ಕೊಲ್ಲೂರು ಸಮೀಪ ರಿಷಬ್ ಶೆಟ್ಟಿ ಕಾಂತಾರ ಚಿತ್ರತಂಡ ತೆರಳುತ್ತಿದ್ದ ಬಸ್ ಅಪಘಾತ – ಹಲವು ಕಲಾವಿದರಿಗೆ ಗಂಭೀರ ಗಾಯ ; ಎಚ್ಚರಿಕೆ ನೀಡಿತಾ ದೈವ..?? – ಕಹಳೆ ನ್ಯೂಸ್
ಉಡುಪಿ: ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸುತ್ತಿರುವ ‘ಕಾಂತಾರ: ಚಾಪ್ಟರ್ 1’ ಸಿನಿಮಾದಲ್ಲಿ ನಟಿಸುತ್ತಿರುವ ಕಲಾವಿದರ ಬಸ್ ಅಪಘಾತ ಆಗಿದೆ. ಶೂಟಿಂಗ್ ಸಲುವಾಗಿ ಜ್ಯೂನಿಯರ್ ಕಲಾವಿದರನ್ನು ಕರೆದುಕೊಂಡು ಹೋಗಿದ್ದ ಮಿನಿ ಬಸ್ ಪಲ್ಟಿ ಆಗಿದೆ. ಕೊಲ್ಲೂರು ಸಮೀಪದ ಜಡ್ಕಳ್ ಬಳಿ ಪಲ್ಟಿಯಾದ ಬಸ್ನಲ್ಲಿ ಹಲವರು ಇದ್ದರು. ಆ ಪೈಕಿ 6 ಜನರಿಗೆ ಗಂಭೀರವಾಗಿ ಪೆಟ್ಟಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸ್ಥಳಕ್ಕೆ ಕೊಲ್ಲೂರು ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಕಾಂತಾರಾ...