ರೀಲ್ಸ್ ಮಾಡ್ತಾ ಸೋಶಿಯಲ್ ಮೀಡಿಯಾದಲ್ಲಿ ಫುಲ್ ಆಕ್ಟೀವ್ ಆಗಿದ್ದ ಶಿಕ್ಷಕಿ ; ಸಾವಿನ ಸುತ್ತ ಅನುಮಾನಗಳ ಹುತ್ತ! – ಕಹಳೆ ನ್ಯೂಸ್
ಮಂಡ್ಯ: ಪಾಂಡವಪುರ ತಾಲ್ಲೂಕಿನ ಮಾಣಿಕ್ಯಹಳ್ಳಿ ಗ್ರಾಮದ ನಿವಾಸಿಯಾಗಿದ್ದ ಶಿಕ್ಷಕಿ (Teacher) ದೀಪಿಕಾ ಸಾವಿನ ಸುತ್ತ ಹಲವು ಅನುಮಾನಗಳು ಹುಟ್ಟಿಕೊಂಡಿವೆ. ರೀಲ್ಸ್ ಮಾಡಿಕೊಂಡು ಸೋಶಿಯಲ್ ಮೀಡಿಯಾದಲ್ಲಿ (Social Media) ಫುಲ್ ಆಕ್ಟೀವ್ ಆಗಿದ್ದ ಶಿಕ್ಷಕಿ ಇದ್ದಕ್ಕಿದ್ದಂತೆ ಶವವಾಗಿ ಪತ್ತೆಯಾಗಿದ್ದು, ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ. ಅಲ್ಲದೇ ಶಿಕ್ಷಕಿ ಆತ್ಮಹತ್ಯೆ ಮಾಡಿಕೊಂಡಿಲ್ಲ, ಯಾರೋ ದುಷ್ಕರ್ಮಿಗಳು ಕೊಲೆಗೈದು ಮೃತದೇಹ ಹೂತಿಟ್ಟಿದ್ದಾರೆ ಎಂಬುದು ಮೇಲ್ನೋಟಕ್ಕೆ ಕಂಡುಬಂದಿದೆ. ಏನಿದು ಘಟನೆ? ಶಾಲೆಗೆ ಹೋಗಿಬರುತ್ತೇನೆ ಎಂದು ಹೇಳಿಹೋಗಿದ್ದ ಮಹಿಳೆಯೊಬ್ಬರು (Women)...