ಬೆಂಗಳೂರು: (ಡಿ.6 -8) ಕರ್ನಾಟಕದಲ್ಲಿ ಮೊದಲ ಬಾರಿಗೆ 2024ರ ರಾಷ್ಟ್ರೀಯ ಹಿರಿಯರ ಕುಸ್ತಿ ಚಾಂಪಿಯನ್ ಶಿಪ್-ಕಹಳೆ ನ್ಯೂಸ್
ಬೆಂಗಳೂರು: ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ 2024ರ ರಾಷ್ಟ್ರೀಯ ಹಿರಿಯರ ಕುಸ್ತಿ ಚಾಂಪಿಯನ್ ಶಿಪ್ ಡಿಸೆಂಬರ್ 6 ರಿಂದ 8ರವರೆಗೆ "ಬೆಂಗಳೂರಿನ ಕೋರಮಂಗಲ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿದೆ. ಭಾರತೀಯ ಕುಸ್ತಿ ಸಂಘವು 2024ರ ರಾಷ್ಟ್ರೀಯ ಹಿರಿಯರ ಕುಸ್ತಿ ಚಾಂಪಿಯನ್ ಶಿಪ್ ಅನ್ನು ಈ ಬಾರಿ ಕರ್ನಾಟಕದಲ್ಲಿ ಆಯೋಜಿಸಲು ಅನುಮತಿಯನ್ನು ನೀಡಿರುವುದು ಹೆಮ್ಮೆಯ ವಿಚಾರವಾಗಿದೆ. ಅದರಂತೆ ಕರ್ನಾಟಕ ಕುಸ್ತಿ ಸಂಘ(ರಿ)ದ ಅಧ್ಯಕ್ಷರಾದ ಬೆಳ್ಳಿಪ್ಪಾಡಿ ಗುಣರಂಜನ್ ಶೆಟ್ಟಿ ಅವರ ನೇತೃತ್ವದಲ್ಲಿ, ಬೆಂಗಳೂರಿನ ಕೋರಮಂಗಲದ...