋರ್ಟ್ ಹಿರಿಯ ನ್ಯಾಯವಾದಿ ಅರುಣ್ ಶ್ಯಾಮ್..!! – ಕಹಳೆ ನ್ಯೂಸ್
ಬೆಂಗಳೂರು: ರಾಷ್ಟ್ರ ರಕ್ಷಣಾ ಪಡೆ ಅಧ್ಯಕ್ಷ ಪುನೀತ್ ಕೆರೆಹಳ್ಳಿ ವಿರುದ್ಧ ಗೂಂಡಾ ಕಾಯ್ದೆಯಡಿ ದಾಖಲಿಸಿದ್ದ ಪ್ರಕರಣವನ್ನು ರದ್ದುಪಡಿಸಲಾಗಿದ್ದು, ಅವರನ್ನು ಜೈಲಿನಿಂದ ಬಿಡುಗಡೆ ಮಾಡಲಾಗಿದೆ. ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಕೆರೆಹಳ್ಳಿಯ ಪುನೀತ್, ನಗರದ ಜೆ.ಪಿ.ನಗರ 7ನೇ ಹಂತದಲ್ಲಿ ವಾಸವಿದ್ದ. ಪುನೀತ್ ವಿರುದ್ಧ ರಾಜ್ಯದ 11 ಠಾಣೆಗಳಲ್ಲಿ ಎಫ್‌ಐಆರ್ ದಾಖಲಾಗಿತ್ತು. ಕೆಲ ಪ್ರಕರಣಗಳಲ್ಲಿ ಶಿಕ್ಷೆಯೂ ಆಗಿತ್ತು. ಅಪರಾಧ ಪ್ರಕರಣಗಳಲ್ಲಿ ಪದೇ ಪದೇ ಭಾಗಿಯಾಗುತ್ತಿರುವುದರಿಂದ ಪುನೀತ್ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿತ್ತು....