ಮುಂದಿನ ಚುನಾವಣೆ ಎದುರಿಸಲು ಸನ್ನದ್ಧರಾಗಿ ; ಪಕ್ಷದ ಮುಖಂಡರಿಗೆ ಕರೆ ನೀಡಿದ ಸಿಎಂ ಬಿಎಸ್ ವೈ – ಕಹಳೆ ನ್ಯೂಸ್
ಬೆಂಗಳೂರು: ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಮಳೆಯಿಂದ ಉಂಟಾದ ಪ್ರವಾಹ, ಕೋವಿಡ್ ಪರಿಸ್ಥಿತಿ, ಹಾಗೂ ಉಪ ಚುನಾವಣೆಗಳನ್ನು ಸಮರ್ಥವಾಗಿ ನಿರ್ವಹಿಸಿದೆ. ಮುಂದಿನ ದಿನಗಳಲ್ಲಿ ನಡೆಯಲಿರುವ ಚುನಾವಣೆಗೆ ನಾವು ಸಿದ್ದರಾಗಬೇಕು. ಉಪಚುನಾವಣೆ, ತಾಲ್ಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆ ಎದುರಿಸಲು ಸನ್ನದ್ದರಾಗಬೇಕು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಪಕ್ಷದ ಮುಖಂಡರಿಗೆ ಕರೆ ನೀಡಿದರು. ರಾಜ್ಯ ಬಿಜೆಪಿ ಕಚೇರಿಯಲ್ಲಿ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟನೆ ಮಾಡಿದ ಬಳಿಕ ಮಾತನಾಡಿದ ಸಿಎಂ,...