ಗುಡ್‌ನ್ಯೂಸ್:- ರಾಜ್ಯದಲ್ಲಿ ಪಾಸಿಟಿವ್ ಕೇಸ್‌ಗಿಂತ ಡಿಸ್ಚಾರ್ಜ್ ಹೆಚ್ಚಳ ; 24 ಗಂಟೆಗಳಲ್ಲಿ 34281, ಕೊರೋನಾ ಪಾಸಿಟಿವ್ –49953 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ – ಕಹಳೆ ನ್ಯೂಸ್
ಬೆಂಗಳೂರು, ಮೇ 19: ಕರ್ನಾಟಕದಲ್ಲಿ ಕಳೆದ 24 ಗಂಟೆಯಲ್ಲಿ ಪತ್ತೆಯಾದ ಕೊರೊನಾ ಸೋಂಕಿತರಿಗಿಂತ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದವರ ಸಂಖ್ಯೆಯೇ ಹೆಚ್ಚಿದೆ. ರಾಜ್ಯದಲ್ಲಿ ಕಳೆದ ಒಂದು ದಿನದಲ್ಲಿ 34281 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ, ಹಾಗೆಯೇ 49953 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.ಇದುವರೆಗೂ 1724438 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 558890 ಸಕ್ರಿಯ ಪ್ರಕರಣಗಳಿವೆ, 468 ಮಂದಿ ಒಂದೇ ದಿನದಲ್ಲಿ ಮೃತಪಟ್ಟಿದ್ದಾರೆ, ಇಲ್ಲಿಯವರೆಗೆ 23306 ಮಂದಿ ಸಾವನ್ನಪ್ಪಿದ್ದಾರೆ.ರಾಜ್ಯದಲ್ಲಿ ಒಟ್ಟು 2306655 ಮಂದಿ ಕೊರೊನಾ ಸೋಂಕಿತರಿದ್ದಾರೆ,...