ಚುನಾವಣಾ ಸಿದ್ಧತೆ : ಇಂದು ಸಂಜೆ 6 ಗಂಟೆಗೆ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಉಪಸ್ಥಿತಿಯಲ್ಲಿ ಬಿಜೆಪಿ ಮಹತ್ವದ ಕೋರ್ ಕಮಿಟಿ ಸಭೆ – ಕಹಳೆ ನ್ಯೂಸ್
ಬೆಂಗಳೂರು: ಚುನಾವಣಾ ಸಿದ್ಧತೆ ದೃಷ್ಟಿಯಿಂದ ಬಿಜೆಪಿಯ ಮಹತ್ವದ ಕೋರ್ ಕಮಿಟಿ ಸಭೆ ಶುಕ್ರವಾರ ನಡೆಯಲಿದ್ದು, ತಂತ್ರಗಾರಿಕೆ ದೃಷ್ಟಿಯಿಂದ ನಡೆಯುವ ರಾಜ್ಯಮಟ್ಟದ ಮೊದಲ ಉನ್ನತ ಹಂತದ ಸಭೆ ಇದಾಗಲಿದೆ. ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ಸಂಜೆ 6 ಗಂಟೆಗೆ ಸಭೆ ಪ್ರಾರಂಭವಾಗಲಿದ್ದು, ಐದು ಪ್ರಮುಖ ವಿಚಾರಗಳ ಬಗ್ಗೆ ನಿರ್ಧಾರ ಪ್ರಕಟವಾಗಲಿದೆ. ಚುನಾವಣೆ ಸಿದ್ಧತೆ, ರಾಜ್ಯದ ನಾಲ್ಕು ದಿಕ್ಕುಗಳಿಂದ ನಡೆಯುವ ರಥಯಾತ್ರೆಯ ದಿನಾಂಕ, ಪಕ್ಷ ಹಾಗೂ ಸರ್ಕಾರದ ಮಟ್ಟದ ಸಮನ್ವಯತೆ, ಬಜೆಟ್‌ನಲ್ಲಿ ಇರಬೇಕಾದ ಪಕ್ಷದ...