Tuesday, January 21, 2025

ರಾಜ್ಯ

ದಕ್ಷಿಣ ಕನ್ನಡಮಂಗಳೂರುರಾಜಕೀಯರಾಜ್ಯಸುದ್ದಿ

ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಚುನಾವಣಾ ಕಚೇರಿಯಲ್ಲಿ ಅರುಣ್ ಕುಮಾರ್ ಪುತ್ತಿಲ ಸ್ವಾಗತ ; ಯಾವುದೇ ಹುದ್ದೆಯ ಅಪೇಕ್ಷೆ ಇಲ್ಲ – ಬೇಷರತ್ತಾಗಿ ಬಿಜೆಪಿಗೆ ಬೆಂಬಲ ಎಂದ ಪುತ್ತಿಲ – ಕಹಳೆ ನ್ಯೂಸ್

ಮಂಗಳೂರು : ಬಿಜೆಪಿಗೆ ಬಂಡಾಯವಾಗಿದ್ದ ಅರುಣ್ ಕುಮಾರ್ ಪುತ್ತಿಲ ಅವರು ಬಿಜೆಪಿ ಬೇಜರತ್ತಾಗಿ ಇಂದು ಬೆಂಬಲ ಸೂಚಿಸಿದ್ದಾರೆ. ಪುತ್ತಿಲ ಪರಿವಾರವನ್ನೂ ವಿಸರ್ಜನೆ ಮಾಡಿದ ಬಗ್ಗೆ ಅಧಿಕೃತ ಮೂಲಗಳು ಮಾಹಿತಿ ನೀಡಿದೆ. ಪುತ್ತಿಲ ಬಿಜೆಪಿ ಸೇರ್ಪಡೆ ಬಹುದೊಡ್ಡ ಗೊಂದಲವಾಗಿತ್ತು. ಇದೀಗ ಮಂಗಳೂರಿನಲ್ಲಿ ಯಾವುದೇ ಸ್ಥನಮಾನದ ಬೇಡಿಕೆ ಇಲ್ಲದೆ ಬಿಜೆಪಿ ಕಚೇರಿಗೆ ಆಗಮಿಸಿದ ಅರುಣ್ ಕುಮಾರ್ ಪುತ್ತಿಲ ಅವರಿಗೆ ಬಿಜೆಪಿ ಜಿಲ್ಲಾಧ್ಯಕ್ಷರು ಬಿಜೆಪಿ ಶಾಲು ಹಾಕಿ ಸ್ವಾಗತಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ...
ರಾಜ್ಯಸುದ್ದಿ

ನಾಗಪುರದಲ್ಲಿ ಆರಂಭಗೊಂಡ ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತೀಯ ಪ್ರತಿನಿಧಿ ಸಭಾ-2024 – ಕಹಳೆ ನ್ಯೂಸ್

ನಾಗಪುರ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತೀಯ ಪ್ರತಿನಿಧಿ ಸಭಾ-2024 ಇಂದು ನಾಗಪುರದಲ್ಲಿ ಆರಂಭಗೊಂಡಿದೆ. ಸರಸಂಘಚಾಲಕರಾದ ಮಾನನೀಯ ಡಾ. ಮೋಹನ್ ಭಾಗವತ್ ಹಾಗೈ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಅವರ ಉಪಸ್ಥಿತಿಯಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು, ಇದರಲ್ಲಿ ಒಟ್ಟು ಒಂದು ವರ್ಷಗಳ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪೂರ್ಣ ಗತಿವಿಧಿ ಮತ್ತು ಕಾರ್ಯಕ್ರಮಗಳ ಕುರಿತ ಚರ್ಚೆ ನಡೆಯಲಿದೆ....
ಬೆಂಗಳೂರುರಾಜ್ಯವಾಣಿಜ್ಯಸುದ್ದಿ

‘ಪೆಟ್ರೋಲ್, ಡೀಸೆಲ್ ದರ’ ಪ್ರತಿ ಲೀಟರ್ ಗೆ 2 ರೂ ಇಳಿಕೆ – ಕಹಳೆ ನ್ಯೂಸ್

ನವದೆಹಲಿ: ಲೋಕಸಭಾ ಚುನಾವಣಾ ವೇಳಾಪಟ್ಟಿ ಪ್ರಕಟವಾಗುವ ಮುನ್ನ ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಲೀಟರ್ಗೆ 2 ರೂ.ಗಳಷ್ಟು ಕಡಿತಗೊಳಿಸಿದೆ. ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್ಪಿಜಿ) ಮತ್ತು ಸಂಕುಚಿತ ನೈಸರ್ಗಿಕ ಅನಿಲ (ಸಿಎನ್ಜಿ) ಬೆಲೆಗಳಲ್ಲಿ ಇತ್ತೀಚಿನ ಕಡಿತದೊಂದಿಗೆ, ಮುಂಬರುವ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಇಳಿಕೆಯಾಗಬಹುದು ಎಂಬ ಊಹಾಪೋಹಗಳು ಹರಡಿವೆ. ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಅಡುಗೆ ಅನಿಲ...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ : ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಫೋಕ್ಸೋ ಕಾಯ್ದೆಯಡಿ ಎಫ್‍ಐಆರ್ ದಾಖಲು – ಕಹಳೆ ನ್ಯೂಸ್

ಬೆಂಗಳೂರು: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಸಂತ್ರಸ್ತ ಬಾಲಕಿ ನೀಡಿದ ದೂರಿನ ಆಧಾರದ ಮೇಲೆ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಯಡಿಯೂರಪ್ಪ ವಿರುದ್ಧ ಫೋಕ್ಸೋ ಪ್ರಕರಣ ದಾಖಲಾಗಿದೆ. ಫೋಕ್ಸೋಕಾಯ್ದೆ ಸೆಕ್ಷನ್ 8, ಮತ್ತು ಐಪಿಸಿ ಸೆಕ್ಷನ್ 354(ಎ) ಅಡಿ ಪ್ರಕರಣ ದಾಖಲಾಗಿದೆ. ಸಂತ್ರಸ್ತೆ ಗುರುವಾರ(ಮಾ.14) ಸಂಜೆ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಫೆಬ್ರುವರಿ...
ಬೆಂಗಳೂರುರಾಜ್ಯಶಿಕ್ಷಣಸುದ್ದಿ

5, 8 ಮತ್ತು 9ನೇ ತರಗತಿಯ 2023-24ನೇ ಸಾಲಿನಲ್ಲಿ ಪರೀಕ್ಷೆಗಳು ಮುಂದೂಡಿಕೆ : ಶಾಲಾ ಶಿಕ್ಷಣ ಇಲಾಖೆಯಿಂದ ಆದೇಶ – ಕಹಳೆ ನ್ಯೂಸ್

ಬೆಂಗಳೂರು: 2023-24ನೇ ಸಾಲಿನಲ್ಲಿ ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳ 5, 8 ಮತ್ತು 9ನೇ ತರಗತಿಯ ವಿದ್ಯಾರ್ಥಿಗಳಿಗೆ ಸಂಕಲನಾತ್ಮಕ ಮೌಲ್ಯಮಾಪನ-2 (SA-2) ಕಾರ್ಯವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯ ಕೆ.ಎಸ್.ಕ್ಯು.ಎ.ಎ.ಸಿ ವತಿಯಿಂದ ನಡೆಸಲಾಗುತ್ತಿದ್ದು, ಈ ಬೋರ್ಡ್ ಪರೀಕ್ಷೆಯನ್ನು ಹೈಕೋರ್ಟ್ ಏಕಸದಸ್ಯ ಪೀಠವು ರದ್ದುಪಡಿಸಿ ನೀಡಿದ್ದ ತೀರ್ಪಿಗೆ ವಿಭಾಗೀಯ ಪೀಠವು ಮಧ್ಯಂತರ ತಡೆಯಾಜ್ಞೆ ನೀಡಿದ್ದು, ಈಗಾಗಲೇ ಪರೀಕ್ಷೆಗಳು ಆರಂಭಗೊಂಡಿದ್ದವು. ಇದರ ನಡುವೆ ಇದೀಗ...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಮಹತ್ವದ ಸುಳಿವು: ಆಟೋ ಚಾಲಕ ಎನ್‌ಐಎ ವಶಕ್ಕೆ – ಕಹಳೆ ನ್ಯೂಸ್

ಬಳ್ಳಾರಿ: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಹೊಸ ಬಸ್ ನಿಲ್ದಾಣದಲ್ಲೇ ಮಾ.1 ರ ರಾತ್ರಿ 9 ಗಂಟೆ ಸುಮಾರಿಗೆ ಶಂಕಿತ ಓಡಾಡಿದ್ದಾನೆ. ಬಸ್ ನಿಲ್ದಾಣದಲ್ಲಿ ಕೆಲ ಕಾಲ ಓಡಾಡಿರುವ ಶಂಕಿತ ಬಳಿಕ ಆಟೋ ಹತ್ತಿ ಹೋಗಿದ್ದಾನೆ. ಹೀಗಾಗಿ ಆಟೋ ಚಾಲಕನನ್ನು ಎನ್‌ಐಎ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಬಳ್ಳಾರಿ ನಗರದ ರಾಯಲ್ ಸರ್ಕಲ್ ಮುಖಾಂತರ ಕೌಲ ಬಜಾರ್‌ಗೆ ಬಾಂಬರ್ ಹೋಗಿದ್ದಾನೆ. ಲೈಟ್ ಬ್ಲೂ...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ : ಶಂಕಿತ ಉಗ್ರ ಮಿನಾಜ್ ಅಲಿಯಾಸ್ ಸುಲೇಮಾನ್ ನನ್ನು ವಶಕ್ಕೆ ಪಡೆದ ಎನ್‌ಐಎ ಅಧಿಕಾರಿಗಳು – ಕಹಳೆ ನ್ಯೂಸ್

ಬೆಂಗಳೂರು: ತೀವ್ರ ಆತಂಕಕ್ಕೆ ಕಾರಣವಾಗಿದ್ದ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಉಗ್ರನೊಬ್ಬನನ್ನು ವಶಕ್ಕೆ ಪಡೆಯಲಾಗಿದೆ. ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿದ್ದ ಮಿನಾಜ್ ಅಲಿಯಾಸ್ ಸುಲೇಮಾನ್ ಎಂಬಾತನನ್ನು ಎನ್‌ಐಎ ಅಧಿಕಾರಿಗಳು ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ರಾಜ್ಯದಲ್ಲಿ ವಿಧ್ವಂಸಕ ಕೃತ್ಯಗಳಿಗೆ ಸಂಚು ರೂಪಿಸಿದ್ದ ಆರೋಪದಡಿ ಬಳ್ಳಾರಿಯ ಕೌನ್ ಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯ ನಿವಾಸಿಯಾಗಿದ್ದ, ನಿಷೇಧಿತ ಪಿಎಫ್‌ಐ ಸಂಘಟನೆಯ ಸದಸ್ಯ ಮಿನಾಜ್ ಹಾಗೂ ಆತನ ಗುಂಪಿನ ಮತ್ತೋರ್ವ ಸದಸ್ಯ...
ಕಡಬದಕ್ಷಿಣ ಕನ್ನಡರಾಜ್ಯಸುದ್ದಿ

ಚಾಕೊಲೇಟ್ ಎಂದು ಭಾವಿಸಿ ಮಾತ್ರೆ ಸೇವಿಸಿ ಮೃತಪಟ್ಟ ಮಗು-ಕಹಳೆ ನ್ಯೂಸ್

ಚಾಕೋಲೆಟ್ ಎಂದು ಭಾವಿಸಿ ಮಗುವೊಂದು ಮಾತ್ರೆ ಸೇವಿಸಿ ಮೃತಪಟ್ಟಿರುವ ಘಟನೆ ಕಡಬನಕಟ್ಟೆ ಗ್ರಾಮದಲ್ಲಿ ನಡೆದಿದೆ. ಮೃತ ಮಗುವನ್ನು ಋತ್ವಿಕ್ (5) ಎಂದು ಗುರುತಿಸಲಾಗಿದೆ. ತಂದೆ ತಿಪ್ಪೇಸ್ವಾಮಿಗೆ ಅನಾರೋಗ್ಯದ ನಿಮಿತ್ತ ವೈದ್ಯರ ಸಲಹೆಯಂತೆ ಮಾತ್ರೆಗಳನ್ನು ತಂದು ಮನೆಯಲ್ಲಿಟ್ಟಿದ್ದು, ಅದನ್ನು ಮಗು ಚಾಕೋಲೆಟ್ ಎಂದು ಭಾವಿಸಿ ಸೇವಿಸಿದ್ದಾನೆ. ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗೆ ಕೂಡಲೇ ಮಗುವನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ತುರುವನೂರು ಠಾಣೆಯಲ್ಲಿ ಪ್ರಕರಣ...
1 30 31 32 33 34 166
Page 32 of 166