ರಾಜ್ಯದಲ್ಲಿ ಇಂದು 1,913 ಮಂದಿಗೆ ಕೊರೋನಾ ಪಾಸಿಟಿವ್ ; 48 ಮಂದಿ ಸಾವು ; ದಕ್ಷಿಣ ಕನ್ನಡ 222, ಬೆಂಗಳೂರಿನಲ್ಲಿ 401 ಮಂದಿಗೆ ಸೋಂಕು ದೃಢ – ಕಹಳೆ ನ್ಯೂಸ್
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಸ್ವಲ್ಪ ಏರಿಕೆಯಾಗಿದ್ದು ಇಂದು 1,913 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 28,74,597ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ ಮಹಾಮಾರಿಗೆ 48 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 35,944ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಪ್ರಕಟಿಸಿದೆ. ಬೆಂಗಳೂರಿನಲ್ಲಿ ಇಂದು 401 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,20,098ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 8 ಮಂದಿ...