Recent Posts

Sunday, January 19, 2025

ರಾಜ್ಯ

ರಾಜ್ಯ

ದೆಹಲಿ ವರಿಷ್ಠರಿಗೆ ಎಚ್ಚರಿಕೆಯ ಸಂದೇಶ ರವಾನಿಸಿದ ಸಿಎಂ ಬಿಎಸ್‍ವೈ..! -ಕಹಳೆ ನ್ಯೂಸ್

ಬೆಂಗಳೂರು- ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರುಗಳ ದಿಢೀರ್ ಭೇಟಿ ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಸೃಷ್ಟಿಸಿದ್ದು, ದೆಹಲಿ ವರಿಷ್ಠರಿಗೆ ಎಚ್ಚರಿಕೆಯ ಸಂದೇಶ ರವಾನೆಯಾಗಿದೆ ಎನ್ನಲಾಗುತ್ತಿದೆ. ಬಿ.ಎಸ್.ಯಡಿಯೂರಪ್ಪ ನಾಯಕತ್ವವನ್ನು ಬದಲಾವಣೆ ಮಾಡಲಾಗುತ್ತದೆ ಎಂಬ ಪುಕಾರು ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ. ಒಂದು ವೇಳೆ ನನ್ನ ತೀರ್ಮಾನಕ್ಕೆ ವಿರುದ್ದವಾಗಿ ನಾಯಕತ್ವ ಬದಲಾವಣೆ ಮಾಡುವಂತಹ ದುಸ್ಸಾಹಕ್ಕೆ ಕೈ ಹಾಕಿದರೆ ತಮ್ಮ ಮುಂದಿನ ದಾರಿ ಏನಾಗಿರುತ್ತದೆ ಎಂಬ ಮುನ್ಸೂಚನೆಯನ್ನು ದೆಹಲಿ ನಾಯಕರಿಗೆ ಮುಟ್ಟಿಸಿದ್ದಾರೆ...
ರಾಜ್ಯ

ರಾಜ್ಯ ಸರ್ಕಾರದಿಂದ ಇಂದಿನಿಂದ ‘ಗ್ರೀನ್ ಪಟಾಕಿ ಮಾರಾಟ’ಕ್ಕೆ ಅನುಮತಿ – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ ಕೊರೋನಾ ರೋಗಿಗಳ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಕಾರಣದಿಂದಾಗಿ ಪಟಾಕಿಯನ್ನು ನಿಷೇಧಿಸಿತ್ತು. ಆದ್ರೇ ಹಸಿರು ಪಟಾಕಿ ಹೊಡೆದು, ದೀಪಾವಳಿ ಹಬ್ಬ ಆಚರಣೆಗೆ ಅನುಮತಿಸಿತ್ತು. ಇಂತಹ ಹಸಿರು ಪಟಾಕಿ ಮಾರಾಟಕ್ಕೆ ಇಂದಿನಿಂದ ರಾಜ್ಯ ಸರ್ಕಾರ ಅನುಮತಿ ನೀಡಿದೆ. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಹಸಿರು ಪಟಾಕಿ ಮಾರಾಟ ಹಾಗೂ ಮಾರಾಟಕ್ಕೆ ಲೈಸೆನ್ಸ್ ಪಡೆಯೋದಕ್ಕೆ ಇಂದಿನಿಂದ ಆರಂಭವಾಗಲಿದೆ. ಈ ಕುರಿತಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಹಸಿರು ಪಟಾಕಿ ಮಾರಾಟಕ್ಕೆ...
ರಾಜ್ಯಶಿಕ್ಷಣ

ಶಾಲೆ ಆರಂಭದ ಬಗ್ಗೆ ಇಂದು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ :ಯಡಿಯೂರಪ್ಪ – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ ಶಾಲೆ ಆರಂಭದ ಬಗ್ಗೆ ಕುರಿತಂತೆ ಇಂದು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸುತ್ತೇವೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ಸಚಿವ ಸಂಪುಟ ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಿಎಸ್ ವೈ, ರಾಜ್ಯದಲ್ಲಿ ಶಾಲೆ ಆರಂಭದ ಕುರಿತಂತೆ ಇಂದು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸುತ್ತೇವೆ. ಸಚಿವರ ಸಮ್ಮುಖದಲ್ಲಿ ಶಾಲೆ ಆರಂಭದ ಕುರಿತಂತೆ ಚರ್ಚೆ ನಡೆಸುತ್ತೇವೆ. ಸಚಿವರ ಅಭಿಪ್ರಾಯ ಸಂಗ್ರಹಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು...
ರಾಜಕೀಯರಾಜ್ಯ

ಬಿಜೆಪಿಯಲ್ಲಿ ತೀವ್ರವಾಗಿದೆ ಸಂಪುಟ ಪುನರ್ರಚನೆ, ವಿಸ್ತರಣೆ ಚರ್ಚೆ – ಕಹಳೆ ನ್ಯೂಸ್

ಬೆಂಗಳೂರು: ಕಳೆದ ಸೆಪ್ಟೆಂಬರ್ ನಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸಂಪುಟ ವಿಸ್ತರಣೆ ಕುರಿತು ಹೈಕಮಾಂಡ್ ನೊಂದಿಗೆ ಚರ್ಚಿಸಲು ದೆಹಲಿಗೆ ಹೋಗಿದ್ದಾಗ ಚರ್ಚೆ ನಡೆಸಿ ಬಂದಿದ್ದರಷ್ಟೆ, ಅಂತಿಮ ಒಪ್ಪಿಗೆ ಸಿಕ್ಕಿರಲಿಲ್ಲ. ನಂತರ ಬಿಹಾರ ಚುನಾವಣೆ, ನಮ್ಮ ರಾಜ್ಯದ ಎರಡು ಕ್ಷೇತ್ರಗಳಲ್ಲಿ ಉಪ ಚುನಾವಣೆಗಳು ಬಂದವು. ಇದೀಗ ಸಂಪುಟ ವಿಸ್ತರಣೆ ಬಗ್ಗೆ ಏನು ತೀರ್ಮಾನ ಕೈಗೊಳ್ಳುತ್ತದೆ ಹೈಕಮಾಂಡ್ ಎಂಬುದು ಕುತೂಹಲ. ನಾಳೆ ಬಿಹಾರ ಮತ್ತು ಉಪ ಚುನಾವಣೆಗಳ ಫಲಿತಾಂಶ ಪ್ರಕಟವಾಗಲಿದೆ. ಸಂಪುಟ...
ರಾಜ್ಯ

ರಾಜ್ಯದಲ್ಲಿ ಶಾಲೆಗಳ ಆರಂಭದ ಬಗ್ಗೆ ನಾಳೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡುವ ಸಾಧ್ಯತೆಯಿದೆ -ಕಹಳೆ ನ್ಯೂಸ್

ಬೆಂಗಳೂರು: ಡಿಸೆಂಬರ್ 2ನೇ ವಾರದಿಂದ ಶಾಲೆಗಳನ್ನು ಪುನರಾರಂಭಿಸುವ ಬಗ್ಗೆ ನಿರ್ಧಾರ ಪ್ರಕಟಿಸಲಿದೆ ಎಂದು ತಿಳಿದುಬಂದಿದೆ. ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಅನ್ಬುಕುಮಾರ್ ಈಗಾಗಲೇ ಸರಣಿ ಸಭೆಗಳನ್ನು ನಡೆಸಿದ್ದು, ಶಿಕ್ಷಣ ಇಲಾಖೆ ಅಧಿಕಾರಿಗಳು, ಆರೋಗ್ಯ ಇಲಾಖೆ ಅಧಿಕಾರಿಗಳು, ಖಾಸಗಿ ಶಾಲೆ, ಬಿಬಿಎಂಪಿ, ಎಸ್ ಡಿಎಂಸಿ ಅಧ್ಯಕ್ಷರು, ಪೋಷಕರು ಹೀಗೆ ಎಲ್ಲರೊಂದಿಗೂ ಚರ್ಚಿಸಿ ಅಭಿಪ್ರಾಯ ಸಂಗ್ರಹಿಸಿ ಶಾಲೆ ಆರಂಭದ ಬಗ್ಗೆ ವರದಿ ಸಿದ್ಧಪಡಿಸಿದ್ದಾರೆ. ಆರಂಭದಲ್ಲಿ ಪ್ರೌಢ ಶಿಕ್ಷಣ ಶಾಲೆಗಳನ್ನು ಆರಂಭಿಸುವ ಬಗ್ಗೆ ಸಮ್ಮತಿ...
ರಾಜ್ಯ

ವಿದ್ಯುತ್ ದರ ಏರಿಕೆ ತಕ್ಷಣದಿಂದಲೇ ಕೈಬಿಡಬೇಕು- ಡಿಕೆ ಶಿವಕುಮಾರ್ -ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಸೋಂಕಿನಿಂದಾಗಿ ಲಾಕ್ ಡೌನ್ ಜಾರಿಯಾದ ನಂತ್ರ, ಜನರಿಗೆ ದುಡಿಮೆ ಇಲ್ಲದೇ ಸಂಕಷ್ಟಕ್ಕೆ ಸಿಲುಕಿದ್ದಾರೆ. ದುಡಿಯುವ ಕೈಗಳಿಗೆ ಕೆಲಸ ಇಲ್ಲದಂತಾಗಿದೆ. ಇಂತಹ ಸಂದರ್ಭದಲ್ಲಿ ರಾಜ್ಯದ ಆರ್ಥಿಕ ಸ್ಥಿತಿ ಸುಧಾರಿಸುವವರೆಗೆ ವಿದ್ಯುತ್ ದರ ಏರಿಕೆ ಕೈಬಿಡಬೇಕು ಹಾಗೂ ತಕ್ಷಣದಿಂದಲೇ ಇದು ಜಾರಿಗೆ ಬರಬೇಕೆಂದು ಸಿಎಂ ಯಡಿಯೂರಪ್ಪ ಅವರಿಗೆ ಪತ್ರ ಬರೆದು, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆಗ್ರಹಿಸಿದ್ದಾರೆ. ಈ ಕುರಿತಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಪತ್ರ...
ರಾಜ್ಯ

ಪಟಾಕಿ ನಿಷೇಧ ವಿರೋಧಿಸಿ ಪಟಾಕಿ ಸುಡುವ ಮೂಲಕ ಪ್ರತಿಭಟಿಸಿದ ವಾಟಾಳ್ – ಕಹಳೆ ನ್ಯೂಸ್

ಬೆಂಗಳೂರು- ದೀಪಾವಳಿ ಹಬ್ಬದಲ್ಲಿ ಪಟಾಕಿ ನಿಷೇಧ ಮಾಡಿರುವ ಕ್ರಮ ಸಂಪ್ರದಾಯಕ್ಕೆ ಮಾಡಿರುವ ಅಪಚಾರ ಎಂದು ಆರೋಪಿಸಿರುವ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು, ಇಂದು ಪಟಾಕಿ ಸುಡುವ ಮೂಲಕ ಸರ್ಕಾರದ ಕ್ರಮ ವಿರೋಧಿಸಿ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪಟಾಕಿ ಹಚ್ಚುವುದರಿಂದ ಕೊರೊನಾ ಬರುತ್ತದೆ ಎಂಬ ಸರ್ಕಾರದ ಹೇಳಿಕೆ ಅತ್ಯಂತ ಅವೈಜ್ಞಾನಿಕವಾಗಿದೆ. ಕೊರೊನಾ ಸಾಂಕ್ರಾಮಿಕ ರೋಗ ಪಟಾಕಿಯಿಂದ ಬರುತ್ತದೆ ಎಂದು ಎಲ್ಲೂ ಸಾಬೀತಾಗಿಲ್ಲ....
ರಾಜ್ಯ

ರಾಜೀನಾಮೆ ಸ್ವೀಕಾರಗೊಂಡ ಬೆನ್ನಲ್ಲೇ ದೆಹಲಿಯತ್ತ ಪಯಣ ಬೆಳೆಸಿದ ಸಿ.ಟಿ ರವಿ -ಕಹಳೆ ನ್ಯೂಸ್

ಬೆಂಗಳೂರು: ತಮ್ಮ ರಾಜೀನಾಮೆ ಸ್ವೀಕಾರಗೊಂಡ ಬೆನ್ನಲ್ಲೇ ಸಚಿವ ಸಿ.ಟಿ ರವಿ ದೆಹಲಿಯತ್ತ ದೌಡಾಯಿಸಿದ್ದಾರೆ. ಪಕ್ಷದ ಚಟುವಟಿಕೆಗಳಲ್ಲಿ ಪೂರ್ತಿಯಾಗಿ ತೊಡಗಿಸಿಕೊಳ್ಳುವ ಸಲುವಾಗಿ ವರಿಷ್ಠರನ್ನು ಭೇಟಿ ಮಾಡಿ ಚರ್ಚೆ ನಡೆಸಲಿದ್ದಾರೆ. ಪ್ರವಾಸೋದ್ಯಮ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರಾಗಿದ್ದ ಸಿ.ಟಿ ರವಿಗೆ ಪಕ್ಷ ಇತ್ತೀಚೆಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆ ನೀಡಿತ್ತು. ಅಷ್ಟೇ ಅಲ್ಲದೆ ಐದು ರಾಜ್ಯಗಳ ಉಸ್ತುವಾರಿಯನ್ನು ನೀಡಿದೆ. ಪಕ್ಷ ಸಂಘಟನೆಯ ಹಿನ್ನೆಲೆಯಲ್ಲಿ ಇದು ಮಹತ್ವದ ಜವಾಬ್ದಾರಿಯಾಗಿದೆ. ಈ ಹಿನ್ನೆಲೆಯಲ್ಲಿ...
1 151 152 153 154 155 165
Page 153 of 165