‘ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಆಹ್ವಾನಿಸುವುದಿಲ್ಲ, ಜನರಿಂದಲೇ ಸಾಧಕರ ಆಯ್ಕೆ’ – ಸಚಿವ ಸುನಿಲ್ ಕುಮಾರ್ – ಕಹಳೆ ನ್ಯೂಸ್
ಬೆಂಗಳೂರು, ಆ 19: ಈ ಬಾರಿ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಆಹ್ವಾನಿಸುವುದಿಲ್ಲ. ಜನರ ಮೂಲಕವೇ ಸಾಧಕರನ್ನು ಆಯ್ಕೆ ಮಾಡಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಅವರು, ಈ ವರ್ಷ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲು ತೀರ್ಮಾನಿಸಿದ್ದು, ಇದಕ್ಕಾಗಿ ಈಗಿನಿಂದಲೇ ಸಿದ್ಧತೆಗಳು ಆರಂಭವಾಗಿವೆ. ಅಮೃತ ಭಾರತಿಗೆ ಕನ್ನಡದಾರತಿ ಅಭಿಯಾನದ ಅಂಗವಾಗಿ ನಡೆಯುತ್ತಿರುವ ನಾಟಕ ಪ್ರದರ್ಶನವನ್ನು ಡಿಸೆಂಬರ್ವರೆಗೂ ನಡೆಸುವ ಚಿಂತನೆ ಇದೆ ಎಂದರು.ಇನ್ನು...