ಬಿಜೆಪಿ ಚುನಾವಣೆಗೆ ಸನ್ನದ್ಧ – ಬಿಜೆಪಿ ಸರಕಾರದ ಅಭಿವೃದ್ಧಿ ಕಾರ್ಯಗಳು, ರಾಷ್ಟ್ರೀಯ ವಿಚಾರಧಾರೆ ಮತ್ತು ಪಕ್ಷ ಸಂಘಟನೆಯ ಆಧಾರದಲ್ಲಿ ಚುನಾವಣೆ ಎದುರಿಸಲಿದ್ದೇವೆ ; ದ.ಕ. ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ ಎಂ. – ಕಹಳೆ ನ್ಯೂಸ್
ಮಂಗಳೂರು: ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಸಕ್ರಿಯವಾಗಿ ಕೆಲಸ ಮಾಡುತ್ತಿದ್ದು, ಸನ್ನದ್ಧರಾಗಿದ್ದಾರೆ ಎಂದು ದ.ಕ. ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ ಎಂ. ತಿಳಿಸಿದ್ದಾರೆ. ಈಗಾಗಲೇ ಒಂದು ಹಂತದಲ್ಲಿ ಬೂತ್ ಮಟ್ಟದ ಪ್ರಚಾರ ಕಾರ್ಯ ಮುಗಿದಿದೆ. ಎಲ್ಲ ಮೋರ್ಚಾ ಸಭೆಗಳು ಪೂರ್ತಿಯಾಗಿವೆ. ವಿಜಯ ಸಂಕಲ್ಪ ಯಾತ್ರೆಯೂ ಆಗಿದೆ. ಬೂತ್ ಪ್ರಮುಖ್, ಪೇಜ್ ಪ್ರಮುಖ್ ವ್ಯವಸ್ಥೆಗಳು ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತಿವೆ. ಬಿಜೆಪಿ ಸರಕಾರದ ಅಭಿವೃದ್ಧಿ ಕಾರ್ಯಗಳು, ರಾಷ್ಟ್ರೀಯ ವಿಚಾರಧಾರೆ ಮತ್ತು ಪಕ್ಷ ಸಂಘಟನೆಯ...