ದಿ ಕಾಶ್ಮೀರ್ ಫೈಲ್ಸ್ ಸಿನಿಮಾದ ಫ್ರೀ ಲಿಂಕ್ ಬಗ್ಗೆ ಇರಲಿ ಎಚ್ಚರ ; ಮಂಗಳೂರಿನಲ್ಲೂ ಸೈಬರ್ ವಂಚನೆ ಬೆಳಕಿಗೆ, ಮಂಗಳೂರಿನ ಸೈಬರ್ ತಜ್ಞ ಡಾ. ಅನಂತ ಪ್ರಭು.ಜಿ ಹೇಳಿದ್ದೇನು..!? – ಕಹಳೆ ನ್ಯೂಸ್
ಮಂಗಳೂರು: ದೇಶಾದ್ಯಂತ ಕಾಶ್ಮೀರ್ ಫೈಲ್ಸ್ ಚಿತ್ರ ದೊಡ್ಡಮಟ್ಟದಲ್ಲಿ ಸದ್ದು ಮಾಡುತ್ತಿದೆ. ಆದರೆ ಇದನ್ನೇ ಬಂಡವಾಳವನ್ನಾಗಿಸಿದ ಸೈಬರ್ ವಂಚಕರು ಜನರನ್ನು ಲೂಟಿ ಮಾಡಲು ಹೊರಟಿರುವುದು ಬೆಳಕಿಗೆ ಬಂದಿದೆ. ಚಿತ್ರವನ್ನು ಉಚಿತವಾಗಿ ತೋರಿಸುವ ನೆಪದಲ್ಲಿ ಮೊಬೈಲ್ಗೆ ಲಿಂಕ್ ಕಳುಹಿಸಿ ವಂಚನೆ ಮಾಡುತ್ತಿರುವ ಬಗ್ಗೆ ಸೈಬರ್ ತಜ್ಞರು ಎಚ್ಚರಿಸಿದ್ದಾರೆ. ದಿ ಕಾಶ್ಮೀರ್ ಫೈಲ್ಸ್ ಸಿನಿಮಾವನ್ನು ಉಚಿತವಾಗಿ ಡೌನ್ಲೋಡ್ ಮಾಡಬಹುದೆಂದು ಕೆಲ ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ ಲಿಂಕ್ ಹರಿದಾಡುತ್ತಿದೆ. ಒಂದು ವೇಳೆ ಸುಲಭ, ಉಚಿತವಾಗಿ ಸಿನಿಮಾ ನೋಡುವ...