Recent Posts

Friday, November 22, 2024

ರಾಜ್ಯ

ಬೆಂಗಳೂರುರಾಜಕೀಯರಾಜ್ಯಸುದ್ದಿ

ಓರ್ವ ಕೊರೊನಾ ರೋಗಿಗೆ 5 ಲಕ್ಷ ಬಿಲ್ ; ಖಾಸಗಿ ಆಸ್ಪತ್ರೆ ವಿರುದ್ಧ ಸುಧಾಕರ್ ಕೆಂಡಾಮಂಡಲ – ಕಹಳೆ ನ್ಯೂಸ್

ಬೆಂಗಳೂರು: ಕೊರೊನಾ ರೋಗಿಗೆ 5 ಲಕ್ಷ ರೂ. ಬಿಲ್‌ ಮಾಡಿದ ಖಾಸಗಿ ಆಸ್ಪತ್ರೆಯ ವಿರುದ್ಧ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಕೆಂಡಾಮಂಡಲವಾಗಿದ್ದಾರೆ. ಬೆಂಗಳೂರಿನಲ್ಲಿ ಕೊರೊನಾ ಹೆಸರಿನಲ್ಲಿ ಖಾಸಗಿ ಆಸ್ಪತ್ರೆಗಳ ಹಣ ಲೂಟಿ ಮಾಡುವ ಕೆಲಸ ನಡೆಯುತ್ತಲೇ ಇದೆ. ಕೊರೊನಾ ರೋಗವನ್ನು ಬಂಡವಾಳ ಮಾಡಿಕೊಂಡಿರುವ ಕೆಲ ಖಾಸಗಿ ಆಸ್ಪತ್ರೆಗಳು ದುಡ್ಡು ಮಾಡುವ ದಂಧೆಗೆ ಇಳಿದಿವೆ. ಸರ್ಕಾರ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದರ ನಿಗದಿ ಮಾಡಿದ್ದರೂ ಆಸ್ಪತ್ರೆಗಳು ಮಾತ್ರ ಕ್ಯಾರೆ ಎನ್ನುತ್ತಿಲ್ಲ. ಈಗ...
ರಾಜಕೀಯರಾಜ್ಯಸುದ್ದಿಹಾಸನ

ಹುಲಿಯಾ ಮತ್ತು ಬಂಡೆ ಝೂನಲ್ಲಿ ಇರಲು ಫಿಟ್ “- ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಕೆ.ಶಿವಕುಮಾರ್ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವ್ಯಂಗ್ಯ – ಕಹಳೆ ನ್ಯೂಸ್

ಹಾಸನ: ಹುಲಿಯಾ ಮತ್ತು ಬಂಡೆ ಝೂನಲ್ಲಿ ಇರಲು ಫಿಟ್ ಸಮಾಜದಲ್ಲಿ ಇರಲು ಅನ್‍ಫಿಟ್ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಕೆ.ಶಿವಕುಮಾರ್ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವ್ಯಂಗ್ಯವಾಡಿದ್ದಾರೆ. ಹಾಸನದ ಚನ್ನರಾಯಪಟ್ಟಣದಲ್ಲಿ ಕಾಂಗ್ರೆಸ್‍ನ ಆರೋಪಕ್ಕೆ ತಿರುಗೇಟು ನೀಡಿದ ಅವರು, ಆಡಳಿತದಲ್ಲಿ ತಪ್ಪಿದ್ರೆ ವಿಧಾನಸೌಧದಲ್ಲಿ ಬಂದು ಗಲಾಟೆ ಮಾಡಿ. ನಿಮಗೆ ಹಕ್ಕಿದೆ. ಬಹಳ ಪುರಾತನ ಇತಿಹಾಸ ಇರುವ ರಾಜಕೀಯ ಪಕ್ಷವಾಗಿ ಚಿಲ್ಲರೆ ರಾಜಕಾರಣ ಮಾಡುತ್ತಿದ್ದಾರೆ. ಕೋವಿಡ್ ಸಮಯದಲ್ಲಿ ಜನರಿಗೆ...
ಬೆಂಗಳೂರುರಾಜ್ಯಸುದ್ದಿ

ಐಜಿಪಿ ರೂಪಾ ಖಡಕ್ ಎಚ್ಚರಿಕೆಗೆ ಬೆಚ್ಚಿದ ಖಾಸಗಿ ಆಸ್ಪತ್ರೆ ; ಸೋಂಕಿತರಿಂದ ಹೆಚ್ಚುವರಿಯಾಗಿ ಪಡೆದಿದ್ದ ರೂ. 24 ಲಕ್ಷ ವಾಪಸ್! – ಕಹಳೆ ನ್ಯೂಸ್

ಬೆಂಗಳೂರು: ಕ್ರಿಮಿನಲ್ ಕೇಸ್ ದಾಖಲಿಸುವುದಾಗಿ ಹಿರಿಯ ಐಎಎಸ್ ಅಧಿಕಾರಿ ಹರ್ಷಗುಪ್ತ ಮತ್ತು ಐಜಿಪಿ ಡಿ.ರೂಪಾ ನೇತೃತ್ವದ ತಂಡ ಎಚ್ಚರಿಕೆ ನೀಡಿದ ಬೆನ್ನಲ್ಲೇ ಕೊರೋನಾ ಚಿಕಿತ್ಸೆ ಸಲುವಾಗಿ 22 ಮಂದಿ ಸೋಂಕಿತರಿಂದ ಹೆಚ್ಚುವರಿಯಾಗಿ ಪಡೆದಿದ್ದ ರೂ.24 ಲಕ್ಷ ಹಣವನ್ನು ರಾಜರಾಜೇಶ್ವರಿ ನಗರ ಸಮೀಪದ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಯೊಂದು ಸೋಮವಾರ ಹಿಂತಿರುಗಿಸಿದೆ. ಸರ್ಕಾರದ ನಿಗದಿತ ದರಕ್ಕಿಂತ ಹೆಚ್ಚಿನ ಹಣ ಸುಲಿಗೆ ಮಾಡಿದರೆ ಕಠಿಣ ಕ್ರಮ ಜರುಗಿಸಲಾಗುತ್ತದೆ ಎಂದು ರೂಪಾ ಎಚ್ಚರಿಗೆ ನೀಡಿದ್ದಾರೆ. ನಮ್ಮ...
ಕ್ರೈಮ್ಬೆಂಗಳೂರುರಾಜ್ಯ

ಅಶ್ಲೀಲ ವೆಬ್‍ಸೈಟ್‍ನಲ್ಲಿ ಬೆಂಗ್ಳೂರಿನ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿನಿಯರ ಅಶ್ಲೀಲ ದೇಹದ ಫೋಟೋಗಳನ್ನು ಎಡಿಟ್ ಮಾಡಿ ಅಪ್ಲೋಡ್ – ಕಹಳೆ ನ್ಯೂಸ್

ಬೆಂಗಳೂರು: ನಗರದ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿನಿಯರಿಗೆ ಫೋಟೋಗಳ ದುರ್ಬಳಕೆ ಆತಂಕ ಮನೆ ಮಾಡಿದೆ. ವಿದ್ಯಾರ್ಥಿನಿಯರಿಗೆ ಗೊತ್ತಾಗದಂತೆ ಸಾಮಾಜಿಕ ಜಾಲತಾಣಗಳಲ್ಲಿ ಫೋಟೊ ಕದ್ದು ಅಶ್ಲೀಲ ವೆಬ್‍ಸೈಟ್‍ಗಳಲ್ಲಿ ಅಪ್ಲೋಡ್ ಮಾಡಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ವಿದ್ಯಾರ್ಥಿಗಳು ಅಪ್ಲೋಡ್ ಮಾಡಿದ್ದ ಫೋಟೋಗಳನ್ನು ಕದ್ದು ಕೃತ್ಯ ಎಸಲಾಗಿದೆ. ನಕಲಿ ಖಾತೆ ಸೃಷ್ಟಿಸಿ ಫೇಸ್‍ಬುಕ್ ಹಾಗೂ ಇನ್ಸ್ ಸ್ಟಾದಲ್ಲಿ ವಿದ್ಯಾರ್ಥಿನಿಯರಿಗೆ ರಿಕ್ವೆಸ್ಟ್ ಕಳಿಸಿ ಬಳಿಕ ಫೋಟೋಗನ್ನು ಶೇರ್ ಮಾಡಿಕೊಂಡಿದ್ದಾರೆ.   ಘಟನೆ ಕುರಿತು ಬೆಂಗಳೂರಿನ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,...
ದಕ್ಷಿಣ ಕನ್ನಡರಾಜಕೀಯರಾಜ್ಯ

” ಯಾವುದೇ ಆರೋಪಿಗಳನ್ನು ರಕ್ಷಣೆ ಮಾಡಲು ಇದು ಖಾದರ್ ಕಾಲವಲ್ಲ ” ; ಶಾಸಕ ಯು.ಟಿ ಖಾದರ್ ಗೆ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ತಿರುಗೇಟು – ಕಹಳೆ ನ್ಯೂಸ್

ಮಂಗಳೂರು, ಜು 29 : "ಜಿಲ್ಲೆಯಲ್ಲಿ ಈಗಿರುವುದು ಖಾದರ್ ಕಾಲ ಅಲ್ಲ" ಎನ್ನುವುದು ಶಾಸಕ ಯು.ಟಿ ಖಾದರ್ ಅವರಿಗೆ ನೆನಪಿರಲಿ" ಎಂದು ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಅವರು ಶಾಸಕ ಖಾದರ್ ಅವರಿಗೆ ತಿರುಗೇಟು ನೀಡಿದ್ದಾರೆ.   "ಯು.ಟಿ ಖಾದರ್ ಅವರು ಸಚಿವರಾಗಿದ್ದ ಕಾಲದಲ್ಲಿ ದ.ಕ ಜಿಲ್ಲೆಯಲ್ಲಿ ಪೊಲೀಸರಿಗೆ ಬೆದರಿಕೆ , ಹಲ್ಲೆ, ಗೂಂಡಾಗಿರಿ ಯಥೇಚ್ಚವಾಗಿ ನಡೆಯುತ್ತಿತ್ತು. ಆದರೆ ಈಗ ಇರುವುದು ಖಾದರ್ ಕಾಲ ಅಲ್ಲ...
ರಾಜ್ಯಸುದ್ದಿ

ರಾಜ್ಯದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ; ಒಂದೇ ದಿನ ರಾಜ್ಯದಲ್ಲಿ 5 ಸಾವಿರಕ್ಕೂ ಅಧಿಕ ಸೋಂಕು ಪತ್ತೆ – ಬರೋಬ್ಬರಿ 97 ಮಂದಿ ಬಲಿ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದ್ದು, ಗುರುವಾರ ಒಂದೇ ದಿನ ಬರೋಬ್ಬರಿ 97 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 1616ಕ್ಕೆ ಏರಿಕೆಯಾಗಿದೆ. ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ 47 ಸೋಂಕಿತರು ಸೇರಿದಂತೆ ರಾಜ್ಯದಲ್ಲಿ ಒಟ್ಟು 97 ಮಂದಿ ಸಾವನ್ನಪ್ಪಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಅವರು ತಿಳಿಸಿದ್ದಾರೆ. ಇಂದು ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದರೆ 2207...
ದಕ್ಷಿಣ ಕನ್ನಡರಾಜಕೀಯರಾಜ್ಯ

‘ಕಾಮಾಲೆ ಕಣ್ಣಿಗೆ ಜಗತ್ತೆಲ್ಲ ಹಳದಿಯಾಗಿ ಕಾಣುವಂತೆ ಕಾಂಗ್ರೆಸ್ಸಿಗರಿಗೆ ಎಲ್ಲರೂ ಭ್ರಷ್ಟಾಚಾರಿಗಳಂತೆ ಕಾಣುತ್ತಾರೆ’ ; ಸಿದ್ದರಾಮಯ್ಯ ವಿರುದ್ಧ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್ ವ್ಯಂಗ್ಯ – ಕಹಳೆ ನ್ಯೂಸ್

ಬೆಂಗಳೂರು‌, ಜು 23 : ಕಾಮಾಲೆ ಕಣ್ಣಿನವರಿಗೆ ಜಗತ್ತೆಲ್ಲ ಹಳದಿಯಾಗಿ ಕಾಣುವಂತೆ ಕಾಂಗ್ರೆಸ್ಸಿಗರಿಗೆ ಎಲ್ಲರೂ ಭ್ರಷ್ಟಾಚಾರಿಗಳಂತೆ ಕಾಣುತ್ತಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್ ಅವರು ವ್ಯಂಗ್ಯ ಮಾಡಿದ್ದಾರೆ.   ಈ ಬಗ್ಗೆ ಸರಣಿ ಟ್ವೀಟ್‌ ಮಾಡಿರುವ ಅವರು, ಜವಾಬ್ದಾರಿಯುತ ಸ್ಥಾನದಲ್ಲಿರುವ ಸಿದ್ದರಾಮಯ್ಯ ಅವರು ಸರ್ಕಾರದ ವಿರುದ್ಧ ಆರೋಪ ಮಾಡುವಾಗ ಸರಿಯಾದ ದಾಖಲೆ ಕೊಡಬೇಕಿತ್ತು. ಅವರು ಹೇಳಿರುವಷ್ಟು ಪ್ರಮಾಣದ ವೈದ್ಯಕೀಯ ಪರಿಕರಗಳ ಖರೀದಿಯೇ ಆಗಿಲ್ಲ. ಅಗತ್ಯಕ್ಕೆ ತಕ್ಕ ಖರೀದಿ...
ರಾಜ್ಯಸುದ್ದಿ

ಅಂತರ್‌ಜಿಲ್ಲಾ ಜಾನುವಾರು ಕಳ್ಳರನ್ನು ಬಂಧಿಸಿದ ದಕ್ಷ ಅಧಿಕಾರಿ – ಕಹಳೆ ನ್ಯೂಸ್

ದಾವಣಗೆರೆ: ವಿವಿಧ ಜಿಲ್ಲೆಗಳಲ್ಲಿ ಜಾನುವಾರು ಕಳವು ಮಾಡುತ್ತಿದ್ದ ಆರೋಪದಲ್ಲಿ ಮೂವರನ್ನು ಬಂಧಿಸಿರುವ ಪೊಲೀಸರು ಏಳು ಜಾನುವಾರು. ಒಂದು ಮಿನಿ ಲಾರಿಯನ್ನು ವಶಪಡಿಸಿಕೊಂಡಿದ್ದಾರೆ. ತಾಲ್ಲೂಕಿನ ದೊಡ್ಡಮಾಗಡಿ ಗ್ರಾಮದ ವಿನೋದ್‌ರಾಜ್‌ (29), ಬಳ್ಳಾರಿ ಜಿಲ್ಲೆ ಹರಪನಹಳ್ಳಿಯ ಮಡಕಿ ನಿಚ್ಚಾಪುರ ತಾಂಡಾದ ಪ್ರವೀಣ್‌ನಾಯ್ಕ (24), ಉಮೇಶನಾಯ್ಕ (24) ಬಂಧಿತ ಆರೋಪಿಗಳು ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹನುಮಂತರಾಯ ಬುಧವಾರ ಮಾಹಿತಿ ನೀಡಿದರು.   ಕಾಟಿಹಳ್ಳಿ ತಾಂಡಾದ ಮಂಜನಾಯ್ಕ ಅವರ ಎರಡು ಹಸುಗಳು ಜುಲೈ 17ರಂದು ಮನೆ...
1 149 150 151 152 153 154
Page 151 of 154